ಮಂಗಳೂರು : ಎಂಆರ್‌ಜಿ ಗ್ರೂಪ್ ವತಿಯಿಂದ 635ಕ್ಕೂ ಅಧಿಕ ಕುಟುಂಬಗಳಿಗೆ ಒಂದೂವರೆ ಕೋಟಿ ರೂ.ಗೂ ಅಧಿಕ ಮೊತ್ತದ ಆರ್ಥಿಕ ನೆರವು ವಿತರಣೆ ಕಾರ್ಯಕ್ರಮವು ಗೋಲ್ಡ್ ಫಿಂಚ್ ಸಿಟಿಯಲ್ಲಿಂದು ಜರುಗಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಎಂಆರ್‌ಜಿ ಗ್ರೂಪ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ನನ್ನ ಸಂಪಾ ದನೆಯ ಒಂದು ಭಾಗವನ್ನು ಸಮಾಜದಲ್ಲಿ ಕಷ್ಟ ದಲ್ಲಿರುವವರಿಗೆ ಕಿಂಚಿತ್ ಸೇವೆಯ ಹೆಸರಿನಲ್ಲಿ ನೀಡುವುದರಲ್ಲಿ ತೃಪ್ತಿ ಇದೆ ಎಂದರು.
ಡಾ.ಎಂ.ಮೋಹನ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಸದ ನಳಿನ್ ಕುಮಾರ್ ಕಟೀಲು ಮಾತ ನಾಡಿ ಶುಭ ಹಾರೈಸಿದರು.
ಸಮಾರಂಭದಲ್ಲಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಮಾಜಿ ಶಾಸಕ ಐವನ್ ಡಿಸೋಜ, ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸದಾನಂದ ಶೆಟ್ಟಿ, ಎ.ಜೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಎ.ಜೆ. ಶೆಟ್ಟಿ, ಗಣ್ಯರಾದ ಜಯರಾಜ್ ಹೆಗ್ಡೆ, ಜಯಕರ ಶೆಟ್ಟಿ ಇಂದ್ರಾಳಿ, ಪುರುಷೋತ್ತಮ ಶೆಟ್ಟಿ, ಸುರೇಶ್ ಶೆಟ್ಟಿ, ಗೌರವ ಶೆಟ್ಟಿ, ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಎಸಿಪಿ ಮಹೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಸುರೇಶ್ ಶೆಟ್ಟಿ ಗುರ್ಮೆ ಸ್ವಾಗತಿಸಿದರು.