ಮಂಗಳೂರು: ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಹತ್ಯೆಗೈದು ಬಳಿಕ ಪತ್ನಿಯ ಕೊಲೆಗೆ ಯತ್ನಿಸಿದ್ದ ಅಪರಾಧಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ. ಮುಲ್ಕಿಯ ತತಾಳಿಪಾಡಿ ಗ್ರಾಮದ ಪದ್ಮನೂರು ಶೆಟ್ಟಿಕಾಡು ನಿವಾಸಿ ಹಿತೇಶ್ ಶೆಟ್ಟಿಗಾರ್ ಅಲಿಯಾಸ್ ಹಿತೇಶ್ ಕುಮಾರ್ (43) ಮರಣದಂಡನೆಗೊಳಗಾದ ಅಪರಾಧಿ.
ತಾಳಿಪಾಡಿ ಗ್ರಾಮದ ಪದ್ಮನೂರು ಶೆಟ್ಟಿಕಾಡಿನಲ್ಲಿ 2022 ಜೂನ್ 23ರಂದು ಸಂಜೆ ಆರೋಪಿ ಹಿತೇಶ್ ಶೆಟ್ಟಿಗಾರ್ (36) ಕುಡಿದು ಬಂದು ಪತ್ನಿ ಜೊತೆಗೆ ಜಗಳವಾಡುತ್ತಿದ್ದ ಪತಿ ಹಿತೇಶ್, ಅದೇ ದ್ವೇಷದಲ್ಲಿ ಆಗಷ್ಟೆ ಶಾಲೆಯಿಂದ ಮನೆಗೆ ಬಂದಿದ್ದ ಮಕ್ಕಳಾದ ರಶ್ಮಿತಾ (13), ಉದಯ ಕುಮಾರ್ (11), ದಕ್ಷಿತ್ (5) ಅವರನ್ನು ಬಾವಿಗೆ ದೂಡಿ ಹಾಕಿದ್ದಾನೆ. ಈ ವೇಳೆ, ದೊಡ್ಡ ಮಗಳು ರಶ್ಮಿತಾ ಬಾವಿಗೆ ಅಳವಡಿಸಿದ್ದ ಪಂಪಿನ ಪೈಪ್ ನಲ್ಲಿ ನೇತಾಡಿ ಜೀವ ರಕ್ಷಿಸಲು ಪ್ರಯತ್ನ ಪಟ್ಟಿದ್ದಾಳೆ. ಆದರೆ ಪೈಪನ್ನು ಕತ್ತಿಯಿಂದ ಕಡಿದು ಆಕೆಯನ್ನು ನೀರಿಗೆ ಬೀಳುವಂತೆ ಮಾಡಿ ಅಮಾನುಷ ಕೃತ್ಯ ಎಸಗಿದ್ದ.
ಆಬಳಿಕ ಹೊಟೇಲ್ ಕೆಲಸ ಮುಗಿಸಿ ಸಂಜೆ ಮನೆಗೆ ಬಂದ ಪತ್ನಿ ಲಕ್ಷ್ಮೀಯನ್ನೂ ಆರೋಪಿ ಹಿತೇಶ್ ಬಾವಿಗೆ ದೂಡಲು ಯತ್ನಿಸಿದ್ದಾನೆ. ಈ ವೇಳೆ, ಆಕೆ ಬೊಬ್ಬೆ ಹಾಕಿದ್ದು ಸ್ಥಳಕ್ಕೆ ಓಡಿ ಬಂದ ಹೂವಿನ ವ್ಯಾಪಾರಿ ಬಾವಿಯಿಂದ ರಕ್ಷಣೆ ಮಾಡಿದ್ದಾರೆ. ಅಲ್ಲದೆ, ತನ್ನ ಪತಿ ಮಾಡಿದ ಕೃತ್ಯದ ಬಗ್ಗೆ ಪತ್ನಿ ಲಕ್ಷ್ಮೀ ಮುಲ್ಕಿ ಪೊಲೀಸರಿಗೆ ದೂರು ನೀಡಿದ್ದು ಆರೋಪಿಯನ್ನು ಬಂಧಿಸಿದ್ದರು.
ಆರೋಪಿಯ ವಿರುದ್ಧ ಮಂಗಳೂರು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮುಲ್ಕಿ ಪೊಲೀಸ್ ಠಾಣೆಯ ನಿರೀಕ್ಷಕರಾದ ಕುಸುಮಾಧರ್ ಕೆ. ಅವರು ತನಿಖೆ ಪೂರ್ಣಗೊಳಿಸಿ ಆರೋಪಿ ವಿರುದ್ಧ ಕಲಂ 302, 307 ಐಪಿಸಿ ಅಡಿಯಲ್ಲಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
Discover more from Coastal Times Kannada
Subscribe to get the latest posts sent to your email.








Discussion about this post