ನವದೆಹಲಿ: ಡಿಜಿಟಲ್ ಕರೆನ್ಸಿಯ ಸಿಂಧುತ್ವಕ್ಕೆ ಸಂಬಂಧಿಸಿದಂತೆ ಈ ವರೆಗೂ ಇದ್ದ ಗೊಂದಲಗಳಿಗೆ ಫೆ.1 ರಂದು ಮಂಡನೆಯಾದ 2022-23 ನೇ ಸಾಲಿನ ಬಜೆಟ್ ನಲ್ಲಿ ಸ್ಪಷ್ಟತೆ ಸಿಕ್ಕಿದೆ.
ಬಜೆಟ್ ಮಂಡಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಡಿಜಿಟಲ್ ಕರೆನ್ಸಿಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. 2022 ರಲ್ಲೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿಐ) “ಡಿಜಿಟಲ್ ರುಪೀ” ಪರಿಚಯಿಸಲಿದೆ ಎಂದು ತಿಳಿಸಿದ್ದಾರೆ.
“ಬ್ಲಾಕ್ ಚೈನ್ ತಂತ್ರಜ್ಞಾನವನ್ನು ಆಧರಿಸಿ ಆರ್ ಬಿಐ ಡಿಜಿಟಲ್ ಕರೆನ್ಸಿಯನ್ನು 2022-23 ಆರ್ಥಿಕ ವರ್ಷದಲ್ಲೇ ಪರಿಚಯಿಸಲಿದೆ” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಇದೇ ವೇಳೆ ಡಿಜಿಟಲ್ ಆಸ್ತಿ ಅಂದರೆ ಡಿಜಿಟಲ್ ಕರೆನ್ಸಿ ಅಥವಾ ಕ್ರಿಪ್ಟೋ ಕರೆನ್ಸಿ ವರ್ಗಾವಣೆ, ವರ್ಚ್ಯುಯಲ್ ಅಸೆಟ್ ಮೇಲೆ ಶೇ.1 ರಷ್ಟು ಟಿಡಿಎಸ್ ಹಾಗೂ ಡಿಜಿಟಲ್ ಕರೆನ್ಸಿ ವರ್ಗಾವಣೆ, ಆದಾಯದ ಮೇಲೆ ಮೇಲೆ ಶೇ.30 ರಷ್ಟು ತೆರಿಗೆ ವಿಧಿಸಲಾಗುವುದು ಎಂದು ನಿರ್ಮಲಾ ಸೀತಾರಾಮಾನ್ ತಿಳಿಸಿದ್ದಾರೆ. ಡಿಜಿಟಲ್ ಕರೆನ್ಸಿಗೆ ಸಂಬಂಧಿಸಿದಂತೆ ಆದಾಯ ಯಾವುದೇ ಹೊಂದಾಣಿಕೆಗೆ ಅವಕಾಶ ಇಲ್ಲ. ವರ್ಚುವಲ್ ಡಿಜಿಟಲ್ ಅಸೆಟ್ (ಕ್ರಿಪ್ಟೋಕರೆನ್ಸಿ ಮಾದರಿಯ) ಕೊಡುಗೆ ಪಡೆಯುವವರೂ ಸಹ ತೆರಿಗೆ ಪಾವತಿ ಮಾಡಬೇಕಾಗುತ್ತದೆ.
ಕೇಂದ್ರೀಯ ಬ್ಯಾಂಕ್‌ನ ಡಿಜಿಟಲ್ ಕರೆನ್ಸಿ (ಸಿಬಿಡಿಸಿ) ಪರಿಚಯಿಸಲು ಆರ್‌ಬಿಐ ಹಲವು ಹಂತಗಳ ಯೋಜನೆ ರೂಪಿಸುತ್ತಿರುವುದಾಗಿ ಕಳೆದ ವರ್ಷ ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಾಹಿತಿ ನೀಡಿತ್ತು. ಡಿಜಿಟಲ್ ರೂಪದಲ್ಲಿ ಕರೆನ್ಸಿ ತರಲು ಆರ್‌ಬಿಐ ಕಾಯ್ದೆ, 1934ಕ್ಕೆ ತಿದ್ದುಪಡಿ ತರಲು ಆರ್‌ಬಿಐ ಆಕ್ಟೋಬರ್‌ನಲ್ಲಿ ಪ್ರಸ್ತಾಪ ಮಾಡಿತ್ತು.
Discover more from Coastal Times Kannada
Subscribe to get the latest posts sent to your email.
Discussion about this post