ಕಾಸರಗೋಡು: ಮಾಂಗಾಡ್ ನಿವಾಸಿಯಾದ 59ರ ಹರೆಯದ ವ್ಯಕ್ತಿಯನ್ನು ಹನಿಟ್ರಾಪ್‌ನಲ್ಲಿ ಸಿಲುಕಿಸಿ 5 ಲಕ್ಷ ರೂಪಾಯಿ ಲಪಟಾಯಿಸಿದ ಪ್ರಕರಣದಲ್ಲಿ ಸೆರೆಗೀಡಾದ ಇಬ್ಬರು ಯುವತಿಯರ ಸಹಿತ ಏಳು ಮಂದಿಯನ್ನು ಹೆಚ್ಚಿನ ತನಿಖೆಗೊಳಪಡಿಸಲು ಪೊಲೀಸರು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳನ್ನು ಕನ್ನಡಿಗೆ ತೆಗೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಪೊಲೀಸರು ನಿರ್ಧರಿಸಿದ್ದಾರೆ.
ಕಲ್ಲಿಕೋಟೆ ಪೆರುಮಣ್ಣ ನಿವಾಸಿ ಪಿ. ಫೈಸಲ್ (37), ಪತ್ನಿ ಕುಟ್ಟಿಕಾ ಟೂರ್ ನಿವಾಸಿ ಎಂ.ಪಿ. ಲುಬ್ಬಾ (29), ಕಾಸರಗೋಡು ಶಿರಿಬಾಗಿಲು ನಿವಾಸಿ ಎನ್. ಸಿದ್ದಿಕ್ (48), ಮಾಂಗಾಡ್‌ನ ದಿಲ್‌ಶಾದ್, (40), ಮುಟ್ಟತ್ತೋಡಿಯ ನಫೀಸತ್ ಮಿಸ್ತ್ರಿಯ (40), ಮಾಂಬಾಡ್‌ನ ಅಬ್ದುಲ್ಲ ಕುಂಞ (32), ಪಡನ್ನಕ್ಕಾಡ್‌ನ ರಫೀಕ್ (42) ಎಂಬಿವರನ್ನು ಹೆಚ್ಚಿನ ತನಿಖೆಗೊಳಪಡಿಸಲು ನಿರ್ಧರಿಸಲಾಗಿದೆ.
ಜನವರಿ 23 ರಂದು ರುಬಿನಾ ಎಂಬಾಕೆ ಮೊಬೈಲ್ ಮೂಲಕ 59 ವರ್ಷದ ವ್ಯಕ್ತಿಯ ಪರಿಚಯ ಮಾಡಿಕೊಂಡಿದ್ದಳು. ಶೈಕ್ಷಣಿಕ ಉದ್ದೇಶಕ್ಕಾಗಿ ಲ್ಯಾಪ್ ಟಾಪ್ ಖರೀದಿಸಿದ್ದು ಅದು ಹಾಳಾಗಿದೆ. ನಿಮ್ಮ ಸಮಾಜ ಸೇವೆ ಬಗ್ಗೆ ತಿಳಿದುಕೊಂಡಿದ್ದೇನೆ. ಅದಕ್ಕಾಗಿ ಸಹಾಯ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಳು. ಅದರಂತೆ ಯುವತಿಯೊಂದಿಗೆ ಕಾಸರಗೋಡಿಗೆ ಆಗಮಿಸಿದ ಅವರು ಲ್ಯಾಪ್ ಟಾಪ್ ರಿಪೇರಿ ಸಾಧ್ಯವಿಲ್ಲ. ಹೊಸ ಲ್ಯಾಪ್ ಟಾಪ್ ಖರೀದಿಸಿ ಕೊಡುವುದಾಗಿ ಹೇಳಿದ್ದರು.
ಲ್ಯಾಪ್‌ಟಾಪ್ ಖರೀದಿಸುವ ನೆಪದಲ್ಲಿ ಆರೋಪಿ ಯುವತಿ ರುಬಿನಾ ಮಂಗಳೂರಿಗೆ ಬಂದಿದ್ದಳು. ಈ ವೇಳೆ, ಆ ವ್ಯಕ್ತಿಯೊಂದಿಗೆ ಸಲುಗೆಯಲ್ಲಿದ್ದ ವಸತಿ ಗೃಹವೊಂದಕ್ಕೆ ತೆರಳಿದ್ದರು. ಅಷ್ಟರಲ್ಲಿ ರುಬಿನಾ ಪತಿ ಸೇರಿದಂತೆ ಐದಾರು ಮಂದಿಯ ತಂಡ ಎಂಟ್ರಿಯಾಗಿದ್ದು ಬಲವಂತದಿಂದ ನಗ್ನ ಫೋಟೊ ತೆಗೆದುಕೊಂಡಿದ್ದಾರೆ. ಬಳಿಕ ಆರೋಪಿಗಳು ಆ ವ್ಯಕ್ತಿಯನ್ನು ಕಾಸರಗೋಡಿಗೆ ಕರೆದೊಯ್ದು ಕೂಡಿಹಾಕಿ ಬೆದರಿಸಿ 5 ಲಕ್ಷ ಸುಲಿಗೆ ಮಾಡಿದ್ದಾರೆ. ಎನ್ನಲಾಗುತ್ತಿದೆ. ಇದರಿಂದ 10 ಸಾವಿರ ರೂಪಾಯಿ ಗೂಗಲ್ ಪೇ ಮೂಲಕ, 4.90,000 ರೂ. ಮುಂದಿನ ನಗದಾಗಿ ನೀಡುವುದಾಗಿಯೂ ಅನಂತರವೂ ಹಣಕ್ಕಾಗಿ ಬೆದರಿಕೆಯೊಡ್ಡಿದ ಹಿನ್ನೆಲೆಯಲ್ಲಿ ಈ ಬಗ್ಗೆ ಸಂತ್ರಸ್ತ ವ್ಯಕ್ತಿ ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಮೇಲ್ಪರಂಬ ಠಾಣಾ ಎಸ್ ಐ ಸುರೇಶ್ ಮತ್ತು ಅರುಣ್ ಮೋಹನ್ ಹನಿಟ್ರಾಪ್ ತಂಡದ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post