ಮಂಗಳೂರು: ಕಂಬಳದ ಸಮಯ ವ್ಯಯವಾಗದಂತೆ ತಡೆಯಲು ಮತ್ತು ನಿಖರ ಫಲಿತಾಂಶ ನೀಡಲು ಪ್ರಥಮ ಬಾರಿಗೆ ಕಂಬಳ ಕ್ರೀಡೆಗೆ ಸ್ವಯಂ ಚಾಲಿತ ಸಮಯ ಗೇಟ್ ವ್ಯವಸ್ಥೆ ಮತ್ತು ಫೋಟೋ ಫಿನಿಶ್ ಫಲಿತಾಂಶ ಅಳವಡಿಸಲು ದಕ್ಷಿಣಕನ್ನಡ, ಉಡುಪಿ, ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ತೀರ್ಮಾನಿಸಿದೆ.
ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಮಾಹಿತಿ ನೀಡಿ, ಫೆ. 3ರಂದು ನಡೆಯುವ ಐಕಳ ಬಾವ ಕಂಬಳದಲ್ಲಿ ಪ್ರಾಯೋಗಿಕವಾಗಿ ಇದು ಅನ್ವಯವಾಗಲಿದೆ. ಕ್ರಮೇಣ ಇದನ್ನು ಎಲ್ಲ ಕಂಬಳ ಗಳಿಗೂ ಅಳವಡಿಸಿ 2ದಿನ ನಡೆ ಯುತ್ತಿರುವ ಕಂಬಳವನ್ನು 30 ಗಂಟೆಗೆ ಸೀಮಿತಗೊಳಿಸಲಾಗುವುದು ಎಂದರು.
ರೂ. 10 ಲಕ್ಷ ಅದಾನಿ ಫೌಂಡೇಶನ್ ಅನುದಾನದಿಂದ ಇದೇ ಪ್ರಪ್ರಥಮ ಬಾರಿಗೆ ಕಂಬಳ ಕ್ರೀಡೆಗೆ ಸ್ವಯಂಚಾಲಿತ ಸಮಯ ಗೇಟ್ ವ್ಯವಸ್ಥೆ ಮತ್ತು ಫೋಟೋ ಫಿನಿಶ್ ಫಲಿತಾಂಶದ ವ್ಯವಸ್ಥೆಗಳನ್ನು ಅಳವಡಿಸಲಾಗುತ್ತಿದೆ. ಇದರಿಂದಾಗಿ ಕಂಬಳದ ಸಮಯವನ್ನು ಪೋಲಾಗದಂತೆ ಹಾಗೂ ನಿಖರ ಫಲಿತಾಂಶವನ್ನು ತಿಳಿಯಲು ಉಪಯುಕ್ತವಾಗಿದೆ. ಈ ವ್ಯವಸ್ಥೆಯು ದಿನಾಂಕ 03ನೇ ಫೆಬ್ರವರಿ 2024 ರಂದು ನಡೆಯುವ ಐಕಳ ಕಂಬಳದಲ್ಲಿ ಅಳವಡಿಸುವುದರ ಮೂಲಕ ಗ್ರಾಮೀಣ ಕ್ರೀಡೆಗೆ ಆಧುನಿಕ ತಂತ್ರಜ್ಞಾನದ ಮೆರುಗು ನೀಡಿದಂತಾಗುತ್ತದೆ. ಈ ತಂತ್ರಜ್ಞಾನವನ್ನು ಎಲ್ಲಾ ಕಂಬಳ ಕ್ರೀಡೆಗೂ ಅಳವಡಿಸಲಾ ಗುವುದುಎಂದು ಐಕಳ ದೇವಿ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ. ಕಂಬಳ ಭವನ ನಿರ್ಮಾಣ ಸೇರಿದಂತೆ ಪೂರಕ ಕೆಲಸಗಳಿಗೆ ಸಂಬಂಧಿಸಿ ಪಿಲಿಕುಳದಲ್ಲಿ 2 ಎಕ್ರೆ ಜಾಗ ಮೀಸಲಿಡುವಂತೆ ಮತ್ತು ಪಿಲಿಕುಳದಲ್ಲಿ ಕಂಬಳ ಆಯೋಜನೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ ಎಂದರು.
ಚೆಕ್ ಅನ್ನು ಸಮಿತಿಗೆ ಹಸ್ತಾಂ ತರಿಸಿದ ಅದಾನಿ ಸಮೂಹ ಸಂಸ್ಥೆ ಯ ದಕ್ಷಿಣ ಭಾರತ ಅಧ್ಯಕ್ಷ ಕಿಶೋರ್ ಆಳ್ವ, ಕಂಬಳ ವಿಳಂಬ ಆಗುವುದನ್ನು ತಪ್ಪಿಸಲು ಈ ತಂತ್ರಜ್ಞಾನ ಬಳಸಲಾಗುತ್ತಿದೆ ಎಂದರು. ಸಮಿತಿ ಗೌರವಾಧ್ಯಕ್ಷ ರೋಹಿತ್ ಹೆಗ್ಡೆ ಎರ್ಮಾಳು, ಮಾಜಿ ಅಧ್ಯಕ್ಷ ಬಾರ್ಕೂರು ಶಾಂತಾರಾಮ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ, ಕೋಶಾಧಿಕಾರಿ ಚಂದ್ರಹಾಸ್ ಸನಿಲ್, ತೀರ್ಪುಗಾರರ ಸಂಚಾಲಕ ವಿಜಯ ಕುಮಾರ್ ಕಂಗಿನಮನೆ, ಕೋಣಗಳ ಯಜಮಾನರಾದ ಶ್ರೀಕಾಂತ್ ಭಟ್, ಕಂಬಳ ವ್ಯವಸ್ಥಾಪಕ ಚಂದ್ರಹಾಸ್ ಶೆಟ್ಟಿ ಉಪಸ್ಥಿತರಿದ್ದರು.
ತಂತ್ರಜ್ಞಾನದ ನಿರ್ವಹಣೆ ಹೇಗೆ? : ನಿಗದಿ ಪಡಿಸಿದ ಸೀಮಿತ ಅವಧಿಯೊಳಗೆ ಕೋಣ ಬಿಡದಿದ್ದರೆ ಗೇಟ್ ಬೀಳುತ್ತದೆ. ಇದಾದ 100 ಸೆಕೆಂಡಿನಿಂದ 10 ಸೆಕೆಂಡ್‌ವರೆಗೆ ಕೆಂಪು ದೀಪ, 10ರಿಂದ 1 ಸೆಕೆಂಡ್ ವರೆಗೆ ಹಳದಿ ದೀಪ ಬೆಳಗು ತ್ತದೆ. 0 ಬಂದಾಕ್ಷಣ ಹಸಿರು ದೀಪ ಬೆಳಗಿ ಓಟಕ್ಕೆ ಗ್ರೀನ್ ಸಿಗ್ನಲ್ ಬೀಳುತ್ತದೆ. ಈ ಅವಧಿಯಲ್ಲಿ ಕೋಣ ಓಟ ಆರಂಭಿಸಬೇಕು. ಇಲ್ಲದಿದ್ದಲ್ಲಿ ಆ ಕೋಣ ಗಳನ್ನು ಸ್ಪರ್ಧೆಯಿಂದ ಹೊರಗಿಡಲಾಗುವುದು. ಸ್ಪರ್ಧೆಯಲ್ಲಿರುವ ಕೋಣಗಳ ಮುಖ ಸ್ಕ್ಯಾನ್ ಮೇಲೆ ನಿಖರ ಫಲಿತಾಂಶವನ್ನು ಫೋಟೋ ಫಿನಿಶಿಂಗ್ ತಂತ್ರಜ್ಞಾನ ನೀಡಲಿದೆ.
Discover more from Coastal Times Kannada
Subscribe to get the latest posts sent to your email.
Discussion about this post