ಮಂಗಳೂರು, ಮಾ.1 : ಹಣಕ್ಕಾಗಿ ವೃದ್ಧರೊಬ್ಬರನ್ನು ಯುವಕರು ಸೇರಿ ಇರಾ ಬಳಿಯ ನಿರ್ಜನ ಪ್ರದೇಶದಲ್ಲಿ ಹತ್ಯೆಗೈದು ಹೂತಿಟ್ಟ ಪ್ರಕರಣದಲ್ಲಿ ಐವರು ಆರೋಪಿಗಳ ಅಪರಾಧ ನ್ಯಾಯಾಲಯದಲ್ಲಿ ಸಾಬೀತಾಗಿದೆ, ಎಲ್ಲ 5 ಮಂದಿಯೂ ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶ ಬಸಪ್ಪಬಾಳಪ್ಪ ಜಕಾತಿ ಅವರು ಶಿಕ್ಷೆಯ ಪ್ರಮಾಣವನ್ನು ಮಾ.3ರಂದು ನೀಡುವುದಾಗಿ ಪ್ರಕಟಿಸಿದ್ದಾರೆ.
ತೊಕ್ಕೊಟ್ಟು ಬಳಿಯ ಮಲಾರ್ ಗ್ರಾಮದ ಪಲ್ಲಿಯಬ್ಬ ಎಂಬ ವ್ಯಕ್ತಿಯನ್ನು ಹಣಕ್ಕಾಗಿ ಕತ್ತು ಹಿಸುಕಿ ಕೊಲ್ಲಲಾಗಿತ್ತು. ವ್ಯಕ್ತಿ ಕಾಣೆಯಾದ ಬಗ್ಗೆ ಕುಟುಂಬಸ್ಥರು ಪೊಲೀಸ್ ದೂರು ನೀಡಿದ್ದರು. ಪೋಲೀಸರು ತನಿಖೆ ನಡೆಸಿದಾಗ ಕೊಲೆ ಎಂದು ಸಾಬೀತಾಗಿತ್ತು. ಮಲಾರ್ ಅಕ್ಷರ ನಗರ ನಿವಾಸಿ ಹಂಝ ಅಬ್ಬಾಸ್ (44), ಮಲಾರ್ ಅರಸ್ತಾನ ಸೈಟ್ ನಿವಾಸಿ ಅಝರುದ್ದೀನ್ (27), ಸಜಿಪನಡು ಕಂಚಿನಡ್ಕಪದವು ನಿವಾಸಿಗಳಾದ ಅಮೀರ್ ಶೇಖ್ ಯಾನೆ ಅಮ್ಮಿ (26), ಅರ್ಫಾಝ್ ಅಬ್ದುಲ್ ರಝಾಕ್ (20) ಹಾಗೂ ಅಥಾವುಲ್ಲ ಯಾನೆ ಅಲ್ತಾಫ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. .
ಪ್ರಕರಣದ ವಿವರ: ಪಾವೂರು ಗ್ರಾಮದ ಮಲಾರ್‌ನ ಪಳ್ಳಿಯಬ್ಬ ಯಾನೆ ಪಳ್ಳಿಯಾಕ (75)ನಾಪತ್ತೆಯಾದ ಬಗ್ಗೆ 2020ರ ಅ.29ರಂದು ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಅವರ ಮೃತದೇಹವು ಇರಾ ಗ್ರಾಮದ ಪದವು ಬಳಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಹಣದ ವಿಚಾರದಲ್ಲಿ ಇವರನ್ನು ದುಷ್ಕರ್ಮಿಗಳು ಅತ್ಯಂತ ವ್ಯವಸ್ಥಿತವಾಗಿ ಹತ್ಯೆಗೈದು ಹೂತು ಹಾಕಿದ್ದರು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿತ್ತು. ಈ ಬಗ್ಗೆ ಕೊಣಾಜೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.
Discover more from Coastal Times Kannada
Subscribe to get the latest posts sent to your email.








Discussion about this post