ಮಂಗಳೂರು, ಮಾ 01 : ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್(64) ಮಾ.1ರ ಶುಕ್ರವಾರ ಇಂದು ಮುಂಜಾನೆ ನಿಧನರಾಗಿದ್ದಾರೆ.
ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.
ಓರ್ವ ಸಾಹಿತಿಯೂ ಆಗಿದ್ದ ಮನೋಹರ ಪ್ರಸಾದ್ ಅವರು ಕರ್ನಾಟಕ ಕರಾವಳಿ ಇತಿಹಾಸದ ಕುರಿತು 608 ಸಂಶೋಧನ ಲೇಖನಗಳನ್ನು ಬರೆದಿದ್ದ ಅವರಿಗೆ ಕರ್ನಾಟಕ ರಾಜ್ಯೋ ತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ರಾಜ್ಯ ಪ್ರಶಸ್ತಿ, ಕೆನರಾ ಬ್ಯಾಂಕ್ ಅಮೃತೋತ್ಸವ ಪುರಸ್ಕಾರ ಮೊದಲಾದ ಹಲವು ಗೌರವ ಗಳಿಗೆ ಭಾಜನರಾಗಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post