ಬೆಂಗಳೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಪ್ರಯುಕ್ತ ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರು ಗೌರವ ನಮನ ಸಲ್ಲಿಸಿದ್ದಾರೆ. ಬಳಿಕ ರಾತ್ರಿ ಬೆಂಗಳೂರಿಗೆ ಆಗಮಿಸಿ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಸಹ ಭೇಟಿ ಕೊಟ್ಟರು
ಅಕಾಲಿಕ ಮರಣ ಕಂಡ ಕನ್ನಡದ ಯುವರತ್ನ ಡಾ.ಪುನೀತ್ ರಾಜ್‍ಕುಮಾರ್ ನಿವಾಸಕ್ಕೆ ಅವರು ಗತಿಸಿ 5 ತಿಂಗಳು ಕಳೆದ ನಂತರವೂ ಗಣ್ಯರು, ಸೆಲೆಬ್ರಿಟಿಗಳು ಭೇಟಿ ನೀಡುವುದು ಕಡಿಮೆಯಾಗಿಲ್ಲ.
ರಾಜ್ಯ ಭೇಟಿಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಅಪ್ಪು ನಿವಾಸಕ್ಕೆ ಭೇಟಿ ಕೊಟ್ಟು ಅವರ ಪತ್ನಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಅಶ್ವಿನಿ ಪುನೀತ್ ರಾಜ್‍ಕುಮಾರ್ ಮತ್ತು ರಾಘಣ್ಣಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದರು. ಈ ವೇಳೆ ರಾಹುಲ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ವಾಮಿ ಸಾಥ್ ಕೊಟ್ಟಿದ್ದರು.