• About us
  • Contact us
  • Disclaimer
Wednesday, March 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆಸಿಡ್ ದಾಳಿಗೆ ತುತ್ತಾದ ಯುವತಿಯ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸುತ್ತದೆ: ಡಾ ಕೆ.ಸುಧಾಕರ್

Coastal Times by Coastal Times
May 1, 2022
in ಕ್ರೈಮ್ ನ್ಯೂಸ್, ರಾಜ್ಯ
ಆಸಿಡ್ ದಾಳಿಗೆ ತುತ್ತಾದ ಯುವತಿಯ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸುತ್ತದೆ: ಡಾ ಕೆ.ಸುಧಾಕರ್
13
VIEWS
WhatsappTelegramShare on FacebookShare on Twitter

ಬೆಂಗಳೂರು: ತನ್ನ ಪ್ರೀತಿಯ ನಿವೇದನೆಯನ್ನು ನಿರಾಕರಿಸಿದಳು ಎಂದು ಆಕ್ರೋಶದಿಂದ ಯುವಕ ಆಸಿಡ್ ಎರಚಿ (Acid attack) ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ 24 ವರ್ಷದ ಯುವತಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಭರವಸೆ ನೀಡಿದ್ದಾರೆ.

ಎರಡು ದಿನಗಳ ಹಿಂದೆ ಸುಂಕದಕಟ್ಟೆ ಬಳಿ ಕೆಲಸಕ್ಕೆ ಹೊರಟಿದ್ದ ಯುವತಿ ಬಸ್ ನಿಲ್ದಾಣ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ ಬಂದ ಆರೋಪಿ ಯುವಕ ನಾಗೇಶ್ ಯುವತಿ ಮೇಲೆ ಏಕಾಏಕಿ ಆಸಿಡ್ ಎರಚಿ ಪರಾರಿಯಾಗಿದ್ದು ಆತನಿಗಾಗಿ ಬೆಂಗಳೂರು ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಈ ಮಧ್ಯೆ ನಗರದ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯ ಆರೋಗ್ಯ ವಿಚಾರಿಸಲು ಇಂದು ಆರೋಗ್ಯ ಸಚಿವ ಡಾ ಸುಧಾಕರ್ ಭೇಟಿ ನೀಡಿದ್ದರು. ನಂತರ ಹೊರಬಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಸಂತ್ರಸ್ತೆಯ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ವೈಯಕ್ತಿಕವಾಗಿ ನಾನು 5 ಲಕ್ಷ ರೂಪಾಯಿ ಪರಿಹಾರ ನೀಡುತ್ತೇನೆ. ಸಂತ್ರಸ್ತ ಯುವತಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಯುವತಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆಯನ್ನು ಕೂಡ ಆರೋಗ್ಯ ಸಚಿವರು ನೀಡಿದ್ದಾರೆ. 21ನೇ ಶತಮಾನದ ನಾಗರಿಕ ಸಮಾಜದಲ್ಲಿ ಈ ರೀತಿಯ ಹೃದಯ ಕಲಕುವಂತಹ ಘಟನೆ ನಡೆದಿರುವುದು ತಲೆ ತಗ್ಗಿಸುವ ವಿಚಾರ. ಇದು ರಾಕ್ಷಸಿ ಮನೋಭಾವ, ಯುವತಿಗೆ ಬಿಎಂಸಿಯಿಂದ ಚರ್ಮ ಕಸಿ ಮಾಡಲು ಹೇಳಿದ್ದೇವೆ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಆರೋಪಿಯನ್ನು ಶೀಘ್ರವೇ ಬಂಧಿಸಿ ಮುಖ್ಯಮಂತ್ರಿಗಳು ಮತ್ತು ಕಾನೂನು ಸಚಿವರ ಜೊತೆ ಚರ್ಚಿಸಿ ವಿಶೇಷವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕಮಾಡಿ ತ್ವರಿತವಾಗಿ ಆರೋಪಿಗೆ ಶಿಕ್ಷೆಯಾಗುವಂತೆ ಒತ್ತಾಯಿಸುತ್ತೇನೆ, ಇಂತಹ ಕ್ರೌರ್ಯಕ್ಕೆ ತಕ್ಕ ಶಾಸ್ತಿಯಾಗಿ ಸಮಾಜಕ್ಕೆ, ಜನರಿಗೆ ಇದೊಂದು ಪಾಠವಾಗಬೇಕು ಎಂದರು. ಸೈಂಟ್ ಜಾನ್ಸ್ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಪಡೆಯುತ್ತಿರುವ ಯುವತಿ ಬಳಿ ಕರೆದುಕೊಂಡು ಹೋಗಿದ್ದು ಆಕೆಯ ಬಳಿ ಮಾತನಾಡಿ ಧೈರ್ಯ ತುಂಬಿದ್ದೇನೆ. ಸರ್ಕಾರ ಯುವತಿ ಕುಟುಂಬ ಜೊತೆಗಿದೆ. ಮಾನಸಿಕವಾಗಿ ಧೈರ್ಯವಾಗಿರಬೇಕು ಎಂದು ಹೇಳಿದ್ದೇನೆ ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕಲ್ಲಿದ್ದಲು ಕೊರತೆ, ವಿದ್ಯುತ್ ಅಭಾವ ನೀಗಿಸಲು 657 ರೈಲುಗಳ ಸಂಚಾರ ರದ್ದುಗೊಳಿಸಿದ ಕೇಂದ್ರ

Next Post

ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ , ಕೇರಳದ ಮಾಜಿ ಶಾಸಕ ಪಿ. ಸಿ. ಜಾರ್ಜ್ ಬಂಧನ

Related Posts

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ
ಕ್ರೈಮ್ ನ್ಯೂಸ್

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
11
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ
ಕ್ರೈಮ್ ನ್ಯೂಸ್

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
95
Next Post
ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ , ಕೇರಳದ ಮಾಜಿ ಶಾಸಕ ಪಿ. ಸಿ. ಜಾರ್ಜ್ ಬಂಧನ

ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ , ಕೇರಳದ ಮಾಜಿ ಶಾಸಕ ಪಿ. ಸಿ. ಜಾರ್ಜ್ ಬಂಧನ

Discussion about this post

Recent News

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
11
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
95
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d