ಮಂಗಳೂರು: ಬಜ್ಪೆ ಠಾಣಾ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ ಒಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರಿನಲ್ಲಿ ಕೊಚ್ಚಿ ಕೊಲೆ ಮಾಡಿದೆ. ಘಟನೆ ಗುರುವಾರ ರಾತ್ರಿ 8.15 ರ ವೇಳೆಗೆ ನಡೆದಿದೆ.
ಸುರತ್ಕಲ್ ನಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಫಾಜಿಲ್ ಎಂಬ ಯುವಕನ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಕೊಲೆಯಾದವನು. ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಎಂಬಲ್ಲಿ ತಲವಾರು ದಾಳಿ ನಡೆಸಿದ್ದು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಕೊಚ್ಚಿ ಕೊಚ್ಚಿ ಕೊಂದು ಹಾಕಿದ್ದಾರೆ. ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಜಾಲತಾಣದಲ್ಲಿ ವೈರಲ್ ಆಗಿದೆ.
2022ರ ಜುಲೈ 28ರಂದು ಸುರತ್ಕಲ್ ಪೇಟೆಯಲ್ಲಿ ಫಾಜಿಲ್ ಹತ್ಯೆಯಾಗಿತ್ತು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಜಿಲ್ ಹತ್ಯೆ ನಡೆದಿತ್ತು ಎನ್ನಲಾಗಿತ್ತು. ಫಾಜಿಲ್ ಹತ್ಯೆ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿಯನ್ನು ಪ್ರತೀಕಾರ ರೂಪದಲ್ಲಿ ಈಗ ಕೊಲೆ ಮಾಡಲಾಗಿದೆ.
ನಾಲ್ಕೈದು ಜನರು ಮಾರಕಾಯುಧಗಳಿಂದ ದಾಳಿ ನಡೆಸಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಸುಹಾಸ್ ಶೆಟ್ಟಿ ಯನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಕೋಮು ಸೂಕ್ಷ್ಮ ವಿಚಾರವಾಗಿರುವ ಕಾರಣ ನಗರದಲ್ಲಿ ಪೊಲೀಸ್ ಭದ್ರತೆ ಬಿಗಿಗೊಳಿಸಲಾಗಿದೆ. ಆಸ್ಪತ್ರೆಯ ಎದುರು ಭಾರೀ ಸಂಖ್ಯೆಯ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದಾರೆ. ಆಸ್ಪತ್ರೆಗೆ ಬಿಜೆಪಿ ನಾಯಕ , ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಭರತ್ ಶೆಟ್ಟಿ ಆಗಮಿಸಿದ್ದಾರೆ. ಜಿಲ್ಲೆಯ ವಿವಿಧೆಡೆ ನಾಕಾಬಂದಿ ಹಾಕಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post