:ಕಣ್ಣೂರು: ಕೊಚ್ಚಿ: ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದ ಕೊಲ್ಕತ್ತಾದ ಗಗನಸಖಿಯನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ತನ್ನ ಗುದನಾಳದಲ್ಲಿ 1 ಕೆಜಿ ಚಿನ್ನವನ್ನು ಸ್ಮಗ್ಲಿಂಗ್ ಮಾಡುತ್ತಿದ್ದ ಆರೋಪದಲ್ಲಿ ಸುರಭಿ ಖಾತೂನ್ ಎಂಬ ಗಗನಸಖಿಯನ್ನು ಬಂಧಿಸಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯದ ಮೂಲಗಳು ತಿಳಿಸಿವೆ.
ಕೇರಳದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಗಗನಸಖಿಯೊಬ್ಬರು ಚಿನ್ನವನ್ನು ಕಳ್ಳಸಾಗಣೆ ಮಾಡಿ ಗುದನಾಳದಲ್ಲಿ ಬಚ್ಚಿಟ್ಟ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಇಂದು ತಿಳಿಸಿದೆ.
ಗಗನಸಖಿಯನ್ನು ಸುರಭಿ ಖಾತೂನ್ ಎಂದು ಗುರುತಿಸಲಾಗಿದ್ದು, ಆಕೆಯ ಗುದನಾಳದಲ್ಲಿ ಸುಮಾರು 1 ಕೆಜಿ ಚಿನ್ನವನ್ನು ಬಚ್ಚಿಟ್ಟುಕೊಂಡಿರುವುದು ಪತ್ತೆಯಾಗಿದೆ. ಆಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ಮೇ 28ರಂದು ಮಸ್ಕತ್‌ನಿಂದ ಕಣ್ಣೂರಿಗೆ ಬಂದಿಳಿದ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ಸಿಬ್ಬಂದಿಯಾಗಿದ್ದರು.
ಕಣ್ಣೂರು ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ನಂತರ ಸುರಭಿ ಖಾತೂನ್ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು ಮತ್ತು 14 ದಿನಗಳ ಕಸ್ಟಡಿಗೆ ನೀಡಲಾಗಿದೆ.
ವರದಿಗಳ ಪ್ರಕಾರ, ಸುರಭಿ ಖಾತೂನ್ ಈ ಹಿಂದೆ ಕೂಡ ಹಲವು ಬಾರಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದರು ಎಂಬ ಆರೋಪವಿದೆ. ಈ ಬಾರಿ ಮಸ್ಕತ್‌ನಿಂದ ಆಕೆ ಭಾರತಕ್ಕೆ ವಿಮಾನದಲ್ಲಿ ಬರುತ್ತಿದ್ದಾಗ ಯಾರೋ ಈ ಬಗ್ಗೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸುರಭಿ ಖಾತೂನ್ ಅವರನ್ನು ಬಂಧಿಸಲಾಗಿದೆ.
Discover more from Coastal Times Kannada
Subscribe to get the latest posts sent to your email.








Discussion about this post