ಬೆಳ್ತಂಗಡಿ, : ಬೆಳ್ತಂಗಡಿಯ ರೆಂಕೆದಗುತ್ತು ಎಂಬಲ್ಲಿ ನಿರ್ಮಾಣಗೊಂಡಿರುವ ಸಿರಿ ಸಂಸ್ಥೆಯ ಸುಸಜ್ಜಿತ “ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಅನ್ನು ರವಿವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ವರ್ಚುವಲ್ ಮೋಡ್‌ನಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಉಪರಾಷ್ಟ್ರಪತಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ನಡೆಯುತ್ತಿರುವ ಸಿರಿ, ರುಡ್‌ಸೆಟ್ ಸೇರಿದಂತೆ ವಿವಿಧ ಸಂಸ್ಥೆಗಳು ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಹೇಳಿದರು. ಗ್ರಾಮೀಣ ಜನರ ಜೀವನಮಟ್ಟವನ್ನು ಸುಧಾರಿಸುವ ಇಂತಹ ಯೋಜನೆಗಳು ಆತ್ಮನಿರ್ಭರ ಭಾರತದ ನಿರ್ಮಾಣಕ್ಕೆ ಪೂರಕವಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.
ಮಾತೃಶ್ರೀ ಕೈಗಾರಿಕ ಪಾರ್ಕ್ ನಿರ್ಮಾಣ ದೊಂದಿಗೆ “ಸಿರಿ’ ಸಂಸ್ಥೆ ಮೇಲ್ದರ್ಜೆಗೆ ಏರಿರುವುದು ಶ್ಲಾಘನೀಯ. ಸಂಸ್ಥೆಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ನೀಡಿರುವ ಸೌಲಭ್ಯವನ್ನೆಲ್ಲ ನೋಡಿ ಖುಷಿಯಾಗಿದೆ. ಇದೇ ಮೊದಲ ಬಾರಿಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದೇನೆ ಮತ್ತು ಆ ಮೂಲಕ ಕೃತಾರ್ಥನಾಗಿದ್ದೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕೃಷಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆರಂಭವಾದ ಕಾರ್ಯಕ್ರಮಗಳು ಇಂದು ಬಹುಮುಖ ಬೆಳವಣಿಗೆ ಕಂಡು ಲಕ್ಷಾಂತರ ಜನರನ್ನು ತಲುಪುವ ಜನಪರ ಚಳವಳಿಯಾಗಿ ರೂಪುಗೊಂಡಿವೆ ಎಂದರು. ಸಿರಿ ಸಂಸ್ಥೆ ಸಾವಿರಾರು ಕುಟುಂಬಗಳಿಗೆ ಗೌರವಯುತ ಬದುಕನ್ನು ಕಲ್ಪಿಸಿದ್ದು, ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಗೌರವ ಉಪಸ್ಥಿತಿ ವಹಿಸಿದ್ದರು. ಈ ಸಂದರ್ಭದಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ನ ನಾಮಫಲಕವನ್ನು ಲೋಕಪಾರ್ಪಣೆ ಮಾಡಲಾಯಿತು ಹಾಗೂ ಸಿರಿ ಕ್ಯಾಟಲಾಗ್ ಮಾಹಿತಿ ಪುಸ್ತಕವನ್ನು ಬಿಡುಗಡೆ ಗೊಳಿಸಿದರು.
ಕಾರ್ಯಕ್ರಮದಲ್ಲಿ ಸಿರಿ ಉತ್ಪನ್ನಗಳ ರಾಯಭಾರ ನಟ ರಮೇಶ್ ಅರವಿಂದ್, ಬ್ರಿಜೇಶ್ ಚೌಟ, ಪ್ರತಾಪ್ ಸಿಂಹ ನಾಯಕ್, ಹೇಮಾವತಿ ವಿ. ಹೆಗ್ಗಡೆ, ಕೆ. ಎಸ್. ಸೋಮಶೇಖರ್, ಡಿ. ಸುರೇಂದ್ರ ಕುಮಾರ್ ಸೇರಿದಂತೆ ಸಿರಿ ಆಡಳಿತ ಮಂಡಳಿಯ ನಿರ್ದೇಶಕರು, ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ. ಎನ್. ಜನಾರ್ಧನ್ ಸ್ವಾಗತಿಸಿದರು. ಪ್ರೊ. ಶ್ರೀಧರ್ ಭಟ್ ಕಾರ್ಯಕ್ರಮ ನಿರೂಪಿಸಿದರು.
Discover more from Coastal Times Kannada
Subscribe to get the latest posts sent to your email.







Discussion about this post