• About us
  • Contact us
  • Disclaimer
Sunday, June 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೇರಳದ ಸಿಪಿಐ(ಎಂ) ಪ್ರಧಾನ ಕಚೇರಿ ಮೇಲೆ ಸ್ಫೋಟಕ ಎಸೆತ,ಉದ್ವಿಗ್ನ ಪರಿಸ್ಥಿತಿ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

Coastal Times by Coastal Times
July 1, 2022
in ರಾಜಕೀಯ, ರಾಷ್ಟ್ರೀಯ ಸುದ್ದಿ
ಕೇರಳದ ಸಿಪಿಐ(ಎಂ) ಪ್ರಧಾನ ಕಚೇರಿ ಮೇಲೆ ಸ್ಫೋಟಕ ಎಸೆತ,ಉದ್ವಿಗ್ನ ಪರಿಸ್ಥಿತಿ : ದೃಶ್ಯ ಸಿಸಿಟಿವಿಯಲ್ಲಿ ಸೆರೆ
127
VIEWS
WhatsappTelegramShare on FacebookShare on Twitter

ತಿರುವನಂತಪುರಂ: ರಾತ್ರಿ ಆಡಳಿತಾರೂಢ ಸಿಪಿಐ(ಎಂ) ರಾಜ್ಯ ಪ್ರಧಾನ ಕಚೇರಿ (ಎಕೆಜಿ ಸೆಂಟರ್) ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಸ್ಫೋಟಕ ವಸ್ತು ಎಸೆದು ಪರಾರಿಯಾಗಿದ್ದಾನೆ. ಈ ದೃಶ್ಯ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾತ್ರಿ 11.30ರ ಸುಮಾರಿಗೆ ಬೈಕಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ನಗರದ ಹೃದಯಭಾಗದಲ್ಲಿರುವ ಎಕೆಜಿ ಸೆಂಟರ್ ಮೇಲೆ ಸ್ಫೋಟಕ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಸಿಪಿಐ(ಎಂ) ಮುಖಂಡರು ಇದೊಂದು ಬಾಂಬ್ ದಾಳಿ ಎಂದು ಆರೋಪಿಸಿದ್ದಾರೆ. ಎಕೆಜಿ ಸೆಂಟರ್‌ನಲ್ಲಿ ತಂಗಿದ್ದ ಕೆಲ ಸಿಪಿಐ(ಎಂ) ಮುಖಂಡರು ಕಟ್ಟಡದ ಹೊರಗೆ ಭಾರೀ ಸ್ಫೋಟದ ಶಬ್ಧ ಕೇಳಿದ್ದಾಗಿ ಹೇಳಿದ್ದಾರೆ. ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಘಟನಾ ಸ್ಥಳ ಮತ್ತು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಸಹ ತಪಾಸಣೆ ನಡೆಸಿದೆ. ಎಕೆಜಿ ಸೆಂಟರ್‌ನ ಅಧಿಕೃತ ಮಾಧ್ಯಮ ಗುಂಪಿನ ಮೂಲಕ ಸಿಪಿಐ(ಎಂ) ಬಿಡುಗಡೆ ಮಾಡಿದ ಸಿಸಿಟಿವಿ ದೃಶ್ಯಗಳಲ್ಲಿ, ವ್ಯಕ್ತಿಯೊಬ್ಬ ಮೋಟಾರ್ ಬೈಕ್‌ನಲ್ಲಿ ಸ್ಥಳಕ್ಕೆ ಆಗಮಿಸಿ ಕಟ್ಟಡದ ಮೇಲೆ ಸ್ಫೋಟಕ ಎಸೆದು ಸ್ಥಳದಿಂದ ಪರಾರಿಯಾಗುತ್ತಿರುವುದು ಕಂಡುಬಂದಿದೆ. ಸ್ಫೋಟಕ ಎಕೆಜಿ ಕೇಂದ್ರದ ಕಲ್ಲಿನ ಗೋಡೆಗೆ ತಗುಲಿದೆ ಎನ್ನಲಾಗಿದೆ.

ಈ ಪ್ರಚೋದನಕಾರಿ ಕೃತ್ಯದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಆರೋಪಿಸಿರುವ ಸಿಪಿಐ(ಎಂ)ನ ಹಿರಿಯ ನಾಯಕ ಮತ್ತು ಎಲ್‌ಡಿಎಫ್ ಸಂಚಾಲಕ ಇ ಪಿ ಜಯರಾಜನ್, ಸಿಪಿಐ(ಎಂ) ಕಾರ್ಯಕರ್ತರು ಶಾಂತವಾಗಿರುವಂತೆ ಮನವಿ ಮಾಡಿದ್ದಾರೆ. ಆದರೆ, ಪ್ರತಿಪಕ್ಷ ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದೆ.

ಇದೇ ವೇಳೆ, ಹಣಕಾಸು ಸಚಿವ ಕೆ ಎನ್ ಬಾಲಗೋಪಾಲ್, ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಸೇರಿದಂತೆ ಕೇರಳದ ಹಲವು ಸಚಿವರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಿಪಿಐ(ಎಂ)ನ ಹಲವು ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪತ್ತನಂತಿಟ್ಟ ಮತ್ತು ರಾಜ್ಯದ ಇತರ ಸ್ಥಳಗಳಲ್ಲಿಯೂ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಉದ್ವಿಗ್ನ ಪರಿಸ್ಥಿತಿ ನೆಲೆಸಿರುವ ಕಾರಣ, ರಾಜ್ಯದ ಕಾಂಗ್ರೆಸ್ ಕಚೇರಿಗಳ ಸುತ್ತಲೂ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಶಾಂತಿಯುತ ಪ್ರತಿಭಟನೆಗೆ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಕರೆ ನೀಡಿದ್ದಾರೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಉದ್ದೇಶಪೂರ್ವಕವಾಗಿ ಪ್ರಚೋದನೆಯನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದ ಬಾಲಕೃಷ್ಣನ್, ಅವರ ಬಲೆಗೆ ಬೀಳದಂತೆ ಪಕ್ಷದ ಕಾರ್ಯಕರ್ತರನ್ನು ಒತ್ತಾಯಿಸಿದರು. ದಾಳಿ ನಡೆಸಿದ ಆರೋಪಿಯನ್ನು ಪತ್ತೆ ಮಾಡಲು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ತಮ್ಮ ಕ್ಷೇತ್ರ ವಯನಾಡ್‌ಗೆ ಭೇಟಿ ನೀಡುತ್ತಿದ್ದು, ಈ ಮಧ್ಯೆಯೇ ಅಹಿತಕರ ಘಟನೆ ನಡೆದಿದೆ.

https://www.youtube.com/watch?v=YVzZBhQpwxo&t=22s

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕೃಷ್ಣಾಪುರ ಮದ್ರಸ ವಿದ್ಯಾರ್ಥಿ ಮೇಲೆ ಹಲ್ಲೆ ಕೇಸ್​ಗೆ ಟ್ವಿಸ್ಟ್ ​: ಬಾಲಕನ ಕಿತಾಪತಿ ಏನ್​ ಗೊತ್ತಾ!?

Next Post

ವಯನಾಡ್‌, ಕೇರಳ : ಧ್ವಂಸಗೊಂಡ‌ ಕಚೇರಿಗೆ ಭೇಟಿ ನೀಡಿದ ರಾಹುಲ್‌ ಗಾಂಧಿ

Related Posts

ದೋಹಾ (ಕತಾರ್) ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ
ರಾಷ್ಟ್ರೀಯ ಸುದ್ದಿ

ದೋಹಾ (ಕತಾರ್) ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ

June 22, 2026
30
ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ರಾಷ್ಟ್ರೀಯ ಸುದ್ದಿ

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

June 19, 2026
31
Next Post
ವಯನಾಡ್‌, ಕೇರಳ : ಧ್ವಂಸಗೊಂಡ‌ ಕಚೇರಿಗೆ ಭೇಟಿ ನೀಡಿದ ರಾಹುಲ್‌ ಗಾಂಧಿ

ವಯನಾಡ್‌, ಕೇರಳ : ಧ್ವಂಸಗೊಂಡ‌ ಕಚೇರಿಗೆ ಭೇಟಿ ನೀಡಿದ ರಾಹುಲ್‌ ಗಾಂಧಿ

Discussion about this post

Recent News

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
39
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
68
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d