ಮುಂಬೈ: ಬಸ್ಸು ನಾಗಪುರದಿಂದ ಪುಣೆ ಕಡೆಗೆ ಹೋಗುತ್ತಿತ್ತು ಎಂಬುವುದು ಉಲ್ಲೇಖನೀಯ. ಈ ವೇಳೆ ಬುಲ್ದಾನದ ಸಿಂಧಖೇಡರಾಜ ಬಳಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಪ್ರಾಥಮಿಕ ಮಾಹಿತಿಯಲ್ಲಿ ಬಸ್‌ನಲ್ಲಿ 33 ಜನರಿದ್ದರು ಎಂದು ತಿಳಿದುಬಂದಿದೆ. ಬಸ್‌ಗೆ ಬೆಂಕಿ ಹೊತ್ತಿಕೊಂಡಾಗ ಪ್ರಯಾಣಿಕರು ಮಲಗಿದ್ದರು. ಪ್ರಯಾಣಿಕರು ಅಪಾಯವನ್ನು ಗ್ರಹಿಸುವಷ್ಟರಲ್ಲಿ ಬೆಂಕಿ ಸಾಕಷ್ಟು ವ್ಯಾಪಿಸಿದೆ. ಇದರಿಂದಾಗಿ ಬಸ್ಸಿನಲ್ಲಿಯೇ ಹಲವರು ಸಾವನ್ನಪ್ಪಿದ್ದಾರೆ. ಬೆಳಗಿನ ಜಾವ 1.30ರ ಸುಮಾರಿಗೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಅಪಘಾತಕ್ಕೀಡಾದ ಬಸ್ ವಿದರ್ಭ ಟ್ರಾವೆಲ್ಸ್ಗೆ ಸೇರಿದ್ದಾಗಿದ್ದು, ಬಸ್‌ನಲ್ಲಿ ನಾಗ್ಪುರ, ವಾರ್ಧಾ ಮತ್ತು ಯವತ್ಮಾಲ್‌ನಿಂದ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ವರದಿಗಳು ತಿಳಿಸಿವೆ. ಬುಲ್ದಾನ ಬಸ್‌ಗೆ ಬೆಂಕಿ ತಗುಲಿ 25 ಮಂದಿ ಸಾವಿಗೀಡಾಗಿರುವುದನ್ನು ಜಿಲ್ಲಾ ಎಸ್‌ಎಸ್‌ಪಿ ಸುನೀಲ್ ಕಡಸನೆ ಖಚಿತಪಡಿಸಿದ್ದಾರೆ. ಬಸ್‌ನಲ್ಲಿ ಒಟ್ಟು 33 ಪ್ರಯಾಣಿಕರಿದ್ದು, ಈ ಪೈಕಿ 25 ಮಂದಿ ಸಾವನ್ನಪ್ಪಿದ್ದಾರೆ. ಈ ಬೆಂಕಿ ಅವಘಡದಲ್ಲಿ ಚಾಲಕ ಸೇರಿದಂತೆ 8 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟೈರ್ ಒಡೆದ ಕಾರಣ ಬಸ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಚಾಲಕ ತಿಳಿಸಿದ್ದಾರೆ.
ಇನ್ನು ಬಸ್‌ಗೆ ಬೆಂಕಿ ಬಿದ್ದ ಸುದ್ದಿ ತಿಳಿದ ಪೊಲೀಸರು ಮತ್ತು ಅಗ್ನಿ ಶಾಮಕದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಬಸ್ಸಿನಿಂದ 25 ಮೃತದೇಹಗಳನ್ನು ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಬಸ್ಸಿನಲ್ಲಿ ಒಟ್ಟು 33 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಬುಲ್ಧಾನ ಪೊಲೀಸ್ ಉಪ ಎಸ್ಪಿ ಬಾಬುರಾವ್ ಮಹಾಮುನಿ ತಿಳಿಸಿದ್ದಾರೆ.
ಸುರಕ್ಷಿತವಾಗಿ ಪಾರಾದವರಲ್ಲಿ ಚಾಲಕ ಮತ್ತು ಸಹಾಯಕ ಸೇರಿದ್ದಾರೆ. ಇದೇ ವೇಳೆ ಗಾಯಾಳುಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಪ್ರಕಾರ, ಈ ಪ್ರಯಾಣಿಕರಲ್ಲಿ ಹೆಚ್ಚಿನವರು ನಾಗ್ಪುರ, ವಾರ್ಧಾ ಮತ್ತು ಯವತ್ಮಾಲ್ ನಿವಾಸಿಗಳಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಸ್ ಮೊದಲು ಕಬ್ಬಿಣದ ಕಂಬಕ್ಕೆ ಡಿಕ್ಕಿ ಹೊಡೆದು ನಂತರ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿದೆ. ಬಳಿಕ ಬದುಕುಳಿದ ಪ್ರಯಾಣಿಕರು ಬಸ್ಸಿನ ಬಾಗಿಲು ಒದ್ದು ಮತ್ತು ಗಾಜುಗಳನ್ನು ಒಡೆದು ಹೊರಬಂದಿದ್ದಾರೆಂದು ತಿಳಿದುಬಂದಿದೆ.
ಅಪಘಾತದ ನಂತರ ಬಸ್ಸಿನಿಂದ ಹೆಚ್ಚಿನ ಪ್ರಮಾಣದ ಡೀಸೆಲ್ ರಸ್ತೆಯ ಮೇಲೆ ಸೋರಿಕೆಯಾಗಿದೆ. ಈ ವೇಳೆ ಬಸ್ನ ಇಂಜಿನ್ನಲ್ಲಿ ಸ್ಪಾರ್ಕ್ ಆಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬಸ್‌ನಿಂದ 25 ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಬಸ್ಸಿನಿಂದ ಹೊರತೆಗೆದ ಮೃತದೇಹಗಳನ್ನು ಗುರುತಿಸುವುದು ಕಷ್ಟವಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆ ಕುರಿತು ಬುಲ್ಧಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತರ ಸಂಬಂಧಿಗಳಿಗೆ ಮಾಹಿತಿ ರವಾನಿಸುವ ಕಾರ್ಯವನ್ನು ಕೈಗೊಂಡಿದ್ದಾರೆ. ಸುದ್ದಿ ತಿಳಿದ ಕುಟುಂಬಸ್ಥರು ಬುಲ್ಧಾನ್ನ ಸರ್ಕಾರಿ ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post