ಬೆಳ್ತಂಗಡಿ ಜೂ.29: ಸಾಲ ವಾಪಸ್ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಎರಡು ದಿನದ ಹಿಂದೆ ನಡೆದಿದೆ. ಧರ್ಮಸ್ಥಳದ ರೂಪಾ ಎಂಬ ಮಹಿಳೆ, ನವೀನ್ ಕನ್ಯಾಡಿ ಎಂಬಾತನಿಗೆ 7 ಲಕ್ಷ ರೂ ಸಾಲ ನೀಡಿದ್ದರು. ಅದೇ ಹಣವನ್ನು ವಾಪಸ್ ಕೇಳಿದ್ದಕ್ಕೆ ಮಹಿಳೆ ರೂಪಾ ಮೇಲೆ ಬಟ್ಟೆ ಅಂಗಡಿಗೆ ನುಗ್ಗಿ ಬಿಜೆಪಿ ಕಾರ್ಯಕರ್ತ ಹಾಗೂ ಹೂವಿನ ವ್ಯಾಪಾರಿಯಾದ ನವೀನ್ ಹಲ್ಲೆ ಮಾಡಿದ್ದಾನೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೂಪಾ : ಉಜಿರೆಯಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ ಧರ್ಮಸ್ಥಳದ ಮಹಿಳೆ ರೂಪಾ, ಇದೀಗ ಗಾಯಗೊಂಡು ಉಜಿರೆಯ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ನವೀನ್ ಕನ್ಯಾಡಿ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಹಿಂದೆ ಕೂಡ ನವೀನ್, ಬೆಳ್ತಂಗಡಿ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ್ದ ಎಂದು ಕೇಳಿಬಂದಿದೆ.
Discover more from Coastal Times Kannada
Subscribe to get the latest posts sent to your email.
Discussion about this post