ಸುಳ್ಯ: ಹತ್ಯೆಯಾಗಿರುವ ಪ್ರವೀಣ್ ನೆಟ್ಟಾರು ಅವರ ಮನೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿ ಅವರ ತಂದೆ, ತಾಯಿ ಹಾಗೂ ಪತ್ನಿಗೆ ಸಾಂತ್ವನ ಹೇಳಿದರು. ಕುಮಾರಸ್ವಾಮಿ ಅವರು ಪ್ರವೀಣ್ ಮನೆಯವರಿಗೆ ₹5 ಲಕ್ಷದ ಚೆಕ್ ವಿತರಿಸಿದರು.
ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ ಫಾರೂಕ್, ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ಪುತ್ತೂರು ತಾಲ್ಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ, ದಯಾಕರ ಆಳ್ವ, ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ ಸದಾಶಿವ, ಮುಖಂಡರಾದ ಮಹಮ್ಮದ್ ಕುಂಞ, ವಸಂತ ಪೂಜಾರಿ, ರತ್ನಾಕರ ಸುವರ್ಣ, ಪ್ರವೀಣ್ ಚಂದ್ರ ಜೈನ್ ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.







Discussion about this post