ಮಂಗಳೂರು: ಕರಾವಳಿಯಲ್ಲಿ ಮತೀಯ ಗೂಂಡಾಗಿರಿ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಯಾರೇ ಕಾನೂನು ಕೈಗೆತ್ತಿಕೊಂಡರೂ ತಪ್ಪು. ಕಾನೂನು ಕೈಗೆತ್ತಿಕೊಳ್ಳುವುದಕ್ಕೆ ಯಾರಿಗೂ ಅವಕಾಶ ನೀಡಬೇಡಿ. ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದರು.
ಕರಾವಳಿ ಜಿಲ್ಲೆಗಳ ಪ್ರವಾಸ ವೇಳೆ ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸೌಜನ್ಯ ಕೇಸ್ ಕೋರ್ಟ್ ನಲ್ಲಿ ಇತ್ಯರ್ಥವಾಗಿದೆ. ಸೌಜನ್ಯ ಕೊಲೆ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ಅದು ಕೋರ್ಟ್ ನಲ್ಲಿ ಇತ್ಯರ್ಥವಾಗಿದೆ. ಸೌಜನ್ಯ ಪೋಷಕರು ಮತ್ತು ಇನ್ನೂ ಕೆಲವರು ಅದರ ಮರುತನಿಖೆಯಾಗಬೇಕೆಂದು ಒತ್ತಾಯಿಸುತ್ತಿದ್ದಾರೆ. ಕಾನೂನು ಪ್ರಕಾರ ಮುಂದೆ ಏನು ಕ್ರಮ ಕೈಗೊಳ್ಳಬಹುದೆಂದು ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಕೋರ್ಟ್ ತೀರ್ಪಿನ ಪ್ರತಿಯನ್ನು ತಂದು ನನಗೆ ನೀಡಿದ್ದಾರೆ. ಓದಿದ ನಂತರ ಅದರ ವಿರುದ್ಧವಾಗಿ ಅಪೀಲ್ ಹಾಕಲು ಅವಕಾಶವಿದೆಯೇ ಎಂದು ನೋಡುತ್ತೇನೆ ಎಂದರು.
Students at D Devaraj URS post metric girls' hostel in Udupi told CM Siddaramaiah that their second year degree course is half way, but their promised laptops have not arrived@XpressBengaluru @vinndz_TNIE pic.twitter.com/sJ9OUi8FF5
— Prakash (@prakash_TNIE) August 1, 2023
Discussion about this post