ಮಂಗಳೂರು, ಆ.1: ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರು ನಗರದಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ರಸ್ತೆ ಕಾಮಗಾರಿಯನ್ನು ಮುಂದಿನ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಂಗಳವಾರ ಅವರು ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಸ್ಮಾರ್ಟ್ ಸಿಟಿ ಯೋಜನೆಯಲ್ಲಿರುವ ಇತರ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಲಹೆ ನೀಡಿದರು.
ಕಾಮಗಾರಿ ಕೈಗೆತ್ತಿಕೊಂಡಿರುವ ಎಂಟು ರಸ್ತೆಗಳಲ್ಲಿ ಮೂರು ರಸ್ತೆಗಳು ಮಾತ್ರ ಪೂರ್ಣಗೊಂಡಿವೆ. ಡಿಸೆಂಬರ್ ಅಂತ್ಯದೊಳಗೆ ಎಲ್ಲ ರಸ್ತೆಗಳನ್ನು ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು. ಕೆಲವು ಕಡೆಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಬಾಕಿ ಇದೆ. ಇದು ಮಹಾನಗರ ಪಾಲಿಕೆಯಿಂದ ಆಗಬೇಕಾಗಿದೆ. ಈ ಕಾರಣದಿಂದ ರಸ್ತೆ ಕಾಮಗಾರಿ ವಿಳಂಬ ಆಗಿದೆ ಎಂದು ಸ್ಮಾರ್ಟ್ ಸಿಟಿ ಎಂಜಿನಿಯರ್ ಅರುಣ್ ಪ್ರಭ ಹೇಳಿದರು.
ಈಗಾಗಲೇ ನಿಗದಿಪಡಿಸಿರುವ ಅವಧಿಯಲ್ಲಿ ಕಾಮಗಾರಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಸಚಿವರು ಸೂಚಿಸಿದರು.
Discover more from Coastal Times Kannada
Subscribe to get the latest posts sent to your email.
Discussion about this post