• About us
  • Contact us
  • Disclaimer
Tuesday, September 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!

Coastal Times by Coastal Times
August 1, 2026
in ಕ್ರೀಡಾ ಸುದ್ದಿ
ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!
21
VIEWS
WhatsappTelegramShare on FacebookShare on Twitter

ಗ್ಲ್ಯಾಸ್ಗೋ(ಸ್ಕಾಟ್ಲೆಂಡ್): ಶನಿವಾರ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ಭಾರತೀಯ ಬಾಕ್ಸರ್‌ಗಳಾದ ಪ್ರೀತಿ ಪವಾರ್ ಮತ್ತು ಜೈಸ್ಮಿನ್ ಲಂಬೋರಿಯಾ ಅವರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಜೈಸ್ಮಿನ್ 57 ಕೆಜಿ ಹಾಗೂ ಪ್ರೀತಿ 54 ಕೆಜಿ ವಿಭಾಗದಲ್ಲಿ ಚಿನ್ನದ ಪದಕಗಳನ್ನು ಗೆದ್ದು ಇತಿಹಾಸ ಬರೆದರು.

ಮಹಿಳೆಯರ 54 ಕೆಜಿ ವಿಭಾಗದಲ್ಲಿ ಕೆನಡಾದ ಸ್ಕಾರ್ಲೆಟ್ ಡೆಲ್ಗಾಡೊ ವಿರುದ್ಧ 5-0 ಅಂತರದ ಗೆಲುವಿನೊಂದಿಗೆ ಪ್ರೀತಿ ಚಿನ್ನ ಮುಡಿಗೇರಿಸಿಕೊಂಡರು. ಇನ್ನು ಹಾಲಿ ವಿಶ್ವ ಚಾಂಪಿಯನ್ ಜೈಸ್ಮಿನ್ ಉತ್ತರ ಐರ್ಲೆಂಡ್‌ನ ಮೈಕೆಲಾ ವಾಲ್ಷ್ ವಿರುದ್ಧ ಅದೇ ಅಂಕಗಳೊಂದಿಗೆ ಬಂಗಾರದ ಪದಕಕ್ಕೆ ಕೊರಳೊಡ್ಡಿದ್ದಾರೆ.

ಪ್ರೀತಿ ತಮ್ಮ ಚಿನ್ನದ ಬೇಟೆಯ ಪಂದ್ಯದಲ್ಲಿ ಅದ್ಭುತ ಆರಂಭವನ್ನು ಕಂಡರು. ಎಲ್ಲಾ ಐದೂ ತೀರ್ಪುಗಾರರು 10 – 8 ಅಂತರದ ತೀರ್ಪು ನೀಡುವ ಮೂಲಕ ಮೊದಲ ಸುತ್ತನ್ನು ಸರ್ವಾನುಮತದಿಂದ ಗೆದ್ದುಕೊಂಡರು. ಬ್ಯಾಂಟಮ್‌ವೇಟ್ ವಿಭಾಗದಲ್ಲಿ ವಿಶ್ವದ 3 ನೇ ಶ್ರೇಯಾಂಕಿತ ಆಟಗಾರ್ತಿ ಎರಡನೇ ಸುತ್ತನ್ನು ಸಕಾರಾತ್ಮಕವಾಗಿ ಶುರು ಮಾಡಿದರು. ಮತ್ತು ಅದೇ ರೀತಿಯಲ್ಲಿ ಮುಂದುವರಿದ ಅವರು ಅಂತಿಮವಾಗಿ ಭಾರತಕ್ಕೆ ಈ ದಿನದ ಮೊದಲ ಚಿನ್ನದ ಪದಕವನ್ನು ಗೆದ್ದು ಕೊಡುವಲ್ಲಿ ಯಶಸ್ವಿಯಾದರು.

22 ವರ್ಷದ ಪ್ರೀತಿ ಸೆಮಿಫೈನಲ್‌ನಲ್ಲಿ ಜಾಂಬಿಯಾದ ಕ್ಯಾಥರೀನ್ ಮ್ವಾಪೆ ವಿರುದ್ಧ 5-0 ಅಂತರದಿಂದ ಗೆಲುವು ಸಾಧಿಸಿ ಫೈನಲ್​ ಹಂತಕ್ಕೆ ತಲುಪಿದ್ದರು.

Preeti Pawar storms into women’s 54kg boxing final, assures India of at least silver.

India’s Preeti Pawar has stormed into the women’s 54kg boxing final at the Commonwealth Games. The young Indian pugilist defeated Zambia’s Catherine Mwape in the semifinal with a commanding… pic.twitter.com/2R2IjU7511

— DD News (@DDNewslive) July 31, 2026

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಬಂಧನ

Next Post

ಗಂಡನ್ನು ಕೊಲೆ ಮಾಡಿ ಶವವನ್ನು ಕಾರ್ಖಾನೆಯ ನೆಲದ ಕೆಳಗೆ ಅಗೆದು ಹೂತುಹಾಕಿದ್ದ ಹೆಂಡತಿ; ದೃಶ್ಯ ಸಿನಿಮಾ ರೀತಿಯೇ ನಡೆದಿತ್ತು ಕೊಲೆ!

Related Posts

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ
ಕ್ರೀಡಾ ಸುದ್ದಿ

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

August 29, 2026
51
FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ
ಕ್ರೀಡಾ ಸುದ್ದಿ

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

July 20, 2026
42
Next Post
ಗಂಡನ್ನು ಕೊಲೆ ಮಾಡಿ ಶವವನ್ನು ಕಾರ್ಖಾನೆಯ ನೆಲದ ಕೆಳಗೆ ಅಗೆದು ಹೂತುಹಾಕಿದ್ದ ಹೆಂಡತಿ; ದೃಶ್ಯ ಸಿನಿಮಾ ರೀತಿಯೇ ನಡೆದಿತ್ತು ಕೊಲೆ!

ಗಂಡನ್ನು ಕೊಲೆ ಮಾಡಿ ಶವವನ್ನು ಕಾರ್ಖಾನೆಯ ನೆಲದ ಕೆಳಗೆ ಅಗೆದು ಹೂತುಹಾಕಿದ್ದ ಹೆಂಡತಿ; ದೃಶ್ಯ ಸಿನಿಮಾ ರೀತಿಯೇ ನಡೆದಿತ್ತು ಕೊಲೆ!

Discussion about this post

Recent News

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
14
ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d