• About us
  • Contact us
  • Disclaimer
Tuesday, April 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಮ್ಮ ಕ್ಷಮಿಸಿಬಿಡು; ತಾಯಿಯನ್ನು ಕೊಂದು ಇನ್​ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ ಮಗ

Coastal Times by Coastal Times
September 1, 2024
in ಕ್ರೈಮ್ ನ್ಯೂಸ್
ಅಮ್ಮ ಕ್ಷಮಿಸಿಬಿಡು; ತಾಯಿಯನ್ನು ಕೊಂದು ಇನ್​ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ ಮಗ
99
VIEWS
WhatsappTelegramShare on FacebookShare on Twitter

ಅಹಮದಾಬಾದ್: ಮಗನೇ ತನ್ನ ಹೆತ್ತ ತಾಯಿಯನ್ನು ಕೊಲೆ ಮಾಡಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಈ ಹೃದಯ ವಿದ್ರಾವಕ ಕಥೆಯನ್ನು ಕೇಳಿದವರೆಲ್ಲರೂ ಬೆಚ್ಚಿಬಿದ್ದಿದ್ದಾರೆ. ಅಮ್ಮ- ಮಗನ ಪರಿಶುದ್ಧ ಸಂಬಂಧವನ್ನು ಛಿದ್ರಗೊಳಿಸಿದ ಈ ಕತೆ ಕೇಳಿದರೆ ಶಾಕ್ ಆಗುವುದು ಗ್ಯಾರಂಟಿ. ಈ ಕೊಲೆ ಮಾಡಿದ ಬಳಿಕ ಆ ಯುವಕ ಅಮ್ಮನೊಂದಿಗಿನ ತನ್ನ ಫೋಟೋವನ್ನು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ನಿನ್ನನ್ನು ಕೊಂದಿದ್ದಕ್ಕೆ ನನ್ನ ಕ್ಷಮಿಸಿ ಬಿಡು ಅಮ್ಮ ಎಂದು ಕ್ಯಾಪ್ಷನ್ ಹಾಕಿದ್ದಾನೆ. ಮೃತ ತಾಯಿಯನ್ನು ಜ್ಯೋತಿಬೆನ್ ಗೋಸಾಯಿ(48) ಎಂದು ಗುರುತಿಸಲಾಗಿದ್ದು, ಆರೋಪಿ ಮಗನನ್ನು ನಿಲೇಶ್ ಗೋಸಾಯಿ ಎಂದು ಗುರುತಿಸಲಾಗಿದೆ

ಮಗ ತನ್ನ ತಾಯಿಯ ಕತ್ತು ಹಿಸುಕಿ ಕೊಂದಿದ್ದು, ಇದಾದ ಬಳಿಕ ಆರೋಪಿ ಮಗ ತನ್ನ ಇನ್ಸ್ಟಾಗ್ರಾಂನಲ್ಲಿ ತನ್ನ ತಾಯಿಯ ಫೋಟೋವನ್ನು ಪೋಸ್ಟ್ ಮಾಡಿದ್ದಾನೆ. ತನ್ನ ಸ್ಟೇಟಸ್ನಲ್ಲಿ “ಕ್ಷಮಿಸಿ ಬಿಡು ಅಮ್ಮ, ನಾನು ನಿನ್ನನ್ನು ಕೊಂದಿದ್ದೇನೆ, ನಾನು ನಿನ್ನನ್ನು ಕಳೆದುಕೊಂಡಿದ್ದೇನೆ, ಓಂ ಶಾಂತಿ” ಎಂದು ಬರೆದಿದ್ದಾನೆ. ಆರೋಪಿ ಯುವಕ ಈಗ ರಾಜ್‌ಕೋಟ್ ನಗರದ ವಿಶ್ವವಿದ್ಯಾಲಯ ಪೊಲೀಸರ ವಶದಲ್ಲಿದ್ದಾನೆ. ಆದರೆ ಈ ಮಗ ತನ್ನ ತಾಯಿಯನ್ನು ಏಕೆ ಕೊಂದನು? ಈ ಕಾರಣವು ನಿಮಗೆ ಆಶ್ಚರ್ಯವನ್ನುಂಟು ಮಾಡುತ್ತದೆ.

ಗುರುವಾರ ರಾಜ್‌ಕೋಟ್‌ನ ಯೂನಿವರ್ಸಿಟಿ ರಸ್ತೆಯಲ್ಲಿರುವ ಸರ್ಕಾರಿ ಕ್ವಾರ್ಟರ್‌ನಲ್ಲಿ ಮಗನೊಬ್ಬ ತನ್ನ ತಾಯಿಯನ್ನು ಕೊಂದಿದ್ದು ಇಡೀ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ. ಕೊಲೆ ನಡೆದ ನಂತರ ಭರತ್ ಎಂಬ ವ್ಯಕ್ತಿ ಪೊಲೀಸರಿಗೆ ಕರೆ ಮಾಡಿ ಈ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರು 48 ವರ್ಷದ ಜ್ಯೋತಿಬೆನ್ ಗೋಸಾಯಿ ಅವರ ಶವವನ್ನು ಆಕೆಯ ಮನೆಯಿಂದ ಹೊರತೆಗೆದಿದ್ದಾರೆ. ಆಕೆಯನ್ನು ಕೊಂದ ಮಗ ನಿಲೇಶ್ ಗೋಸಾಯಿಯನ್ನು ವಿಚಾರಣೆಗೊಳಪಡಿಸಿದ್ದು, ಆತ ತಾಯಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ ನೀಲೇಶ್ ಮೊದಲು ಚಾಕುವಿನಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿದ್ದು, ತಾಯಿ ಆ ಚಾಕು ಕಿತ್ತುಕೊಂಡಿದ್ದರಿಂದ ರಕ್ತಸ್ರಾವ ಉಂಟಾಗಿದ್ದು ಬೆಳಕಿಗೆ ಬಂದಿದೆ. ಇದಾದ ಬಳಿಕ ತಾಯಿಯ ಬಾಯಿ ಹಾಗೂ ಗಂಟಲನ್ನು ಕಂಬಳಿಯಿಂದ ಒತ್ತಿ ಹತ್ಯೆ ಮಾಡಿದ್ದಾನೆ.

ಕೊಲೆಯಾದ ನಂತರ ಆತ ತನ್ನ ಸ್ನೇಹಿತ ಭರತ್​ಗೆ ಮಾಹಿತಿ ನೀಡಿದ್ದು, ಆತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ನೀಲೇಶ್​ನ ಮೃತ ತಾಯಿ ಜ್ಯೋತಿಬೆನ್ ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥಳಾಗಿದ್ದು, ಆಗಾಗ ಜಗಳ ನಡೆಯುತ್ತಿತ್ತು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಘಟನೆ ನಡೆದ ದಿನವೂ ಇದೇ ರೀತಿ ನಡೆದಿದ್ದು, ಆರೋಪಿ ನೀಲೇಶ್ ತನ್ನ ತಾಯಿಯನ್ನು ಕೊಂದಿದ್ದಾನೆ.ಆರೋಪಿಯ ತಾಯಿ ಜ್ಯೋತಿಬೆನ್ ಮತ್ತು ಆತನ ತಂದೆ ಸುಮಾರು 20 ವರ್ಷಗಳ ಹಿಂದೆ ವಿಚ್ಛೇದನ ಪಡೆದಿದ್ದರು. ಹಾಗಾಗಿ ಆರೋಪಿ ನೀಲೇಶ್ ಹಾಗೂ ಆತನ ತಾಯಿ ಇಬ್ಬರೂ ಒಟ್ಟಿಗೆ ವಾಸವಾಗಿದ್ದರು. ಅವರು ತಮ್ಮ ಇತರ ಮಕ್ಕಳೊಂದಿಗೆ ಯಾವುದೇ ಸಂಬಂಧವನ್ನು ಹೊಂದಿರಲಿಲ್ಲ. ಮೃತ ಜ್ಯೋತಿಬೆನ್ ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಕಳೆದ ಒಂದು ತಿಂಗಳಿನಿಂದ ಅವರು ಔಷಧಿಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿದ್ದರು. ಈ ಕೊಲೆಯಾದ ನಂತರ ಆಕೆಯ ಮಗ ಜೈಲು ಸೇರಿದರೆ ಆಕೆಯ ಮಾಜಿ ಪತಿ ಮತ್ತು ಅವರ ಇತರ ಮಕ್ಕಳು ಆ ಶವವನ್ನು ಸ್ವೀಕರಿಸಲು ನಿರಾಕರಿಸಿದರು. ನಮಗೂ ಆಕೆಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಹೀಗಾಗಿ ಕೊನೆಗೆ ಪೊಲೀಸರೇ ಆ ಮಹಿಳೆಯ ಅಂತಿಮ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಕಬಡ್ಡಿ ಪ್ರೀಮಿಯರ್ ಲೀಗ್ “ಟೀಮ್ ಬಾವಾ” ಲೋಗೋ, ಟಿ ಶರ್ಟ್ ಅನಾವರಣ

Next Post

ಶ್ರೀ ಶಿರಿಡಿ ಸಾಯಿ ಫ್ರೆಂಡ್ಸ್ (ರಿ) ಸೂರಿಂಜೆ ಸುರತ್ಕಲ್, ಇದರ ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

Related Posts

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!
ಕ್ರೈಮ್ ನ್ಯೂಸ್

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
158
ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ
ಕ್ರೈಮ್ ನ್ಯೂಸ್

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
64
Next Post
ಶ್ರೀ ಶಿರಿಡಿ ಸಾಯಿ ಫ್ರೆಂಡ್ಸ್ (ರಿ) ಸೂರಿಂಜೆ ಸುರತ್ಕಲ್, ಇದರ ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

ಶ್ರೀ ಶಿರಿಡಿ ಸಾಯಿ ಫ್ರೆಂಡ್ಸ್ (ರಿ) ಸೂರಿಂಜೆ ಸುರತ್ಕಲ್, ಇದರ ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

Discussion about this post

Recent News

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
158
ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d