• About us
  • Contact us
  • Disclaimer
Tuesday, April 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸಿಪಿಎಂ ಪಕ್ಷದ ಹಿರಿಯ ನಾಯಕ ಕೊಡಿಯೇರಿ ಬಾಲಕೃಷ್ಣನ್‌ ನಿಧನ

Coastal Times by Coastal Times
October 1, 2022
in ರಾಷ್ಟ್ರೀಯ ಸುದ್ದಿ
ಸಿಪಿಎಂ ಪಕ್ಷದ ಹಿರಿಯ ನಾಯಕ ಕೊಡಿಯೇರಿ ಬಾಲಕೃಷ್ಣನ್‌ ನಿಧನ
23
VIEWS
WhatsappTelegramShare on FacebookShare on Twitter

ತಿರುವನಂತಪುರಂ : ಸಿಪಿಎಂ ಪಕ್ಷದ ಹಿರಿಯ ನಾಯಕ, ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್‌ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ನಿಧನರಾದರು. ಅವರಿಗೆ 69 ವರ್ಷವಾಗಿತ್ತು. ಕ್ಯಾನ್ಸರ್‌ ಪೀಡಿತರಾಗಿದ್ದ ಅವರು ಕೆಲದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ. ಆಗಸ್ಟ್ ಅಂತ್ಯದಲ್ಲಿ, ಕೊಡಿಯೇರಿ ಅವರು ಸತತ ಮೂರು ಅವಧಿಗೆ ಪಕ್ಷದ ಕಾರ್ಯದರ್ಶಿ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಪಕ್ಷಕ್ಕೆ ಮನವಿ ಮಾಡಿದ್ದರು. ನಂತರ ಅವರನ್ನು ಚಿಕಿತ್ಸೆಗಾಗಿ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೆಪ್ಟೆಂಬರ್ 9 ರಂದು ಕೊಡಿಯೇರಿ ಅವರನ್ನು ಭೇಟಿ ಮಾಡಿದ್ದು, ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂಬ ಊಹಾಪೋಹಗಳನ್ನು ಹುಟ್ಟುಹಾಕಿತ್ತು. ಅವರ ಸ್ಥಾನಕ್ಕೆ ಪಕ್ಷದ ಹಿರಿಯ ನಾಯಕ ಎಂವಿ ಗೋವಿಂದನ್ ಆಯ್ಕೆಯಾಗಿದ್ದಾರೆ. ಕೊಡಿಯೇರಿ ಅವರು ತಮ್ಮ ಸಹೋದ್ಯೋಗಿ ಎ. ವಿಜಯರಾಘವನ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದ ನಂತರ ನವೆಂಬರ್, 2020 ರಲ್ಲಿ ಆರೋಗ್ಯ ಸಮಸ್ಯೆಗಳಿಂದಾಗಿ ಕೆಲಸದಿಂದ ತಾತ್ಕಾಲಿಕ ವಿರಾಮವನ್ನು ಪಡೆದರು.

ಕಣ್ಣೂರು ಜಿಲ್ಲೆಯ ತಲಶ್ಶೇರಿಯ ಕೊಡಿಯೇರಿ ಗ್ರಾಮದಲ್ಲಿ ಜನಿಸಿದ ಅವರು, 1970ರಲ್ಲಿ ಹದಿಹರೆಯದಲ್ಲಿದ್ದಾಗಲೇ ಸಿಪಿಐ(ಎಂ) ಸೇರಿದ್ದರು. ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ ಸೇರಿದಂತೆ ಪಕ್ಷದ ವಿವಿಧ ಪ್ರಮುಖ ಸಂಘಟನೆಗಳಲ್ಲಿ ನಾಯಕತ್ವ ವಹಿಸಿದ್ದರು. 1975-77ರ ತುರ್ತು ಪರಿಸ್ಥಿತಿಯಲ್ಲಿ, ಕೊಡಿಯೇರಿಯವರು ತಮ್ಮ 20ನೇ ವಯಸ್ಸಿನಲ್ಲಿದ್ದಾಗ 16 ತಿಂಗಳುಗಳ ಕಾಲ ಜೈಲು ವಾಸ ಅನುಭವಿಸಿದ್ದರು. ಸಿಪಿಐ(ಎಂ)ನ ಕಣ್ಣೂರು ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಐದು ಬಾರಿ ತಲಶ್ಶೇರಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1982, 1987, 2001, 2006 ಮತ್ತು 2011. 2006 ರಲ್ಲಿ ಎಡ ಪ್ರಜಾಸತ್ತಾತ್ಮಕ ರಂಗವು ಅಧಿಕಾರಕ್ಕೆ ಬಂದಾಗ ಅವರು ಗೃಹ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮೈಸೂರಿನತ್ತ ಭಾರತ್ ಜೋಡೊ ಯಾತ್ರೆ: ರಾಹುಲ್‌ ಗಾಂಧಿಗೆ ಅದ್ಧೂರಿ ಸ್ವಾಗತ, ಸಿದ್ದರಾಮಯ್ಯ, ಡಿಕೆಶಿ ಭಾಗಿ

Next Post

ಮಂಗಳೂರು: ಪಿಎಫ್‌ಐ ನಂಟು, ಬಂಧಿತ 14 ಮಂದಿಗೆ ಜಾಮೀನು

Related Posts

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ
ರಾಷ್ಟ್ರೀಯ ಸುದ್ದಿ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
46
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
66
Next Post
ಮಂಗಳೂರು: ಪಿಎಫ್‌ಐ ನಂಟು, ಬಂಧಿತ 14 ಮಂದಿಗೆ ಜಾಮೀನು

ಮಂಗಳೂರು: ಪಿಎಫ್‌ಐ ನಂಟು, ಬಂಧಿತ 14 ಮಂದಿಗೆ ಜಾಮೀನು

Discussion about this post

Recent News

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
159
ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d