ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ದಾಸಕೋಡಿ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ಬಾಳ್ತಿಲ ನಿವಾಸಿ ಹರೀಶ್ ನಾಯ್ಕ್ (46) ಮೃತಪಟ್ಟವರು. ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದ ಅವರು, ಸಂಜೆ ಕೆಲಸ ಮುಗಿಸಿ ಕಲ್ಲಡ್ಕ ಕಡೆಯಿಂದ ಬಸ್‌ನಲ್ಲಿ ಮನೆಗೆ ತೆರಳುತ್ತಿದ್ದರು. ದಾಸಕೋಡಿಯಲ್ಲಿ ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾರು ಅವರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discover more from Coastal Times Kannada
Subscribe to get the latest posts sent to your email.







Discussion about this post