• About us
  • Contact us
  • Disclaimer
Thursday, October 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​

Coastal Times by Coastal Times
October 1, 2026
in ಕ್ರೈಮ್ ನ್ಯೂಸ್
AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​
47
VIEWS
WhatsappTelegramShare on FacebookShare on Twitter

ಕಡಬ: ಸಿವಿಲ್ ಪೊಲೀಸ್ ಕಾನ್ಸ್​​​​ಟೇಬಲ್​ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಲು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ನಕಲಿ ಪ್ರವೇಶ ಪತ್ರ (Hall Ticket) ಸೃಷ್ಟಿಸಿ ವಂಚಿಸಲು ಯತ್ನಿಸಿದ ಆರೋಪದ ಮೇಲೆ ಕಡಬ ಮೂಲದ ಯುವಕನೊಬ್ಬನನ್ನು ಮಂಗಳೂರು ನಗರದ ಬರ್ಕೆ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಬೆದ್ರಾಜೆ ಮನೆ ನಿವಾಸಿ ಯಜ್ಞೇಶ್ ಬಿ.ಜೆ. ರೈ (22) ಎಂದು ಗುರುತಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ ಸಿವಿಲ್ ಪೊಲೀಸ್ ಕಾನ್ಸ್​​ಟೇಬಲ್​ ನೇಮಕಾತಿ–2026ರ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ (ET&PST) ಪರೀಕ್ಷೆ ಸೆ.28ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದ ನೋಂದಣಿ ಡೆಸ್ಕ್‌ನಲ್ಲಿ ಸಿಬ್ಬಂದಿ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದರು.

ಆರೋಪಿ ಯಜ್ಞೇಶ್ ರೈ CPC5225446 ಸಂಖ್ಯೆಯ ಪ್ರವೇಶ ಪತ್ರ ಹಾಜರುಪಡಿಸಿದ್ದನು. ಆದರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಒದಗಿಸಿದ್ದ ತಂತ್ರಾಂಶದಲ್ಲಿ ವಿವರಗಳನ್ನು ಪರಿಶೀಲಿಸಿದಾಗ, 1:5 ಅರ್ಹತಾ ಪಟ್ಟಿಯಲ್ಲಿ ಯಜ್ಞೇಶ್ ಹೆಸರಾಗಲಿ ಅಥವಾ ಸಂಬಂಧಿತ ಅರ್ಜಿ ಸಂಖ್ಯೆಯಾಗಲಿ ಕಂಡುಬರಲಿಲ್ಲ. ಇದರಿಂದ ಅನುಮಾನಗೊಂಡ ಪರೀಕ್ಷಾ ಸಿಬ್ಬಂದಿ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಪ್ರವೇಶ ಪತ್ರದಲ್ಲಿ ವ್ಯತ್ಯಾಸಗಳು ಕಂಡುಬಂದಿದ್ದು, ಅದು ನಕಲಿ ದಾಖಲೆ ಎಂಬುದು ಬೆಳಕಿಗೆ ಬಂದಿದೆ. ಬಳಿಕ ಪ್ರಕರಣ ಸಿಬ್ಬಂದಿ ಗಮನಕ್ಕೆ ಬಂದಿದ್ದು, ಆರೋಪಿ ಯಜ್ಞೇಶನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ವಿಚಾರಣೆಯಲ್ಲಿ, ಯಜ್ಞೇಶ್ ಸಿವಿಲ್ ಪೊಲೀಸ್ ಕಾನ್ಸ್​​​ಟೇಬಲ್​ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರಲಿಲ್ಲ ಎನ್ನುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೂ, ದೈಹಿಕ ಪರೀಕ್ಷೆಗೆ ಹಾಜರಾಗುವ ಉದ್ದೇಶದಿಂದ ಅರ್ಹತೆ ಪಡೆದಿದ್ದ ಮತ್ತೊಬ್ಬ ಅಭ್ಯರ್ಥಿಯ ಅಸಲಿ ಹಾಲ್‌ಟಿಕೆಟ್‌ ಆತ ಪಡೆದುಕೊಂಡಿದ್ದ. ನಂತರ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಹಾಗೂ ಡಿಜಿಟಲ್ ಎಡಿಟಿಂಗ್ ವಿಧಾನ ಬಳಸಿ ಆ ಹಾಲ್‌ಟಿಕೆಟ್‌ನಲ್ಲಿದ್ದ ಹೆಸರು ಸೇರಿದಂತೆ ಅಗತ್ಯ ವಿವರಗಳನ್ನು ಬದಲಾಯಿಸಿ, ತನ್ನದೇ ಹೆಸರಿನ ನಕಲಿ ಹಾಲ್‌ಟಿಕೆಟ್ ಸಿದ್ಧಪಡಿಸಿಕೊಂಡು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಯತ್ನಿಸಿದ್ದಾನೆ ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೊಬೈಲ್‌ನಲ್ಲಿ ಡಿಜಿಟಲ್ ಪುರಾವೆ: ಆರೋಪಿಯ ಮೊಬೈಲ್ ಫೋನ್ ಪರಿಶೀಲನೆ ನಡೆಸಿದಾಗ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಲು ಸಂಬಂಧಿಸಿದ ಡಿಜಿಟಲ್ ಪುರಾವೆಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಲ್‌ಟಿಕೆಟ್‌ ಅನ್ನು ಎಡಿಟ್ ಮಾಡಿರುವ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯೂ ಮೊಬೈಲ್‌ನಲ್ಲಿ ಲಭ್ಯವಾಗಿದ್ದು, ತನಿಖೆಗೆ ಪ್ರಮುಖ ಸಾಕ್ಷ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಡಬದ ಜೆರಾಕ್ಸ್ ಅಂಗಡಿಗೆ ಪೊಲೀಸರ ಭೇಟಿ: ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ಸಹಾಯಕ ಆಡಳಿತಾಧಿಕಾರಿ ಪ್ರಕಾಶ್ ರುದ್ರಪ್ಪ ಹೂವಿನ ಅವರು ನೀಡಿದ ದೂರಿನ ಆಧಾರದ ಮೇಲೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 87/2026 ದಾಖಲಿಸಲಾಗಿದೆ. ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)–2023ರ ಕಲಂ 336(1), 336(3) ಹಾಗೂ 318(4)ರ ಅಡಿ ನಕಲಿ ದಾಖಲೆ ಸೃಷ್ಟಿ ಮತ್ತು ವಂಚನೆಗೆ ಸಂಬಂಧಿಸಿದ ಆರೋಪಗಳನ್ನು ದಾಖಲಿಸಲಾಗಿದೆ. ನಕಲಿ ಹಾಲ್‌ಟಿಕೆಟ್‌ನ ಪ್ರಿಂಟ್‌ಔಟ್‌ನ್ನು ಎಲ್ಲಿಂದ ಪಡೆದುಕೊಳ್ಳಲಾಗಿತ್ತು ಎಂಬುದನ್ನು ಪತ್ತೆಹಚ್ಚಲು ಬರ್ಕೆ ಠಾಣೆಯ ತನಿಖಾ ತಂಡವು ಕಡಬಕ್ಕೆ ಆಗಮಿಸಿದೆ. ಈ ವೇಳೆ, ಸ್ಥಳೀಯ ಜೆರಾಕ್ಸ್/ಸೈಬರ್ ಅಂಗಡಿಯೊಂದಕ್ಕೆ ಭೇಟಿ ನೀಡಿ ಪರಿಶೀಲನೆ ಹಾಗೂ ಮಹಜರು ನಡೆಸಲಾಗಿದೆ. ಹಾಲ್‌ಟಿಕೆಟ್ ಸಿದ್ಧಪಡಿಸುವುದು, ಎಡಿಟ್ ಮಾಡುವುದು ಮತ್ತು ಅದರ ಪ್ರಿಂಟ್ ಪಡೆಯುವ ಪ್ರಕ್ರಿಯೆಯಲ್ಲಿ ಇತರರ ಪಾತ್ರವಿದೆಯೇ ಎಂಬ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ ದಾಸಕೋಡಿಯಲ್ಲಿ ಬಸ್‌ನಿಂದ ಇಳಿದ ಕಾರ್ಮಿಕನಿಗೆ ಕಾರು ಢಿಕ್ಕಿ: ಸ್ಥಳದಲ್ಲೇ ಸಾವು

Related Posts

ಬಂಟ್ವಾಳ ದಾಸಕೋಡಿಯಲ್ಲಿ ಬಸ್‌ನಿಂದ ಇಳಿದ ಕಾರ್ಮಿಕನಿಗೆ ಕಾರು ಢಿಕ್ಕಿ: ಸ್ಥಳದಲ್ಲೇ ಸಾವು
ಕ್ರೈಮ್ ನ್ಯೂಸ್

ಬಂಟ್ವಾಳ ದಾಸಕೋಡಿಯಲ್ಲಿ ಬಸ್‌ನಿಂದ ಇಳಿದ ಕಾರ್ಮಿಕನಿಗೆ ಕಾರು ಢಿಕ್ಕಿ: ಸ್ಥಳದಲ್ಲೇ ಸಾವು

October 1, 2026
26
ಎಂಆರ್‌‌ಪಿಎಲ್ ಸ್ಫೋಟದ ತೀವ್ರತೆಗೆ 54 ಮನೆಗಳು, 8 ಧಾರ್ಮಿಕ ಕ್ಷೇತ್ರಗಳಿಗೆ ಹಾನಿ; ಎಫ್​ಐಆರ್​ ದಾಖಲು
ಕರಾವಳಿ

ಎಂಆರ್‌‌ಪಿಎಲ್ ಸ್ಫೋಟದ ತೀವ್ರತೆಗೆ 54 ಮನೆಗಳು, 8 ಧಾರ್ಮಿಕ ಕ್ಷೇತ್ರಗಳಿಗೆ ಹಾನಿ; ಎಫ್​ಐಆರ್​ ದಾಖಲು

October 1, 2026
32

Discussion about this post

Recent News

AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​

AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​

October 1, 2026
47
ಬಂಟ್ವಾಳ ದಾಸಕೋಡಿಯಲ್ಲಿ ಬಸ್‌ನಿಂದ ಇಳಿದ ಕಾರ್ಮಿಕನಿಗೆ ಕಾರು ಢಿಕ್ಕಿ: ಸ್ಥಳದಲ್ಲೇ ಸಾವು

ಬಂಟ್ವಾಳ ದಾಸಕೋಡಿಯಲ್ಲಿ ಬಸ್‌ನಿಂದ ಇಳಿದ ಕಾರ್ಮಿಕನಿಗೆ ಕಾರು ಢಿಕ್ಕಿ: ಸ್ಥಳದಲ್ಲೇ ಸಾವು

October 1, 2026
26
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​

AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​

October 1, 2026
ಬಂಟ್ವಾಳ ದಾಸಕೋಡಿಯಲ್ಲಿ ಬಸ್‌ನಿಂದ ಇಳಿದ ಕಾರ್ಮಿಕನಿಗೆ ಕಾರು ಢಿಕ್ಕಿ: ಸ್ಥಳದಲ್ಲೇ ಸಾವು

ಬಂಟ್ವಾಳ ದಾಸಕೋಡಿಯಲ್ಲಿ ಬಸ್‌ನಿಂದ ಇಳಿದ ಕಾರ್ಮಿಕನಿಗೆ ಕಾರು ಢಿಕ್ಕಿ: ಸ್ಥಳದಲ್ಲೇ ಸಾವು

October 1, 2026
ಎಂಆರ್‌‌ಪಿಎಲ್ ಸ್ಫೋಟದ ತೀವ್ರತೆಗೆ 54 ಮನೆಗಳು, 8 ಧಾರ್ಮಿಕ ಕ್ಷೇತ್ರಗಳಿಗೆ ಹಾನಿ; ಎಫ್​ಐಆರ್​ ದಾಖಲು

ಎಂಆರ್‌‌ಪಿಎಲ್ ಸ್ಫೋಟದ ತೀವ್ರತೆಗೆ 54 ಮನೆಗಳು, 8 ಧಾರ್ಮಿಕ ಕ್ಷೇತ್ರಗಳಿಗೆ ಹಾನಿ; ಎಫ್​ಐಆರ್​ ದಾಖಲು

October 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d