ಮಂಗಳೂರು: ಬಜಪೆಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಂಗಳೂರಿನಿಂದ ಹಾಗೂ ಉಡುಪಿ– ಮಣಿಪಾಲದಿಂದ ವೋಲ್ವೊ ಹವಾನಿಯಂತ್ರಿತ ಬಸ್ ಸಂಚಾರಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಮಂಗಳೂರು ವಿಭಾಗವು ವ್ಯವಸ್ಥೆ ಕಲ್ಪಿಸಿದೆ. ಈ ಸೇವೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳವಾರ ಚಾಲನೆ ನೀಡಿದರು.
‘ವೋಲ್ವೊ ಬಸ್‌ಗೆ ಮಂಗಳೂರಿನಿಂದ ವಿಮಾನನಿಲ್ದಾಣಕ್ಕೆ ₹ 100 ಹಾಗೂ ಮಣಿಪಾಲ–ಉಡುಪಿಯಿಂದ ₹ 300 ಟಿಕೆಟ್ ದರ ನಿಗದಿಪಡಿಸಿದ್ದೇವೆ. ಟ್ಯಾಕ್ಸಿಗಳು ದುಬಾರಿ ದರ ವಿಧಿಸುತ್ತಿರುವುದರಿಂದ ರಿಯಾಯಿತಿ ದರದಲ್ಲಿ ಬಸ್ ಸೌಕರ್ಯ ಒದಗಿಸುವಂತೆ ಬೇಡಿಕೆ ಇತ್ತು’ ಎಂದರು.
ಸಂಸದ ನಳಿನ್ ಕುಮಾರ್, ‘ವಿಮಾನನಿಲ್ದಾಣದಿಂದ ಉಡುಪಿಗೆ ವೋಲ್ವೊ ಬಸ್ ಸೌಕರ್ಯ ಕಲ್ಪಿಸಬೇಕು ಎಂಬ ಬಹುದಿನಗಳ ಬೇಡಿಕೆ ಈಡೇರಿದೆ. ವಿಮಾನದ ವೇಳಾಪಟ್ಟಿಗೆ ಪೂರಕವಾಗಿ ಬಸ್‌ಗಳ ವೇಳಾಪಟ್ಟಿ ನಿಗದಿಪಡಿಸಲಾಗುತ್ತದೆ. ಹಿಂದೆಯೂ ವಿಮಾನನಿಲ್ದಾಣಕ್ಕೆ ಬಸ್ ಸೌಕರ್ಯ ಕಲ್ಪಿಸಲಾಗಿತ್ತು. ಕಾರಣಾಂತರಗಳಿಂದ ಅದು ಸ್ಥಗಿತವಾಗಿತ್ತು. ಜನರ ಉಪಯೋಗಕ್ಕೆ ಮತ್ತೆ ಬಸ್ ಸಂಚಾರ ಆರಂಭವಾಗಿದೆ. ಇನ್ನು ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ’ ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ.ವೈ.ಭರತ್ ಶೆಟ್ಟಿ, ಉಮಾನಾಥ್ ಕೊಟ್ಯಾನ್, ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ್, ಕೆ.ಎಸ್.ಆರ್.ಟಿ.ಸಿ ವಿಭಾಗಿಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಸೇರಿದಂತೆ ಇತರೆ ಜನಪ್ರತಿನಿಧಿಗಳು, ಸಾರಿಗೆ ಸಿಬ್ಬಂದಿಗಳು ಇದ್ದರು.
Discover more from Coastal Times Kannada
Subscribe to get the latest posts sent to your email.
Discussion about this post