ಮಂಗಳೂರು, ಅ 31 : ಮಾಧ್ಯಮಗಳು ಜನಾಭಿಪ್ರಾಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾ ಬಂದಿವೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯಂತ್ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ 74ನೇ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಜನರಿಗೆ ಸುದ್ದಿ ಗಳನ್ನು ತಿರುಚದೆ ಸತ್ಯ ಸಂಗತಿಗಳನ್ನು ತಿಳಿಸುವ ಮಾಧ್ಯಮಗಳು ಜನರನ್ನು ಎಚ್ಚರಿಸುತ್ತದೆ.ಹಲವಾರು ಹಿರಿಯ ಪತ್ರಕರ್ತರ ವಿಶ್ಲೇಷಣಾತ್ಮಕ ವರದಿಗಳು ಉಪಯುಕ್ತ ಮಾಹಿತಿ ನೀಡುವ ಮೂಲಕ ಜನಾಭಿಪ್ರಾಯ ರೂಪಿಸುವಲ್ಲಿ ಸಕಾರಾತ್ಮಕ ಬೆಳವಣಿಗೆ ಯಲ್ಲಿ ಮಹತ್ವದ ಪಾತ್ರವಹಿಸುತ್ತಾ ಬಂದಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಪತ್ರಿಕೋದ್ಯಮ ಹೊಸ ಅವಕಾಶ ಮತ್ತು ಬೇಡಿಕೆಗಳ ಉದ್ಯಮ ಕುರಿತು ವೇಣು ಶರ್ಮ ಉಪನ್ಯಾಸ ನೀಡುತ್ತಾ, ಪತ್ರಿಕೋದ್ಯಮ ಉದ್ಯಮ ಕ್ಷೇತ್ರ ವಾಗಿ ಬೆಳೆಯುತ್ತಿರುವ ಕಾರಣ ಯುವ ಪತ್ರ ಕರ್ತರಿಗೆ ,ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ ವಿಫಲ ಅವಕಾಶ ವಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸಮಾರಂಭದಲ್ಲಿಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತೀಯ ಕಾರ್ಯ ನಿರತ ಪತ್ರಕರ್ತರ ಸಂಘದ ಆಡಳಿತ ಮಂಡಳಿಯ ಸದಸ್ಯ ಪಿ.ಬಿ.ಹರೀಶ್ ರೈ ಪ್ರಾಸ್ತಾವಿಕವಾಗಿ ನುಡಿದರು.
ಸಮಾರಂಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯ ನಿರ್ದೇಶಕ ಖಾದರ್ ಶಾ, ಪತ್ರಕರ್ತರ ಸಂಘದ ಪೂರ್ವಾಧ್ಯಕ್ಷ ಆನಂದಶೆಟ್ಟಿ, ಪ್ರೆಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು, ರಾಜ್ಯ ಕಾರ್ಯ ಕಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯ ಇಬ್ರಾಹಿಂ ಅಡ್ಕಸ್ಥಳ, ಕಾರ್ಯಕ್ರಮ ನಿರ್ದೇಶಕ ರಾಜೇಶ್ ದಡ್ಡಂಗಡಿ, ಉಪಾಧ್ಯಕ್ಷ ಭಾಸ್ಕರ್ ರೈ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯ ಕ್ರಮ ನಿರೂಪಿಸಿದರು.
Discover more from Coastal Times Kannada
Subscribe to get the latest posts sent to your email.
Discussion about this post