ಮಂಗಳೂರು : ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ಕರ್ನಾಟಕ ಸ್ವಿಮ್ಮಿಂಗ್ ಅಸೋಸಿಯೇಶನ್ ಸಹಯೋಗದಲ್ಲಿ ಮಂಗಳೂರಿನ ಅಲೋಸಿಯಸ್ ಈಜುಕೋಳದಲ್ಲಿ ಆಯೋಸಿದ 17ನೇ ರಾಷ್ಟ್ರ ಮಟ್ಟದ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ ನಲ್ಲಿ ಅಜೆಕಾರು ಗ್ರಾಮದ ವಿದ್ಯಾ ಪೈ ಅವರು 2 ಕಂಚಿನ ಪದಕ ವಿಜೇತರಾಗಿದ್ದಾರೆ.
ಅಜೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕಿಯಾಗಿರುವ ವಿದ್ಯಾ ಪೈ ಅವರು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.