• About us
  • Contact us
  • Disclaimer
Saturday, December 6, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೋಟೆಕಾರು ಬ್ಯಾಂಕ್‌ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್, ಆರೋಪಿ ಮುರುಗನ್ ದೇವರ್ ಮೇಲೆ ಫೈರಿಂಗ್

Coastal Times by Coastal Times
February 2, 2025
in ಕ್ರೈಮ್ ನ್ಯೂಸ್
ಕೋಟೆಕಾರು ಬ್ಯಾಂಕ್‌ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್, ಆರೋಪಿ ಮುರುಗನ್ ದೇವರ್ ಮೇಲೆ ಫೈರಿಂಗ್
170
VIEWS
WhatsappTelegramShare on FacebookShare on Twitter

ಮಂಗಳೂರು, ಫೆ.1: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾಗ ಆರೋಪಿ ಮುರುಗನ್ ಡಿ ದೇವರ್ ಕಾಲಿಗೆ ಗುಂಡು ಹಾರಿಸಿದ್ದಾರೆ.

ದರೋಡೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮುರುಗನ್ ದೇವರ್ ಮತ್ತು ಯೋಶುವಾ ರಾಜೇಂದ್ರನ್ ಅವರನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಲಾಗಿತ್ತು.‌ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಫೆ.3ರ ವರೆಗೆ ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ಸ್ಥಳ ಮಹಜರು ಉದ್ದೇಶಕ್ಕಾಗಿ ಕರೆದೊಯ್ದಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ, ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಫೈರಿಂಗ್ ಮಾಡಿದ್ದು ಕಾಲಿಗೆ ಗುಂಡೇಟು ಬಿದ್ದಿದೆ. ಸದ್ಯ ಗಾಯಾಳು ಆರೋಪಿಯನ್ನು ದೇರಳಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಯಲ್ಲಿ ಪೊಲೀಸ್ ಸಿಬ್ಬಂದಿ ಮಂಜುನಾಥ್ ಎಂಬವರಿಗೆ ಗಾಯವಾಗಿದೆ. ಮಂಜುನಾಥ್ ಮೇಲೆ ಹಲ್ಲೆ ನಡೆಸಿ ಮುರುಗನ್ ಪರಾರಿಯಾಗಲು ಯತ್ನಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ನಾಲ್ಕೇ ದಿನದಲ್ಲಿ ಕಣ್ಣನ್ ಮಣಿಯನ್ನು ಬಂಧಿಸಿ, ಸ್ಥಳ ಮಹಜರು ಕರೆದೊಯ್ದಿದ್ದಾಗಲೂ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದರು. ಇದೀಗ ಎರಡನೇ ಬಾರಿಗೆ ಗುಂಡು ಹಾರಿಸಿದ್ದಾರೆ.

ಪೊಲೀಸ್ ಮಾಹಿತಿ ಪ್ರಕಾರ, ಆರೋಪಿಗಳು ದರೋಡೆ ಕೃತ್ಯದ ಮೊದಲು ಅಜ್ಜಿನಡ್ಕ ಎಂಬಲ್ಲಿ ತಮ್ಮ ರಿವಾಲ್ವರನ್ನು ಎಸೆದು ಹೋಗಿದ್ದರು. ರಿವಾಲ್ವರ್ ಪತ್ತೆ ಮಾಡಲು ಪ್ರಮುಖ ಆರೋಪಿ ಮುರುಗನ್ ದೇವರ್ ನನ್ನು ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ ಉಳ್ಳಾಲ ಠಾಣೆಯ ಪೇದೆ ಮಂಜುನಾಥ್ ಅವರ ಮರ್ಮಾಂಗಕ್ಕೆ ತುಳಿದು ಮುರುಗನ್ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ತಪ್ಪಿಸಲು ಯತ್ನಿಸಿದ ಆರೋಪಿ ಮುರುಗನ್ ಮೇಲೆ ಇನ್ಸ್ ಪೆಕ್ಟರ್ ಬಾಲಕೃಷ್ಣ ಫೈರಿಂಗ್ ಮಾಡಿದ್ದು ಕಾಲಿಗೆ ಗುಂಡೇಟು ಬಿದ್ದಿದೆ. ಸ್ಥಳದಲ್ಲಿ ರಿವಾಲ್ವರ್ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮೆಟಲ್ ಡಿಟೆಕ್ಟರ್ ತಂಡವನ್ನೂ ಸ್ಥಳಕ್ಕೆ ಕರೆಸಿದ್ದಾರೆ.

ಮುರುಗಂಡಿ ಥೇವರ್‌  ಈ ಹಿಂದೆ 2016ರಲ್ಲಿ ಮುಂಬಯಿಯ ಫೈನಾನ್ಸ್‌ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಈತನ ಮೇಲೆ ಮುಲುಂಡ್‌ ಸಹಿತ ಇತರ ಎರಡು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಬಾಲಕಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ: ಮೂವರಿಗೆ 20 ವರ್ಷ ಜೈಲು,1.65 ಲ.ರೂ. ದಂಡ

Next Post

ಮಂಗಳೂರು-ದಿಲ್ಲಿ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಕಾರ್ಯಾರಂಭ

Related Posts

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !
ಕ್ರೈಮ್ ನ್ಯೂಸ್

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

December 5, 2025
53
ಮಂಗಳೂರು: ಬಂಗ್ರ-ಕೂಳೂರು ಬಳಿ ಗಾಂಜಾ, ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಬಂಗ್ರ-ಕೂಳೂರು ಬಳಿ ಗಾಂಜಾ, ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

December 3, 2025
33
Next Post
ಮಂಗಳೂರು-ದಿಲ್ಲಿ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಕಾರ್ಯಾರಂಭ

ಮಂಗಳೂರು-ದಿಲ್ಲಿ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಕಾರ್ಯಾರಂಭ

Discussion about this post

Recent News

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

December 5, 2025
53
ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

December 4, 2025
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

December 5, 2025
ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

December 4, 2025
ಮಂಗಳೂರು: ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಶಿವಗಿರಿ ಮಠಕ್ಕೆ 5 ಎಕರೆ ಜಮೀನು ಸಿಎಂ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಶಿವಗಿರಿ ಮಠಕ್ಕೆ 5 ಎಕರೆ ಜಮೀನು ಸಿಎಂ ಘೋಷಣೆ

December 4, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d