• About us
  • Contact us
  • Disclaimer
Friday, April 17, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

Coastal Times by Coastal Times
March 2, 2026
in ಕರಾವಳಿ
ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ
83
VIEWS
WhatsappTelegramShare on FacebookShare on Twitter

ಮಂಗಳೂರು: ನಗರದಲ್ಲಿ ಬಹು ವರ್ಷಗಳಿಂದ ಸಾರ್ವಜನಿಕರು ಸಾಕಷ್ಟು ಟ್ರಾಫಿಕ್‌ ಸಮಸ್ಯೆ ಹಾಗೂ ಕಿರಿಕಿರಿ ಅನುಭವಿಸುತ್ತಿದ್ದ ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆಯ ಭಾಗವನ್ನು ಚತುಷ್ಪಥವಾಗಿ ಅಭಿವೃದ್ದಿಪಡಿಸಲು ದಕ್ಷಿಣ ರೈಲ್ವೆಯಿಂದ ಅನುಮೋದನೆ ದೊರೆತಿದೆ ಎಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಕಚೇರಿ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರ ಕಚೇರಿ, ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ನಲ್ಲಿ ಉಂಟಾಗಿರುವ ಗಂಭೀರ ಟ್ರಾಫಿಕ್‌ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಈ ಭಾಗದ ಜನರ ಬಹುವರ್ಷಗಳ ಬೇಡಿಕೆಯಾಗಿದೆ. ಅದರಂತೆ ಈ ಸಮಸ್ಯೆಯ ಗಂಭೀರತೆ ಅರಿತ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ರೈಲ್ವೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಮಾತ್ರವಲ್ಲದೇ ಈ ಲೆವೆಲ್‌ ಕ್ರಾಸಿಂಗ್‌ನಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದ್ದು ಈ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ಹಾಗೂ ರೈಲ್ವೆ ಅಧಿಕಾರಿಗಳು ಸಮನ್ವಯತೆಯಿಂದ ಪರಿಹಾರ-ಮಾರ್ಗೋಪಾಯಗಳ ಬಗ್ಗೆ ಸಮಗ್ರ ವರದಿಯನ್ನು ತಯಾರಿಸಬೇಕು ಹಾಗೂ ಈ ವರದಿಯನ್ನು ರೈಲ್ವೆ ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಮನಪಾ ಅಧಿಕಾರಿಗಳಿಗೆ ನಿರ್ದೇಶಿಸಿದ್ದರು. ಪಾಲಿಕೆ ನೀಡುವ ಈ ವರದಿ ಸಮಸ್ಯೆಯ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿರಲಿದೆ ಎಂದು ಸಂಸದರು ಒತ್ತಿ ಹೇಳಿದ್ದರು.

ದಕ್ಷಿಣ ರೈಲ್ವೆ ವ್ಯಾಪ್ತಿಗೆ ಸೇರಿರುವ ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆಯನ್ನು ನಾಲ್ಕು ಪಥಗಳ ರಸ್ತೆಯಾಗಿ ಅಭಿವೃದ್ಧಿಪಡಿಸುವುದಕ್ಕೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ದಕ್ಷಿಣ ರೈಲ್ವೆಯ ಜಿಎಂ ಹಾಗೂ ಪಾಲಕ್ಕಾಡ್ ವಿಭಾಗದ ಡಿಆರ್‌ಎಂ ಅವರೊಂದಿಗೆ ಸಂಸದರು ನಿರಂತರ ಚರ್ಚೆ ನಡೆಸಿದ ಹಿನ್ನಲೆಯಲ್ಲಿ ಈ ರೈಲ್ವೆ ಗೇಟ್‌ ವ್ಯಾಪ್ತಿಯ ರಸ್ತೆಯನ್ನು ಮೇಲ್ದರ್ಜೆಗೇರಿಸುವ ಮೂಲಕ ಗಂಭೀರ ಸಮಸ್ಯೆಗೆ ಪರಿಹಾರ ಒದಗಿಸುವುದಕ್ಕೆ ಸಾಧ್ಯವಾಗಿದೆ. ಈ ಲೆವೆಲ್‌ ಕ್ರಾಸಿಂಗ್‌ ರಸ್ತೆ ಅಗಲೀಕರಣಕ್ಕೆ ಸದ್ಯ ಅಂದಾಜು ಪಟ್ಟಿ ಸಿದ್ಧಪಡಿಸಲಾಗುತ್ತದೆ. ಮಾರ್ಚ್‌ ಅಂತ್ಯದೊಳಗೆ ಪಾಂಡೇಶ್ವರ ಲೆವಲ್‌ ಕ್ರಾಸಿಂಗ್‌ ರಸ್ತೆ ಅಗಲೀಕರಣ ಕಾಮಗಾರಿಗೆ ಟೆಂಡರ್‌ ಪ್ರಕ್ರಿಯೆ ನಡೆಯಲಿದೆ. ಇಲ್ಲಿ ಮನಪಾ ವ್ಯಾಪ್ತಿಗೆ ಸಂಬಂಧಪಟ್ಟ ಚತುಷ್ಪಥ ರಸ್ತೆ ಇದ್ದು, ರೈಲ್ವೆ ವ್ಯಾಪ್ತಿಯ ರಸ್ತೆ ಮಾತ್ರ ದ್ವಿಪಥವಾಗಿದೆ. ಇಲ್ಲಿ ಅಗಲೀಕರಣಗೊಂಡರೆ ಲೆವೆಲ್‌ ಕ್ರಾಸಿಂಗ್‌ ರಸ್ತೆ ಕೂಡ ಚತುಷ್ಪಥ ರಸ್ತೆಯಾಗಿ ವಾಹನ ಸುಗಮ ಸಂಚಾರಕ್ಕೆ ಅನುಕೂಲವಾಗುತ್ತದೆ. ಜತೆಗೆ ಸುರಕ್ಷತೆಗಾಗಿ ‘ಡಬಲ್ ಬೂಮ್’ ಆಟೋಮ್ಯಾಟಿಕ್ ಗೇಟ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಇದರಿಂದ ಈ ರಸ್ತೆಯಲ್ಲಿ ಭವಿಷ್ಯದಲ್ಲಿ ಸುಗಮ ಸಂಚಾರದ ಜತೆಗೆ ಟ್ರಾಫಿಕ್‌ ದಟ್ಟನೆ ಸಮಸ್ಯೆಯೂ ಬಗೆಹರಿಯಲಿದೆ ಎಂದು ಸಂಸದರ ಕಚೇರಿ ತಿಳಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

Next Post

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಬೆದರಿಕೆ ಸಂದೇಶ: ಎಫ್‌ಐಆರ್ ದಾಖಲು

Related Posts

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.
ಕರಾವಳಿ

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
9
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು
ಕರಾವಳಿ

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
69
Next Post
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಬೆದರಿಕೆ ಸಂದೇಶ: ಎಫ್‌ಐಆರ್ ದಾಖಲು

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಬೆದರಿಕೆ ಸಂದೇಶ: ಎಫ್‌ಐಆರ್ ದಾಖಲು

Discussion about this post

Recent News

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
9
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
69
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d