ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ರವಿವಾರ ಭಾರೀ ಸಂಖ್ಯೆಯ ಪೊಲೀಸರು ದಿಢೀರ್ ತಪಾಸಣೆ ನಡೆಸಲಾಗಿದೆ. ದಿಢೀರ್ ಆಗಿ ಸುಮಾರು 250 ಮಂದಿ ಪೊಲೀಸರು ಏಕಕಾಲಕ್ಕೆ ಆಗಮಿಸಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸುಮಾರು 250ಕ್ಕೂ ಅಧಿಕ ಪೊಲೀಸರು ಏಕಕಾಲಕ್ಕೆ ಜೈಲಿನಲ್ಲಿ ಕೈದಿಗಳ ತಪಾಸಣೆ ನಡೆಸಿದ್ದಾರೆ ಎನ್ನಲಾಗಿದೆ. ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ, ಡಿಸಿಪಿ ಅಂಶುಕುಮಾರ್ ಸಹಿತ ಹಿರಿಯ ಅಧಿಕಾರಿಗಳು ತಪಾಸಣೆ ಮಾಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.



Discover more from Coastal Times Kannada
Subscribe to get the latest posts sent to your email.







Discussion about this post