• About us
  • Contact us
  • Disclaimer
Wednesday, April 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ: ಪದ್ಮನಾಭ ಸಾಮಂತ್ ಆತ್ಮಹತ್ಯೆ; ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಕಾಂಗ್ರೆಸ್ ಮುಖಂಡರ ನಿಯೋಗ ಭೇಟಿ

Coastal Times by Coastal Times
April 2, 2024
in ಕರಾವಳಿ
ಬಂಟ್ವಾಳ: ಪದ್ಮನಾಭ ಸಾಮಂತ್ ಆತ್ಮಹತ್ಯೆ; ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಕಾಂಗ್ರೆಸ್ ಮುಖಂಡರ ನಿಯೋಗ ಭೇಟಿ
17
VIEWS
WhatsappTelegramShare on FacebookShare on Twitter

ಬಂಟ್ವಾಳ, ಏ 02: ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ ಸಾಮಂತ್ ರವರ ಮೃತದೇಹ ಮಾರ್ಚ್ 31ರಂದು ಅವರ ಮನೆಯ ಸ್ವಲ್ಪ ದೂರದಲ್ಲಿನ ನಿರ್ಜನ ಗುಡ್ಡ ಪ್ರದೇಶದಲ್ಲಿನ ಮರದ ತುದಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಹಾಗೂ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮುಖಂಡರ ನಿಯೋಗ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ ನೀಡಿದೆ.

ಪದ್ಮನಾಭ ಸಾಮಂತ್ ರವರು ಒಬ್ಬ ಆರ್ ಟಿಐ ಕಾರ್ಯಕರ್ತನಾಗಿದ್ದು, ಬಂಟ್ವಾಳ ತಾಲೂಕಿನಲ್ಲಿನ ಹಲವಾರು ಭ್ರಷ್ಟಚಾರ ಹಗರಣಗಳನ್ನು ಬಯಲಿಗೆಳಂತಹ ವ್ಯಕ್ತಿ ಎಂಬ ಹೆಗ್ಗಳಿಕೆ ಇವರಿಗಿದೆ. ಬಂಟ್ವಾಳ ಅಕ್ರಮ ಸಕ್ರಮ ಸಮಿತಿ 2019 ರಿಂದ 2023 ರವರೆಗಿನ ಅಕ್ರಮ-ಸಕ್ರಮ ಭೂಮಂಜೂರಾತಿಗೆ ಸಂಬಂಧಪಟ್ಟಂತೆ ಸಮಿತಿಯು ನಡೆಸಿದಂತಹ ಅಕ್ರಮ ವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಸರಕಾರವನ್ನು ಒತ್ತಾಯಿಸಿ ದೂರು ದಾಖಲಿಸಿದ್ದರು ಬಂಟ್ವಾಳ ಕ್ಷೇತ್ರದ ಶಾಸಕರ ಹಿಂಬಾಲಕರೊಬ್ಬರು ಬಂಟ್ವಾಳ ಬೈಪಾಸ್‌ನಲ್ಲಿ ನಿರ್ಮಿಸಿದ ಅನಧಿಕೃತ ಕಟ್ಟಡದ ವಿರುದ್ಧ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ, ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿಯವರ ವಿರುದ್ಧ ಕ್ರಮಕೈಗೊಳ್ಳುವಂತೆ ದೂರು ನೀಡುವಲ್ಲಿ ಕೂಡ ಪ್ರಮುಖ ಪಾತ್ರ ವಹಿಸಿದ್ದರು. ಬಂಟ್ವಾಳ ಕ್ಷೇತ್ರದ ಹಲವಾರು ಕಡೆಗಳಲ್ಲಿ ಕಳಪೆ ರಸ್ತೆ ಡಾಮಾರೀಕರಣ/ಕಾಂಕ್ರೀಟಿಕರಣ ಬಗ್ಗೆ ಸಾರ್ವಜನಿಕರ ಪರವಾಗಿ ಧ್ವನಿ ಎತ್ತಿ, ಸಂಬಂಧಿಸಿದ ವ್ಯಕ್ತಿಗಳ ವಿರುದ್ಧ ದೂರನ್ನು ಸಲ್ಲಿಸಿದ್ದರು. ಸಿದ್ದಕಟ್ಟೆ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರ ಬ್ಯಾಂಕ್ ಅವ್ಯವಹಾರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ಪ್ರಶ್ನಿಸಿದ್ದರು. ಹೀಗೆ ಬಂಟ್ವಾಳ ತಾಲೂಕಿನಾದ್ಯಂತ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳ ಬಗ್ಗೆ ಪ್ರಶ್ನೆಯನ್ನು ಮಾಡುತ್ತಾ ಭ್ರಷ್ಟರಿಗೆ ಸಿಂಹಸ್ವಪ್ನರಾಗಿದ್ದರು ಎಂದು ಕಾಂಗ್ರೆಸ್ ಮುಖಂಡರ ನಿಯೋಗ ತಿಳಿಸಿದೆ.

ಹೀಗಿರುವಲ್ಲಿ ಪದ್ಮನಾಭ ಸಾಮಂತ್ ರವರು ಒಬ್ಬ ಧೃಡ ಮನಸ್ಸಿನ ವ್ಯಕ್ತಿಯಾಗಿದ್ದು, ಯಾವುದೇ ರೀತಿಯಲ್ಲಿ ಆತ್ಮಹತ್ಯೆ ಮಾಡತಕ್ಕಂತಹ ದುರ್ಬಲ ಮನಸ್ಸಿನ ವ್ಯಕ್ತಿಯಲ್ಲ ಎಂಬುದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಆದರೆ ಅವರ ಸಾವಿನ ರೀತಿ ಮತ್ತು ಮೃತದೇಹ ಇದ್ದಂತಹ ಸ್ಥಿತಿಗತಿ ಅವರ ಸಾವಿನ ಬಗ್ಗೆ ಸಂಶಯವನ್ನು ವ್ಯಕ್ತಪಡಿಸುತ್ತಿದೆ. ಅವರು ಕೆಲವೊಂದು ರಾಜಕೀಯ ಪ್ರಭಾವಿ ವ್ಯಕ್ತಿಗಳ ವಿರುದ್ಧ ಮತ್ತು ಅವರ ಅಕ್ರಮಗಳ ವಿರುದ್ದ ಯಾವುದೇ ಮುಲಾಜಿಲ್ಲದೆ ಸಂಬಂಧಿಸಿದ ಮೇಲಾಧಿಕಾರಿಗಳಿಗೆ ದೂರನ್ನು ಸಲ್ಲಿಸುತ್ತಿದ್ದರು. ಇದೇ ಕಾರಣಕ್ಕಾಗಿ ಪದ್ಮನಾಭ ಸಾಮಂತ್ ರವರಿಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದವು. ಹೀಗಾಗಿ ಪೋಲಿಸ್ ಮೇಲಾಧಿಕಾರಿಗಳಿಗೆ ದೂರನ್ನು ಸಲ್ಲಿಸಿ ಸೂಕ್ತ ರಕ್ಷಣೆಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಆದುದರಿಂದ ಈ ಎಲ್ಲಾ ಸನ್ನಿವೇಶಗಳು ಪದ್ಮನಾಭ ಸಾಮಂತ್ ರವರ ಸಾವಿನ ಬಗ್ಗೆ ಅನುಮಾನಕ್ಕೆ ಕಾರಣವಾಗಿದೆ. ರಾಜಕೀಯ ವಲಯದಲ್ಲಿ ಕೂಡ ಅವರ ಮೇಲೆ ವೈಯಕ್ತಿಕ ದ್ವೇಷವನ್ನು ಹೊಂದಿದ್ದ ವ್ಯಕ್ತಿಗಳು, ಅವರ ಸಾವಿನ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸುದ್ದಿಗಳನ್ನು ಅವರ ವಿರುದ್ಧ ಬಿತ್ತರಿಸಿದ್ದರು. ಈ ಎಲ್ಲಾ ವ್ಯಕ್ತಿಗಳ ಬಗ್ಗೆ ಸೂಕ್ತ ರೀತಿಯ ತನಿಖೆಯ ಅಗತ್ಯವಿರುತ್ತದೆ ಎಂದು ನಿಯೋಗ ಹೇಳಿದೆ.

ಆದುದರಿಂದ ಪದ್ಮನಾಭ ಸಾಮಂತ್ ರವರ ಸಾವು ಹೇಗೆ ಸಂಭವಿಸಿತು ಹಾಗೂ ಅದರ ಹಿಂದಿನ ಕಾರಣವನ್ನು ಕಂಡು ಹಿಡಿಯಲು ಸೂಕ್ತ ತನಿಖೆಯನ್ನು ಕೈಗೊಳ್ಳಬೇಕು. ಈ ಕಾರಣಕ್ಕಾಗಿ ವಿಶೇಷ ಪೋಲಿಸ್ ತಂಡವನ್ನು ರಚಿಸಿ ತನಿಖೆ ಮಾಡಬೇಕು. ಒಂದು ವೇಳೆ ತನಿಖೆಯಲ್ಲಿ ಆತ್ಮಹತ್ಯೆ ಎಂದು ತಿಳಿದುಬಂದರೆ ಇದಕ್ಕೆ ಪ್ರಚೋದನೆಗೈದು ಘಟನೆಗೆ ಕಾರಣರಾದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಾಗಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ವಿನಂತಿಸಿದರು.

ಈ ಸಂದರ್ಭ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಿಯೂಸ್ ರೊಡ್ರಿಗಸ್, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ,ಎಂ ಎಸ್ ಮೊಹಮ್ಮದ್, ಅಬ್ಬಾಸ್ ಅಲಿ,ನಾರಾಯಣ ನಾಯ್ಕ್,ಪ್ರಶಾಂತ್ ಕುಲಾಲ್,ಸುರೇಶ್ ನಾವೂರ ವಕೀಲರು,ಉಮಾಕರ್ ಬಂಗೇರ, ಪ್ರವೀಣ್ ರೊಡ್ರಿಗಸ್ ಮತ್ತಿತರರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ

Next Post

ಬೆಂಗಳೂರು: ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಶಿಕ್ಷಕಿಗೆ ಬರೋಬ್ಬರಿ 4 ಕೋಟಿ ವಂಚನೆ, ನಾಲ್ವರನ್ನು ಬಂಧಿಸಿದ ಸಿಸಿಬಿ

Related Posts

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ
ಕರಾವಳಿ

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

March 27, 2026
14
ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ
ಕರಾವಳಿ

ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ

March 26, 2026
20
Next Post
ಬೆಂಗಳೂರು: ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಶಿಕ್ಷಕಿಗೆ ಬರೋಬ್ಬರಿ 4 ಕೋಟಿ ವಂಚನೆ, ನಾಲ್ವರನ್ನು ಬಂಧಿಸಿದ ಸಿಸಿಬಿ

ಬೆಂಗಳೂರು: ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಶಿಕ್ಷಕಿಗೆ ಬರೋಬ್ಬರಿ 4 ಕೋಟಿ ವಂಚನೆ, ನಾಲ್ವರನ್ನು ಬಂಧಿಸಿದ ಸಿಸಿಬಿ

Discussion about this post

Recent News

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

March 31, 2026
83
ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

March 29, 2026
62
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

March 31, 2026
ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

March 29, 2026
ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d