ಮಂಗಳೂರು: ಸಮುದ್ರ ವಿಹಾರಕ್ಕೆಂದು ಬಂದಿದ್ದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳ ಮೇಲೆ ತಂಡವೊಂದು ದಾಳಿ ನಡೆಸಿದ ವರದಿಯಾಗಿದ್ದು, ಉಳ್ಳಾಲ ಸೋಮೇಶ್ವರ ಬೀಚ್ನಲ್ಲಿ ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕರಾವಳಿ ನಗರ ಮಂಗಳೂರಿನ ಸೋಮೇಶ್ವರ ಬೀಚ್ನಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಮೂವರು ಹಿಂದೂ ವಿದ್ಯಾರ್ಥಿನಿಯರು, ಮೂವರು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ದಾಳಿ ನಡೆದಿದೆ. ಮೂಲಗಳ ಪ್ರಕಾರ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದರು. ಇದೇ ವೇಳೆ ತಂಡವೊಂದು ಹಲ್ಲೆ ನಡೆಸಿದೆ ಎನ್ನಲಾಗಿದೆ.
ಕೇರಳದ ಕಣ್ಣೂರಿನ ಯುವಕರು ಹಾಗೂ ಕಾಸರಗೋಡಿನ ಯುವತಿಯರು ಉಳ್ಳಾಲ ಸೋಮೇಶ್ವರ ಬೀಚ್ಗೆ ವಿಹಾರಕ್ಕೆ ಬಂದಿದ್ದರು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದಕ್ಕೆ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ. ಗಾಯಾಳು ವಿದ್ಯಾರ್ಥಿಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ವಿದ್ಯಾರ್ಥಿನಿಯರು ವಾಪಸ್ ಊರಿಗೆ ತೆರಳಿದ್ದಾರೆ ಎನ್ನಲಾಗಿದೆ. ಘಟನೆ ಬಗ್ಗೆ ಉಳ್ಳಾಲ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇನ್ನು ರಾಜ್ಯದಲ್ಲಿ ಇನ್ಮುಂದೆ ನೈತಿಕ ಪೊಲೀಸ್ಗಿರಿಗೆ ಅವಕಾಶ ಇಲ್ಲ, ಹೀಗೆ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಇತ್ತೀಚೆಗೆ ಪೊಲೀಸ್ ಇಲಾಖೆಗೆ ಖಡಕ್ ಸೂಚನೆ ನೀಡಿದ್ದರು. ಬಳಿಕ ಅಧಿಕಾರಿಗಳು ಕೂಡ ನೈತಿಕ ಪೊಲೀಸ್ ಗಿರಿ ನಡೆಸುವವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇದರ ಬೆನ್ನಲ್ಲೇ ನೈತಿಕ ಪೊಲೀಸ್ ಗಿರಿಯ 3ನೇ ಘಟನೆ ವರದಿಯಾಗಿದೆ.
An incident of #moralpolicing reported at someshwar beach in #Mangalore. Three #Muslim youths assaulted for hanging out with female #Hindu friends. All are reportedly medical students & 4m #kerala studying there. Cops inform no case regd yet. More details awaited-#Karnataka pic.twitter.com/lBMdtSWYAv
— Imran Khan (@KeypadGuerilla) June 1, 2023
Discover more from Coastal Times Kannada
Subscribe to get the latest posts sent to your email.







Discussion about this post