• About us
  • Contact us
  • Disclaimer
Wednesday, April 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರ ಪ್ರತಿಭಟನೆ; ಹಿಂದೂ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ ಎಫ್​ಐಆರ್​​​

Coastal Times by Coastal Times
June 2, 2025
in ಕರಾವಳಿ
ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರ ಪ್ರತಿಭಟನೆ; ಹಿಂದೂ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ ಎಫ್​ಐಆರ್​​​
42
VIEWS
WhatsappTelegramShare on FacebookShare on Twitter

ಕಡಬ : ದ.ಕ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿವಿಧ ಸಂಘಟನೆಗಳ ಪ್ರಮುಖರನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಇದನ್ನು ವಿರೋಧಿಸಿ ಕಡಬ ಪೊಲೀಸ್ ಠಾಣೆಯ ಮುಂದೆ ಅನುಮತಿಯಿಲ್ಲದೇ ಪ್ರತಿಭಟನೆ ನಡೆಸಿದ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.

ಪೊಲೀಸರ ಮುಂಜಾಗ್ರತಾ ಕ್ರಮವನ್ನು ವಿರೋಧಿಸಿ, ದಿನಾಂಕ 01-06-2025ರಂದು ರಾತ್ರಿ ಕಡಬ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಕಡಬದ ಸಂಘಟನೆ ಪ್ರಮುಖರು ಪ್ರತಿಭಟನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಮೋದ್ ರೈ ನಂದುಗುರಿ, ತಿಲಕ್ ನಂದುಗುರಿ, ಮೋಹನ ಕೆರೆಕೋಡಿ, ಚಂದ್ರಶೇಖರ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯತ್ ನಂದುಗುರಿ, ಉಮೇಶ್ ನೂಜಿಬಾಳ್ತಿಲ, ರಾಧಾಕೃಷ್ಣ.ಕೆ, ಜಯಂತ್, ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಎಸ್​ಪಿ ಡಾ.ಅರುಣ್ ಕೆ. ಮಾಹಿತಿ ನೀಡಿದ್ದಾರೆ.

ಇವರು ರಾತ್ರಿ ವೇಳೆಯಲ್ಲಿ ಯಾವುದೇ ಪೂರ್ವಾನುಮತಿ ಪಡೆಯದೇ ಮತ್ತು ಅಕ್ರಮವಾಗಿ ಗುಂಪು ಕಟ್ಟಿಕೊಂಡು ಕಡಬ ಠಾಣೆಯ ಮುಂಬಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ್ದಾರೆ ಎಂಬುದಾಗಿ ಇವರ ವಿರುದ್ದ ಕಡಬ​​ ಠಾಣೆಯಲ್ಲಿ ಕಲಂ: 189(2),190 BNS-2023 ಅಡಿ ಕೇಸ್​​ ದಾಖಲು ಮಾಡಲಾಗಿದೆ ಎಂದು ಎಸ್​ಪಿ ತಿಳಿಸಿದ್ದಾರೆ.

ಜಿಲ್ಲೆಗೆ ನೂತನ ಎಸ್​ಪಿಯಾಗಿ ಅಧಿಕಾರ ವಹಿಸಿರುವ ಡಾ.ಅರುಣ್ ಕೆ. ಅವರು, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈಗಾಗಲೇ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವವರ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಪ್ರಸ್ತುತ ಜಿಲ್ಲೆಯ ಪೊಲೀಸರು ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಿದ್ದಾರೆ. ಹೀಗಾಗಿ ಎಲ್ಲಾ ಠಾಣೆಗಳಲ್ಲಿ ಪೊಲೀಸರು ಮತ್ತಷ್ಟು ಅಲರ್ಟ್ ಆಗಿದ್ದಾರೆ.

ಈ ಮಧ್ಯೆ ಮೇ 30 ಹಾಗೂ ಮೇ 31ರಂದು ಹಾಗೂ ಜೂ 1ರಂದು ರಾತ್ರಿ ವೇಳೆ ಕಡಬ ಎಸ್ಐ ಹಾಗೂ ಸಿಬ್ಬಂದಿಯು ವಿವಿಧ ಸಂಘಟನೆಯಲ್ಲಿ ಗುರುತಿಸಿಕೊಂಡಿರುವವರ ಮನೆಗೆ ತೆರಳಿ ಜಿಪಿಎಸ್ ಫೋಟೋ ಪಡೆದು, ಅವರನ್ನು ವಿಚಾರಿಸಿಕೊಂಡು ಹೋಗುತ್ತಿದ್ದರು. ಈ ಮದ್ಯೆ ಜೂನ್​ 1ರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಹಲವರು ಕಡಬ ಪೊಲೀಸ್ ಠಾಣೆಗೆ ಆಗಮಿಸಿ ನಮ್ಮನ್ನು ಹುಡುಕಿಕೊಂಡು ನೀವು ಮನೆಗೆ ಬರುವುದು ಬೇಡ, ನಾವೇ ಠಾಣೆಗೆ ಬಂದಿದ್ದೇವೆ. ಎಷ್ಟು ಬೇಕಾದರೂ ಫೋಟೋ ತೆಗೆದುಕೊಳ್ಳಿ, ಯಾವ ರೀತಿಯ ತನಿಖೆ ಬೇಕಾದರೂ ಮಾಡಿ ಎಂದು ಹೇಳಿ ಠಾಣೆಯ ಎದುರಲ್ಲಿ ಕುಳಿತುಕೊಂಡು ಪ್ರತಿಭಟನೆ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್​ಐಆರ್​​​

Next Post

ಪುತ್ತೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್, ಜೂ.6ರಂದು ವಿಚಾರಣೆಗೆ ಹಾಜರಾಗಲು ಸೂಚನೆ

Related Posts

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ
ಕರಾವಳಿ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
0
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್
ಕರಾವಳಿ

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
16
Next Post
ಪುತ್ತೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್, ಜೂ.6ರಂದು ವಿಚಾರಣೆಗೆ ಹಾಜರಾಗಲು ಸೂಚನೆ

ಪುತ್ತೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್, ಜೂ.6ರಂದು ವಿಚಾರಣೆಗೆ ಹಾಜರಾಗಲು ಸೂಚನೆ

Discussion about this post

Recent News

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
0
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d