• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ಮಕ್ಕಳಿಗೆ ವಾಹನ ನೀಡಿದರೆ, ವಾಹನ ನೀಡಿದ ಮಾಲೀಕರ ವಿರುದ್ಧ ಕಠಿಣ ಕ್ರಮ – ಕುಲದೀಪ್ ಕುಮಾರ್ ಜೈನ್

Coastal Times by Coastal Times
July 2, 2023
in ಕರಾವಳಿ
‘ಮಕ್ಕಳಿಗೆ ವಾಹನ ನೀಡಿದರೆ, ವಾಹನ ನೀಡಿದ ಮಾಲೀಕರ ವಿರುದ್ಧ ಕಠಿಣ ಕ್ರಮ – ಕುಲದೀಪ್ ಕುಮಾರ್ ಜೈನ್
94
VIEWS
WhatsappTelegramShare on FacebookShare on Twitter

ಮಂಗಳೂರು: ಹೆಚ್ಚುತ್ತಿರುವ ಮಕ್ಕಳ ದ್ವಿಚಕ್ರ ವಾಹನ ಚಾಲನೆ, ಹಿರಿಯ ನಾಗರಿಕರಿಗೆ ಬಸ್‌ನಲ್ಲಿ ಸೀಟ್ ಬಿಟ್ಟು ಕೊಡದಿರುವುದು, ವಾಹನಗಳಲ್ಲಿ ತರಕಾರಿ ಮಾರಾಟದ ವಿರುದ್ಧ ಕ್ರಮ ಜರುಗಿಸಬೇಕು ಸೇರಿದಂತೆ ಅನೇಕ ದೂರುಗಳನ್ನು ಸಾರ್ವಜನಿಕರು ನಗರ ಪೊಲೀಸ್ ಕಮಿಷನರ್ ಬಳಿ ಹೇಳಿಕೊಂಡರು. ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಫೋನ್ ಇನ್‌ ಕಾರ್ಯಕ್ರಮದಲ್ಲಿ ಪೊಲೀಸ್ ಕಮಿಷನರ್ ಕುಲದೀಪ್‌ಕುಮಾರ್ ಜೈನ್ ಅವರು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದರು.

‘ಮಕ್ಕಳಿಗೆ ವಾಹನ ನೀಡಿದರೆ, ವಾಹನ ನೀಡಿದ ಮಾಲೀಕರ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು’ ಎಂದು ಕುಲದೀಪ್ ಕುಮಾರ್ ಜೈನ್ ಹೇಳಿದರು. ಸುರತ್ಕಲ್ ಪರಿಸರದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿ ವಿಶೇಷ ನಿಗಾವಹಿಸಲಾಗಿದೆ. ಕಾನೂನು ಉಲ್ಲಂಘಿಸಿ ವಾಹನ ಚಲಾಯಿಸುವ ಮಕ್ಕಳ ಪಾಲಕರನ್ನು ಕರೆಸಿ ಎಚ್ಚರಿಕೆ ನೀಡಲಾಗುತ್ತಿದೆ. ಶಾಲೆಗಳಲ್ಲೂ ಜಾಗೃತಿ ಕಾರ್ಯ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ನಗರದಲ್ಲಿ ಕೆಲವು ಬಾರ್‌ ಮತ್ತು ವೈನ್‌ಶಾಪ್‌ಗಳಲ್ಲಿ ಸಮಯ ಪಾಲನೆ ಮಾಡುತ್ತಿಲ್ಲ. ನಿಗದಿತ ಸಮಯಕ್ಕೆ ಬಾಗಿಲು ಬಂದ್ ಆಗುತ್ತಿಲ್ಲ ಎಂದು ಸಾರ್ವಜನಿಕರೊಬ್ಬರು ದೂರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಮಿಷನರ್, ‘ನಗರದ ಎಲ್ಲ ಬಾರ್ ಮತ್ತು ವೈನ್‌ಶಾಪ್‌ಗಳ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸುತ್ತಿದ್ದೇವೆ. ನಿಯಮ ಉಲ್ಲಂಘನೆ ಪ್ರಕರಣಗಳು ಕಂಡಲ್ಲಿ, ಕ್ರಮಕ್ಕೆ ಅಬಕಾರಿ ಇಲಾಖೆಗೆ ಮನವಿ ಮಾಡಿದ್ದೇವೆ’ ಎಂದರು.

ಬಸ್‌ಗಳ ಕರ್ಕಶ ಹಾರನ್‌ಗಳ ಹಾವಳಿ ಮಿತಿ ಮೀರಿದೆ. ಇದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಕರೆ ಮಾಡಿದವರೊಬ್ಬರು ದೂರಿದರು. ‘ಈಗಾಗಲೇ ಬಸ್ ಮಾಲೀಕರ ಸಭೆ ನಡೆಸಿದ್ದು, ಸೂಚನೆ ನೀಡಲಾಗಿದೆ. ಪೊಲೀಸರು ಕೂಡ ನಿರಂತರ ಕಾರ್ಯಾಚರಣೆ ನಡೆಸಿ, ಕರ್ಕಶ ಹಾರನ್‌ಗಳ ತೆರವು ಕಾರ್ಯ ಮಾಡುತ್ತಿದ್ದಾರೆ’ ಎಂದು ಪೊಲೀಸ್ ಕಮಿಷನರ್ ಉತ್ತರಿಸಿದರು.

ವಾಹನಗಳಲ್ಲಿ ತರಕಾರಿ ಮಾರಾಟ ಮಾಡುವವರ ವಿರುದ್ಧ ಕ್ರಮವಹಿಸಬೇಕು, ಬಸ್‌ಗಳಲ್ಲಿ ಹಿರಿಯ ನಾಗರಿಕರು ಇದ್ದರೆ ಅವರಿಗೆ ಸೀಟ್ ಕೊಡಲು ಆದ್ಯತೆ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

ಡಿಸಿಪಿಗಳಾದ ಅಂಶು ಕುಮಾರ್, ದಿನೇಶ್ ಕುಮಾರ್, ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿ, ಸಿಸಿಆರ್‌ಬಿ ಎಸಿಪಿ ರವೀಶ್ ನಾಯಕ್ ಇದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬ್ರ್ಯಾಂಡ್ ಮಂಗಳೂರು ಉತ್ತಮ ಪರಿಕಲ್ಪನೆ -ಕುಲದೀಪ್ ಆರ್ ಜೈನ್

Next Post

ರೀಲ್ಸ್ ಮಾಡಲು ಹೋಗಿ ಜಲಪಾತದಿಂದ ಕೆಳಗೆ ಬಿದ್ದು ಮಂಗಳೂರು ಮೂಲದ ವಿದ್ಯಾರ್ಥಿ ಮೃತ್ಯು

Related Posts

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
59
ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ
ಕರಾವಳಿ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
29
Next Post
ರೀಲ್ಸ್ ಮಾಡಲು ಹೋಗಿ ಜಲಪಾತದಿಂದ ಕೆಳಗೆ ಬಿದ್ದು ಮಂಗಳೂರು ಮೂಲದ ವಿದ್ಯಾರ್ಥಿ ಮೃತ್ಯು

ರೀಲ್ಸ್ ಮಾಡಲು ಹೋಗಿ ಜಲಪಾತದಿಂದ ಕೆಳಗೆ ಬಿದ್ದು ಮಂಗಳೂರು ಮೂಲದ ವಿದ್ಯಾರ್ಥಿ ಮೃತ್ಯು

Discussion about this post

Recent News

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
59
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d