ಉಳ್ಳಾಲ: ಮಹಿಳಾ ಪೊಲೀಸ್ ಪೇದೆಗೆ ನಿವೃತ್ತ ಯೋಧನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕುಂಪಲದ ಬಗಂಬಿಲದಲ್ಲಿ ನಡೆದಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲ್ಯ ಕನೀರುತೋಟ ನಿವಾಸಿ, ನಿವೃತ್ತ ಯೋಧ ಪ್ರಶಾಂತ್ (45) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲ್ಯ ಕನೀರುತೋಟ ನಿವಾಸಿ, ಸದ್ಯ ಕುಂಪಲ ಅಮೃತನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುವ ಪ್ರಶಾಂತ್ (45) ಕಿರುಕುಳ ನೀಡಿದವ. ಠಾಣೆಯೊಂದರ ಮಹಿಳಾ ಪೇದೆ ಸ್ಕೂಟರಿನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಸಂದರ್ಭ ಅಡ್ಡಗಟ್ಟಿದ ಪ್ರಶಾಂತ್, ಪೇದೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ತತ್‌ಕ್ಷಣ ಬೊಬ್ಬಿಟ್ಟಾಗ ಸ್ಥಳೀಯರು ಸೇರಿ ಪ್ರಶಾಂತ್‌ನನ್ನು ಹಿಡಿದು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಉಳ್ಳಾಲ ಠಾಣೆಯಲ್ಲಿ ಪ್ರಶಾಂತ್ ವಿರುದ್ಧ ಹಲವು ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ನೆರೆಮನೆಯವರಿಗೆ, ಊರಿನವರಿಗೆ ನಿತ್ಯ ಕುಡಿದು ಬಂದು ಕಿರುಕುಳ ನೀಡುವ ಈತನ ವಿರುದ್ಧ ಹಲವು ಮಂದಿ ನೊಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೂ ಈವರೆಗೂ ಯಾವುದೇ ಕ್ರಮವಾಗದೇ, ಈತನ ಉಪಟಳ ಮುಂದುವರಿದಿದೆ.
Discover more from Coastal Times Kannada
Subscribe to get the latest posts sent to your email.
Discussion about this post