ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಸಂಘಪರಿವಾರದ ಕಾರ್ಯಕರ್ತನನ್ನು ವಿಟ್ಲ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಬಾಯಾರು ನಿವಾಸಿಗಳಾದ ಸುಕುಮಾರ ಬೆಳ್ಚಡ, ಅಕ್ಷಯ್ ದೇವಾಡಿಗ ಮತ್ತು ಕಮಲಾಕ್ಷ ಬೆಳ್ಚಡ ಬಂಧಿತರು.
ನೊಂದ ಬಾಲಕಿ ಐದು ಮಂದಿಯ ಹೆಸರನ್ನು ದೂರಿನಲ್ಲಿ ತಿಳಿಸಿದ್ದು, ಮೂಡುಬಿದರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ (28) ಎಂಬವರನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ.
ಸೋಮವಾರ ಪೆರುವಾಯಿ ನಿವಾಸಿ ಜಯಪ್ರಕಾಶ್ (38) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೂರು ಮಂದಿಯನ್ನು ರವಿವಾರ ಬಂಧಿಸಿದ್ದು, ಓರ್ವನನ್ನು ಸೋಮವಾರ ಬಂಧಿಸಿದರೆ, ಇನ್ನೋರ್ವ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಕುಮಾರ್ ಎರಡು – ಮೂರು ವರ್ಷಗಳಿಂದ 16 ವರ್ಷದ ಹುಡುಗಿಯನ್ನು ಪ್ರೀತಿಸುವ ನೆಪದಲ್ಲಿ ತಿರುಗಾಟ ಮಾಡುತ್ತಿದ್ದ ಎಂಬ ಆರೋಪಗಳಿದ್ದು, ಇತ್ತೀಚೆಗೆ ತನ್ನ ಇತರ ಸ್ನೇಹಿತರಿಗೂ ಆಕೆಯನ್ನು ಒಪ್ಪಿಸಿದ್ದ. ಅಲ್ಲದೆ, ಮನೆಯೊಂದರಲ್ಲಿ ಐವರು ಸೇರಿ ಒಂದು ವಾರದ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಘಟನೆಗೆ ಸಂಬಂಧಿಸಿ ವಿಟ್ಲ ಪೊಲೀಸರು ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
Discussion about this post