ಮಂಗಳೂರು: ಭಾರೀ ಮಳೆಯಿಂದ ಮುಳುಗಡೆಯಾದ ಮಂಗಳೂರಿನ ವಿವಿಧ ಸ್ಥಳಗಳಿಗೆ ಸಚಿವ ದಿನೇಶ್ ಗುಂಡೂರಾವ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅದ್ಯಪಾಡಿಗೆ ಸಚಿವರು ಭೇಟಿ ನೀಡಿದಾಗ, ಅಕ್ಕಪಕ್ಕದ ಗ್ರಾಮಗಳು ಜಲಾವೃತವಾಗಿರುವ ಬಗ್ಗೆ ಸ್ಥಳೀಯರು ಚರ್ಚಿಸಿದರು. ಪ್ರತೀ ವರ್ಷ ಫಲ್ಗುಣಿ ನದಿಯ ಪ್ರವಾಹದ ಬಗ್ಗೆ ಮಾಹಿತಿ ನೀಡಿದರು.
ತೋಟ, ಗದ್ದೆಗಳು ಮುಳುಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಗುಂಡೂರಾವ್ ಸೂಚನೆ ನೀಡಿದರು. ಅದ್ಯಪಾಡಿಯ ಅಕ್ಕಪಕ್ಕದ ಹಳ್ಳಿಗಳಿಗೆ ಪಲ್ಗುಣಿ ನದಿ ನೆರೆ ಹಾವಳಿ ತಡೆಯಲು, ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರಿಂದ ವರದಿ ಪಡೆದು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಇಲ್ಲಿನ ಕೆತ್ತಿಕಲ್ ಭೂ ಮಾಫಿಯಾ ಆರೋಪದ ಬಗ್ಗೆ ಉನ್ನತ ತನಿಖೆಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆದೇಶಿಸಿದ್ದಾರೆ. ಮಂಗಳೂರಿನ ಕೆತ್ತಿಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಆತಂಕವಿರುವ ಸ್ಥಳಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ (ಆ.2) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆತ್ತಿಕಲ್ ನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹೆದ್ದಾರಿ ಕಾಮಗಾರಿ ಹೆಸರಿನಲ್ಲಿ ಗಣಿಗಾರಿಕೆ ಮಾಡಲಾಗಿದೆ. ದೊಡ್ಡ ಪ್ರಮಾಣದ ಲೋಪವಾಗಿರುವುದು ಕಂಡು ಬಂದಿದೆ. ಫೆಬ್ರವರಿ ತಿಂಗಳಲ್ಲೇ ಜಿಲ್ಲಾಡಳಿತ ಪಾಲಿಕೆ ಮುನ್ಸೂಚನೆ ನೀಡಿತ್ತು. ಪಾಲಿಕೆ ಯಾವ ಕ್ರಮ ಕೈಗೊಂಡಿದೆ ಎಂದು ಪರಿಶೀಲನೆ ನಡೆಸುತ್ತೇವೆ. ಗಣಿ ಭೂ ವಿಜ್ಞಾನ ಇಲಾಖೆ ಮಣ್ಣು ಅಗೆಯಲು ಅವಕಾಶ ಯಾಕೆ ನೀಡಿದೆ ಎಂದು ವರದಿ ಕೇಳುತ್ತೇವೆ ಎಂದರು.
Discover more from Coastal Times Kannada
Subscribe to get the latest posts sent to your email.
Discussion about this post