ಉಳ್ಳಾಲ, ಅ.2: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಉಳ್ಳಾಲದ ಮೇಲಂಗಡಿಯ ಮನೆಯೊಂದರ ಹಂಚಿನ ಛಾವಣಿ ಇಂದು ಬೆಳಗ್ಗೆ ಕುಸಿದು ಬಿದ್ದಿದ್ದು ಮನೆಯೊಳಗಿದ್ದ ಇಬ್ಬರು ಗಾಯಗೊಂಡಿದ್ದಾರೆ. ಉಳಿದವರು ಮನೆಯ ಹಾಲಿನ ಸೀಲಿಂಗ್ ನಿಂದ ರಕ್ಷಣೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೇಲಂಗಡಿ ನಿವಾಸಿ ವೃದ್ಧೆ ಖತೀಜಮ್ಮ ಎಂಬವರ ಮನೆಯ ಹಂಚಿನ ಛಾವಣಿ ಇಂದು ಬೆಳಗ್ಗೆ ಕುಸಿದು ಬಿದ್ದಿದೆ. ಘಟನೆಯಿಂದ ಖತೀಜಮ್ಮರ ಹಿರಿಯ ಮಗ ಖಲೀಲ್(38) ಮತ್ತು ಮೊಮ್ಮಗಳಾದ ಖತೀಜತುಲ್ ಕುಬ್ರ(11) ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ವೇಳೆ ಖತೀಜಮ್ಮ ಮತ್ತು ಕಿರಿಯ ಮಗ ನಗರಸಭೆಯ ಮಾಜಿ ಉದ್ಯೋಗಿ ಅಬ್ಬಾಸ್ ಅವರು ಮನೆಯ ಹಾಲಲ್ಲಿದ್ದು ಛಾವಣಿಯ ಕೆಳಗಿನ ಫ್ಲೈವುಡ್ ಸೀಲಿಂಗ್ ನಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖತೀಜಮ್ಮರ ಇಬ್ಬರು ಸೊಸೆಯಂದಿರು ಉಡುಪಿಗೆ ತೆರಳಿದ್ದರು. ರಾತ್ರಿ ವೇಳೆ ಘಟನೆ ಸಂಭವಿಸಿದ್ದರೆ ಮನೆಯಲ್ಲಿ ಮಾರಣಹೋಮವೇ ನಡೆಯುತ್ತಿತ್ತೆಂದು ಖತೀಜಮ್ಮರ ಮಗ ಅಬ್ಬಾಸ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಘಟನೆ ನಡೆದು ಗಂಟೆಗಳು ಕಳೆದರೂ ನಗರಸಭೆಯ ಯಾರೊಬ್ಬ ಅಧಿಕಾರಿಗಳು ಘಟನಾ ಸ್ಥಳವನ್ನ ಇಣುಕಿ ನೋಡಿಲ್ಲ.
Discover more from Coastal Times Kannada
Subscribe to get the latest posts sent to your email.
Discussion about this post