ಮಂಗಳೂರು: ಕರಾವಳಿ ಭಾಗಕ್ಕೆ ಕೇಂದ್ರ ಸರ್ಕಾರದಿಂದ ಮಂಜೂರು ಆಗಿರುವ ವಿವಿಧ ಹೊಸ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಿಮೋಟ್ ಮೂಲಕ ನೆರವೇರಿಸಿದರು.
ಇದೇವೇಳೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆಗೆ ಪ್ರಧಾನಿ ಸಾಂಕೇತಿಕವಾಗಿ ಚಾಲನೆ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರನ್ನು ಹಾರ, ಪೇಟ ತೊಡಿಸಿ ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಸ್ವಾಗತಿಸಿದರು. ಉಡುಪಿ ಶ್ರೀಕೃಷ್ಣನ ವಿಗ್ರಹವನ್ನು ನೀಡಿದರು.
ಸಂಸದ ನಳಿನ್ ಕುಮಾರ್ ಕಟೀಲು ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರೆ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅವರು ಪರಶುರಾಮನ ಮೂರ್ತಿ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್ ಹಾಗೂ ಶಂತನು ಠಾಕೂರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಲೋಕಾರ್ಪಣೆಗೊಂಡ ಯೋಜನೆಗಳು: * ಕಂಟೇನರ್‌ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ ಯೋಜನೆ ವೆಚ್ಚ: ರೂ. 281 ಕೋಟಿ 6.02 ಎಂಟಿಪಿಎರಷ್ಟು ಹೆಚ್ಚುವರಿ ಸಾಮರ್ಥ್ಯ ,* ಬಿಎಸ್ 6 ಉನ್ನತೀಕರಣ ಯೋಜನೆ: ಬಿಎಸ್ 6 ಶ್ರೇಣಿ ಇಂಧನಗಳ ಉತ್ಪಾದನೆ ಯೋಜನೆ ವೆಚ್ಚ: ರೂ. 1,829 ಕೋಟಿ ,* ಸಮುದ್ರ ನೀರಿನ ನಿರ್ಲವಣೀಕರಣ ಘಟಕ: ಶುದ್ಧ ನೀರಿನ ಸಂರಕ್ಷಣೆ 30 ಎಂಎಲ್‍ಡಿ ನಿರ್ಲವಣೀಕರಣ ಸಾಮಥ್ರ್ಯದೊಂದಿಗೆ ಸುಸ್ಥಿರತೆಗೆ ಉತ್ತೇಜನ ಯೋಜನೆ ವೆಚ್ಚ: ರೂ. 677 ಕೋಟಿ.
ಶಿಲಾನ್ಯಾಸಗೊಂಡ ಯೋಜನೆಗಳು: * ಎನ್‍ಎಂಪಿಯಲ್ಲಿ ಸಮಗ್ರ ಎಲ್‍ಪಿಜಿ ಹಾಗೂ ಬೃಹತ್ ಪಿಒಎಲ್ ಸೌಲಭ್ಯ ಸ್ಥಾಪನೆ ಯೋಜನೆ ವೆಚ್ಚ: ರೂ. 500 ಕೋಟಿ , * ಎನ್‍ಎಂಪಿಯಲ್ಲಿ ಶೇಖರಣಾ ಟ್ಯಾಂಕ್‍ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ ಯೋಜನೆ ವೆಚ್ಚ: ರೂ. 100 ಕೋಟಿ, * ಎನ್‍ಎಂಪಿಎಯಲ್ಲಿ ಬಿಟುಮೆನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ ಯೋಜನೆ ವೆಚ್ಚ: ರೂ. 100 ಕೋಟಿ, * ಎನ್‍ಎಂಪಿಎಯಲ್ಲಿ ಬಿಟುಮೆನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್‍ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ ಯೋಜನೆ ವೆಚ್ಚ: ರೂ. 100 ಕೋಟಿ ,
ಭೂಮಿಪೂಜೆ ಆಗಿರುವ ಕಾಮಗಾರಿ: * ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕೆ ಬಂದರು ಅಭಿವೃದ್ಧಿ ಯೋಜನೆ ವೆಚ್ಚ: ರೂ. 196.51 ಕೋಟಿ.
ಮತ್ಸ್ಯ ಸಂಪದ ಯೋಜನೆಯಡಿ ಮೊದಲ ಬಾರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲಾಗುತ್ತಿದೆ. ಕುಳಾಯಿನಲ್ಲಿ ಇವತ್ತು ಬಂದರು ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದ್ದೇವೆ. ಡಬಲ್ ಇಂಜಿನ್ ಸರಕಾರ ದೇಶದ ಜನರ ಅಭಿವೃದ್ಧಿಗಾಗಿ ಪಣ ತೊಟ್ಟಿದೆ. ಮೀನುಗಾರಿಕೆ ಸೇರಿದಂತೆ ಸರ್ವ ಕ್ಷೇತ್ರಗಳಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇವೆ. ಕ್ಲೀನ್ ಇಕಾನಮಿ ಉದ್ದೇಶದಲ್ಲಿ ಆವಿಷ್ಕಾರ ಆಗಬೇಕಾಗಿದೆ. ದೇಶದ ಮೂಲೆ ಮೂಲೆಗೆ ಇಂಟರ್ನೆಟ್ ತಲುಪಿಸಲು ಆಪ್ಟಿಕಲ್ ಫೈಬರ್ ಹಾಕುತ್ತಿದ್ದೇವೆ. ತಂತ್ರಜ್ಞಾನ ತಲುಪಿಸುವ ಉದ್ದೇಶದಿಂದ ಎಲ್ಲ ಕಡೆಗೂ ಫೈವ್ ಜಿ ತರುವುದಕ್ಕಾಗಿ ಪ್ರಯತ್ನ ಪಡುತ್ತಿದ್ದೇವೆ. ಕರಾವಳಿ ಮತ್ತು ಪಶ್ಚಿಮ ಘಟ್ಟಗಳಲ್ಲಿ ಟೂರಿಸಂ ಅಭಿವೃದ್ಧಿ ಆಗಬೇಕಾಗಿದೆ. ಈಮೂಲಕ ಮಧ್ಯಮ ವರ್ಗದ ಜನರ ಶಕ್ತಿ ಹೆಚ್ಚಲು ನಾವು ಒತ್ತು ನೀಡಬೇಕಾಗಿದೆ. ಟೂರಿಸಂ ಅಭಿವೃದ್ಧಿಯಾದರೆ ಆಟೋ ಚಾಲಕರು, ಟ್ಯಾಕ್ಸಿ, ಹೊಟೇಲ್ ಹೀಗೆ ಮಧ್ಯಮ ವರ್ಗಕ್ಕೆ ಲಾಭ ಆಗುತ್ತದೆ. ಕರಾವಳಿಯಲ್ಲಿ ಟೂರಿಸಂ ಅಭಿವೃದ್ಧಿ ಪಡಿಸಲು ಸಾಕಷ್ಟು ಅವಕಾಶಗಳಿವೆ ಎಂದು ಮೋದಿ ಹೇಳಿದರು.
Discover more from Coastal Times Kannada
Subscribe to get the latest posts sent to your email.
Discussion about this post