ಮಂಗಳೂರು, ಸೆ.2 : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಲಗೇಜ್ ಬ್ಯಾಗ್ ನಲ್ಲಿದ್ದ 5 ಲಕ್ಷ ಮೌಲ್ಯದ 56 ಗ್ರಾಂ ಚಿನ್ನವನ್ನು ಕಳವುಗೈದ ಘಟನೆ ಬೆನ್ನತ್ತಿದ ಬಜ್ಪೆ ಪೊಲೀಸರು ಏರ್ಪೋರ್ಟ್ ನಲ್ಲಿ ಲೋಡಿಂಗ್ ಕೆಲಸ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಲೋಡಿಂಗ್ – ಅನ್ ಲೋಡಿಂಗ್ ಮಾಡುವ ಸಾಟ್ಸ್ ನೌಕರರಾದ ನಿತಿನ್, ಮೂಡುಪೆರಾರದ ನಿವಾಸಿಗಳಾದ ಸದಾನಂದ, ರಾಜೇಶ್, ಬಜ್ಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಮತ್ತು ಚಿನ್ನಾಭರಣ ಪಡೆದುಕೊಂಡು ಚಿನ್ನದ ಗಟ್ಟಿಯಾಗಿಸಿದ್ದ ಬಜ್ಪೆ ಮೂಡುಪೆರಾರ ನಿವಾಸಿ ರವಿರಾಜ್ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಿಆರ್‌ಪಿಎಫ್ ಜವಾನ ಹರಿಕೇಶ್ ಎಂಬವರ ಪತ್ನಿ ರಾಜೇಶ್ವರಿ ಪದ್ಮಶಾಲಿ ಅವರು ಆ.30ರಂದು ಬೆಂಗಳೂರಿನಿಂದ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಅವರ ಲಗೇಜ್ ಟ್ರೋಲಿ ಬ್ಯಾಗನ್ನು ತೆರದು 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಅವರು ಬಜ್ಪೆ ಪೊಲೀಸರಿಗೆ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡ ಬಜ್ಪೆ ಪೊಲೀಸ್ ನಿರೀಕ್ಷಕ ಸಂದೀಪ್ ಅವರು ತನಿಖೆ ಆರಂಭಿಸಿ ವಿಮಾನ ನಿಲ್ದಾಣದ ಲೋಡ್ ಮತ್ತು ಅನ್ ಲೋಡ್ ಮಾಡುತ್ತಿದ್ದ ನಾಲ್ಕು ಮಂದಿ ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಚಿನ್ನಾಭರಣ ಕದ್ದು ಬಜ್ಪೆ ಮೂಡುಪೆರಾರ ನಿವಾಸಿ ರವಿರಾಜ್ ಎಂಬಾತನಿಗೆ ಮಾರಿರುವುದಾಗಿ ತಪ್ಪೊಪ್ಪಿಕೊಂಡಿದ್ದರು. ಆರೋಪಿಗಳ ಹೇಳಿಗೆ ಅನುಸರಿಸಿ ರವಿರಾಜ್ ನನ್ನು ಬಂಧಿಸಿದ ಬಜ್ಪೆ ಪೊಲೀಸರು ಆತನ ಬಳಿಯಿಂದ ಮಹಿಳೆಯ ಚಿನ್ನಾಭರಣವನ್ನು ಕರಗಿಸಿ ಮಾಡಿದ್ದ ಸುಮಾರು 5 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
9 ವರ್ಷಗಳಿಂದ ಏರ್ ಇಂಡಿಯಾ ಸಂಸ್ಥೆಯ ಲೋಡ್ – ಅನ್ ಲೋಡ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಆರೋಪಿಗಳು 2025ರ ಜನವರಿಯಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ನಿಂದ ಕಳವುಗೈದಿದ್ದ 2 ಲಕ್ಷ ರೂ. ಪೊಲೀಸರು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ವಿಮಾನದ ಪ್ರಯಾಣಿಕರು ಬೆಲೆಬಾಳುವ ವಸ್ತುಗಳಾದ ಚಿನ್ನ, ನಗದನ್ನು ಬ್ಯಾಗೇಜ್ ನಲ್ಲಿ ಕಳುಹಿಸುವಾಗ ಸದ್ರಿ ಆರೋಪಿಗಳು ಬ್ಯಾಗ್ ತೆರೆದಿದ್ದಲ್ಲಿ ಹುಡುಕುವುದು. ಕೆಲವೊಮ್ಮೆ ಬ್ಯಾಗ್ ಲಾಕ್ ನ್ನು ಸುಲಭ ಪಾಸ್ ವಾರ್ಡ್ ಸಂಖ್ಯೆಗಳಿದ್ದಲ್ಲಿ ಪ್ರಯತ್ನಿಸಿ ಕಳವು ಮಾಡುತ್ತಿರುವುದು ಕಂಡು ಬಂದಿರುತ್ತದೆ. ಪ್ರಯಾಣಿಕರು ಈ ರೀತಿ ನಿರ್ಲಕ್ಷ್ಯತೋರದೇ, ಜಾಗ್ರತೆಯಿಂದ ಇರಬೇಕಾಗಿ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post