ಸುಳ್ಯ : ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಬಗ್ಗೆ ಸುಳಿವು ಕೊಟ್ಟರೆ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಘೋಷಿಸಿದೆ.ಕಳೆದ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಪೊಲೀಸರು ಸುಮಾರು 10 ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೊಲೆಗೆ ಪ್ರಮುಖವಾಗಿ ಸಂಚು ರೂಪಿಸಿದ ಹಾಗೂ ಸಹಾಯ ಮಾಡಿದ ಆರೋಪಿಗಳ ಪೈಕಿ ನಾಲ್ವರ ಬಂಧನವಾಗಿಲ್ಲ ಎನ್ನಲಾಗುತ್ತಿದೆ. ನಂತರ ಈ ಪ್ರಕರಣವು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾವಣೆಯಾಗಿತ್ತು.
ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು, ಪ್ರಮುಖ ಆರೋಪಿಗಳಾದ ಬೆಳ್ಳಾರೆಯ ಮಹಮ್ಮದ್ ಮುಸ್ತಾಫಾ ಮತ್ತು ಮಡಿಕೇರಿಯ ತುಫೈಲ್ ಬಗ್ಗೆ ಸುಳಿವು ನೀಡಿದರೆ ತಲಾ 5 ಲಕ್ಷ ರೂ. ಬಹುಮಾನ, ಜೊತೆಗೆ ಕೊಲೆಗೆ ಸಹಕಾರ ನೀಡಿದ ಸುಳ್ಯದ ಉಮ್ಮರ್ ಫಾರೂಕ್ ಹಾಗೂ ಬೆಳ್ಳಾರೆಯ ಅಬೂಬಕ್ಕರ್ ಸಿದ್ದಿಕ್ ಬಗ್ಗೆ ಮಾಹಿತಿ ನೀಡಿದರೆ ತಲಾ 2 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಈ ನಾಲ್ವರು ಆರೋಪಿಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯರು. ಇವರ ಪತ್ತೆಗೆ ನೆರವಾಗುವ ಮಾಹಿತಿದಾರರ ಹೆಸರನ್ನು ಗೋಪ್ಯವಾಗಿಡಲಾಗುವುದು. ಇವರ ಮಾಹಿತಿ ನೀಡಲು ಬಯಸುವವರು ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಎನ್‌ಐಎ ಹೇಳಿದೆ.
ವಿಳಾಸ: ಪೊಲೀಸ್ ವರಿಷ್ಠಾಧಿಕಾರಿ, ರಾಷ್ಟ್ರೀಯ ತನಿಖಾ ದಳ, 8ನೇ ಮಹಡಿ, ಸರ್.ಎಂ.ವಿಶ್ವೇಶ್ವರಯ್ಯ ಕೇಂದ್ರೀಯ ಸದನ, ದೊಮ್ಮಲೂರು, ಬೆಂಗಳೂರು 560071,ಸಂಪರ್ಕ: 080 29510900 ಅಥವಾ 8904241100
Discover more from Coastal Times Kannada
Subscribe to get the latest posts sent to your email.
Discussion about this post