• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಹೆಸರು ಸೇರ್ಪಡೆಗೆ ಇಂದಿನಿಂದ ವಿಶೇಷ ಅಭಿಯಾನ: ಜಿಲ್ಲಾಧಿಕಾರಿ ರವಿಕುಮಾರ್

Coastal Times by Coastal Times
December 2, 2022
in ಕರಾವಳಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಹೆಸರು ಸೇರ್ಪಡೆಗೆ ಇಂದಿನಿಂದ ವಿಶೇಷ ಅಭಿಯಾನ: ಜಿಲ್ಲಾಧಿಕಾರಿ ರವಿಕುಮಾರ್
20
VIEWS
WhatsappTelegramShare on FacebookShare on Twitter

ಮಂಗಳೂರು,ಡಿ.02 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಹೊಸ ಮತದಾರರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಡಿ.3 ಮತ್ತು 4ರಂದು ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಡಿ.8ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಯ ಸಮಯದಲ್ಲಿ ಮನೆ ಮನೆ ಸಮೀಕ್ಷೆ ನಡೆಯಲಿದೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಿಳಿಸಿದರು. ಅವರು ಡಿ.2ರ ಶುಕ್ರವಾರ ನಗರದ ಪ್ರೆಸ್ ಕ್ಲಬ್‍ನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಡಿ.26ರೊಳಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗುವುದು. 2023ರ ಜನವರಿ 5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಶನಿವಾರ ಮತ್ತು ಭಾನುವಾರ ನಡೆಯಲಿರುವ ವಿಶೇಷ ನೋಂದಣಿ ಅಭಿಯಾನದ ಮೂಲಕ ಅರ್ಹ ಮತದಾರರು ತಮ್ಮ ಹೆಸರು ಸೇರ್ಪಡೆಗೊಳಿಸಬಹುದು. ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಕಾಲೇಜು ಆಡಳಿತ ಮಂಡಳಿಗಳು ಮತದಾರರಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.

ಈ ಮೊದಲು ಜನವರಿ 1ರೊಳಗೆ 18 ವರ್ಷ ಪೂರ್ಣಗೊಳಿಸಿದವರ ಹೆಸರನ್ನು ಮಾತ್ರ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಅವಕಾಶವಿತ್ತು. ಪ್ರಸ್ತುತ 17 ವರ್ಷ ತುಂಬಿದ ಯುವಕರು ಒಂದು ವರ್ಷ ಮುಂಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಅದರಂತೆ ವರ್ಷದಲ್ಲಿ ನಾಲ್ಕು ಅರ್ಹತಾ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಮುಂಚಿತವಾಗಿ ಅರ್ಜಿ ಸಲ್ಲಿಸಿದವರನ್ನು ಜನವರಿ 1, ಎಪ್ರಿಲ್ 1, ಜುಲೈ 1 ಹಾಗೂ ಅಕ್ಟೋಬರ್ 1ರ ಅರ್ಹತಾ ದಿನಾಂಕಕ್ಕೆ 18 ವರ್ಷಗಳನ್ನು ಪೂರ್ಣಗೊಳಿಸುವ ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡಲಾಗುವುದು. ಆ ಪ್ರಕಾರ 17 ವರ್ಷ ದಾಟಿದ ಅರ್ಜಿದಾರರು ನಮೂನೆ 6ರಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅವರು ಹೇಳಿದರು.

ಮತದಾನದ ಸಂದರ್ಭ ಯಾವುದೇ ರೀತಿಯ ಆಕ್ಷೇಪಣೆ, ದೂರುಗಳಿಗೆ ಅವಕಾಶವಿರುವುದಿಲ್ಲ. ಹಾಗಾಗಿ ಡಿ. 8ರೊಳಗೆ ಎಲ್ಲ ಮತದಾರರು ಕರಡು ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಾತರಿಪಡಿಸಬೇಕು. ಹೆಸರು ಬಿಟ್ಟುಹೋಗಿದ್ದರೆ, ತಿದ್ದುಪಡಿ, ಆಕ್ಷೇಪಣೆ ಇದ್ದಲ್ಲಿ ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳ ಮೂಲಕ ಸಲ್ಲಿಸಬಹುದು. ಮತದಾರರ ಜಿಲ್ಲಾ ಸಹಾಯವಾಣಿ 1950ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿ ರಾಜಕೀಯ ಪಕ್ಷಗಳ ಸಹಿತ ಯಾರಿಂದಲೂ ಇದುವರೆಗೆ ಯಾವುದೇ ದೂರು ಬಂದಿಲ್ಲ. ಬಿಎಲ್‍ಒಗಳು ಪರಿಷ್ಕರಣೆಗೆ ತೆರಳಿಸುವ ಸಂದರ್ಭ ಸೂಕ್ತ ವಿಧಾನದ ಮೂಲಕ ಮರಣ ಆಗಿರುವ, ಹೊರ ದೇಶಗಳಲ್ಲಿರುವ ಮತದಾರರ ಹೆಸರನ್ನು ಪರಿಷ್ಕರಣೆ ಮಾಡಿದ್ದಾರೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ವಸತಿ ಸಮುಚ್ಛಯಗಳಿಗೆ ತೆರಳಿದಾಗ ಅಲ್ಲಿನ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ವರದಿಯಾಗಿದ್ದು, ಬಿಎಲ್‍ಒಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

8ನೇ ತರಗತಿ ಬಾಲಕರಿಂದ ಸಹಪಾಠಿ ಮೇಲೆ ಅತ್ಯಾಚಾರ, ಪೋಕ್ಸೊ ಪ್ರಕರಣ ದಾಖಲು

Next Post

ಮಂಗಳೂರು: ಗಾಂಜಾ ನಶೆಯಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ; ಪಿಕಪ್‌ ಚಾಲಕನಿಗೆ ಸಾರ್ವಜನಿಕರಿಂದ ಹಲ್ಲೆ

Related Posts

ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ
ಕರಾವಳಿ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
17
ಬೆಳೆಗಾರರ ಬೆಂಬಲದಿಂದ 2025-26 ರ ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ, ದಾಖಲೆ ಸಾಧನೆ:  ರೂ.3,735 ಕೋಟಿ ವಹಿವಾಟು, ರೂ.49.62 ಕೋಟಿ ಲಾಭ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d