• About us
  • Contact us
  • Disclaimer
Saturday, May 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದ.ಕ ಪತ್ರಕರ್ತರ ಜಿಲ್ಲಾ ಸಮ್ಮೇಳನ ಉದ್ಘಾಟನೆ ,ಸಮಾಜದ ಅಭಿವೃದ್ಧಿಗೆ ಪತ್ರಕರ್ತರ ಕೊಡುಗೆ ಶ್ರೇಷ್ಠವಾದುದು : ಪ್ರಕಾಶ್ ಶೆಟ್ಟಿ ಅಭಿಮತ

Coastal Times by Coastal Times
January 3, 2023
in ಕರಾವಳಿ
ದ.ಕ ಪತ್ರಕರ್ತರ ಜಿಲ್ಲಾ ಸಮ್ಮೇಳನ ಉದ್ಘಾಟನೆ ,ಸಮಾಜದ ಅಭಿವೃದ್ಧಿಗೆ ಪತ್ರಕರ್ತರ ಕೊಡುಗೆ ಶ್ರೇಷ್ಠವಾದುದು : ಪ್ರಕಾಶ್ ಶೆಟ್ಟಿ ಅಭಿಮತ
38
VIEWS
WhatsappTelegramShare on FacebookShare on Twitter

ಮಂಗಳೂರು; ಸಮಾಜದ ಅಭಿವೃದ್ಧಿಗೆ ಪತ್ರಕರ್ತರ ಕೊಡುಗೆಗಾಗಿ ಶ್ರೇಷ್ಠವಾದುದು. ಜನ ಸಾಮಾನ್ಯರ ಮತ್ತು ಸರಕಾರದ ಮಧ್ಯೆ ಸೇತುವೆಯಾಗಿ ಮಾಧ್ಯಮಗಳು ಕೆಲಸ‌ ಮಾಡುತ್ತಿದೆ ಎಂದು ಎಂಆರ್‌ಜಿ ಗ್ರೂಪ್ ಆಡಳಿತ ನಿರ್ದೇಶಕರಾದ ಪ್ರಕಾಶ್ ಶೆಟ್ಟಿ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಪತ್ರಕರ್ತರ ಜಿಲ್ಲಾ ಸಮ್ಮೇಳನ -2023 ನ್ನು ಉದ್ಘಾಟಿಸಿ ಅವರು ಮಾತನಾಡಿದರು. ನನ್ನ ಎಲ್ಲಾ ಬೆಳವಣಿಗೆಗೆ ಪತ್ರಕರ್ತರು ಸದಾ ಬೆನ್ನೆಲುಬಾಗಿ ನಿಂತು ಸಹಕಾರ ನೀಡಿದ್ದಾರೆ. ಉದ್ಯಮದ‌ ಬೆಳವಣಿಗೆಗೆ ಪತ್ರಕರ್ತರು ದೊಡ್ಡ ಸಹಾಯ ನೀಡಿದ್ದಾರೆ ಎಂದು ಅವರು ಹೇಳಿದರು.

ಪತ್ರಕರ್ತರ ಕ್ಷೇಮ ನಿಧಿಗೆ ಚಾಲನೆ ನೀಡಿ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರ ‘ಭಾವ ಚಿತ್ರ ಯಾನ -2’ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್‌ಕುಮಾರ್ ಕಟೀಲ್ ‘ಪತ್ರಕರ್ತರಿಗೆ ನಿವೇಶನ ಬೇಡಿಕೆ ಗಮನದಲ್ಲಿದೆ. ಮುಖ್ಯ ಮಂತ್ರಿ ಹಾಗು ಕಂದಾಯ ಸಚಿವರ ಜೊತೆ ಮಾತನಾಡಿ ಪತ್ರಕರ್ತರಿಗೆ ನಿವೇಶನ ಒದಗಿಸಲು ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು. ಪತ್ರಕರ್ತರ ಗ್ರಾಮ ವಾಸ್ತವ್ಯ ಮಾದರಿ ಕಾರ್ಯಕ್ರಮ.ಈ ಕಾರ್ಯಕ್ರಮದ ಮಾದರಿಯಲ್ಲಿ ರಾಜ್ಯ ಸರಕಾರವು ಗ್ರಾಮ‌ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತಿದೆ. ಜಿಲ್ಲೆಯ ಅಭಿವೃದ್ಧಿಯ ಹಿನ್ನಲೆಯಲ್ಲಿ ಪತ್ರಕರ್ತರು ಸಹಕಾರ‌ ನೀಡಬೇಕು ಎಂದು ಅವರು ಹೇಳಿದರು‌.

ದ.ಕ ಜಿಲ್ಲಾ ಪತ್ರ ಕರ್ತರ ಸಂಘದ ನೆನಪಿನ ಸಂಚಿಕೆ ‘ಮಾಧ್ಯಮ’ವನ್ನು ಬಿಡುಗಡೆ ಮಾಡಿದ ವಿಧಾನ ಸಭೆಯ ಪ್ರತಿಪಕ್ಷ ಉಪನಾಯಕ ಶಾಸಕ ಯು. ಟಿ .ಖಾದರ್ ಮಾತನಾಡಿ ‘ಪತ್ರಕರ್ತರ ಮತ್ತು ರಾಜಕೀಯ ವ್ಯಕ್ತಿಗಳ ಮಧ್ಯೆ ಅನನ್ಯ ಮತ್ತು ಸಹೋದರ ಸಂಬಂಧ ಇದೆ. ಸೌಹಾರ್ಧಯುತ ಮತ್ತು ಪ್ರಬುದ್ಧ ಸಮಾಜ ನಿರ್ಮಿಸಿ, ಸಮಾಜದ‌ ಎಲ್ಲರನ್ನೂ ಜೋಡಿಸುವ ಕೆಲಸವನ್ನು ಪತ್ರಿಕಾ ರಂಗ ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲಾಗುತಿದೆ. ತಮ್ಮ ಕೆಲಸದ ಒತ್ತಡದ ನಡುವೆಯೂ ಸಾಮಾಜಿಕ ಕೆಲಸಗಳನ್ನು ಮಾಡುವ ಮೂಲಕ ದಕ್ಷಿಣ ಕನ್ನಡದ ಪತ್ರಕರ್ತರು ಮಾದರಿಯಾಗಿದ್ದಾರೆ ಎಂದು ಹೇಳಿದರು.

ಸಮ್ಮೇಳನದ ಅಧ್ಯಕ್ಷತೆಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಅಧ್ಯಕ್ಷ ಸದಾಶಿವ ಶೆಣೈ ವಹಿಸಿ ಮಾತನಾಡಿ ಮಾಧ್ಯಮ ಕವಲು ದಾರಿಯಲ್ಲಿದೆ. ಪತ್ರಿಕೋದ್ಯಮಕ್ಕೆ ಭವ್ಯವಾದ ಪರಂಪರೆ ಇದೆ. ಈ ಪರಂಪರೆಯನ್ನು ಮುಂದುವರಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಮಾದರಿಯಾಗಿ ಕಾರ್ಯನಿರ್ಚಹಿಸುತಿದ್ದಾರೆ ಎಂದು ಹೇಳಿದರು. ಮಾಧ್ಯಮ ಅಕಾಡೆಮಿಯ ವತಿಯಿಂದ ಹಿರಿಯ ಪತ್ರಕರ್ತರದು ಸೇರಿ 40 ಪುಸ್ತಕಗಳನ್ನು ಹೊರ ತರಲಿದೆ ಎಂದು ಹೇಳಿದರು.

ಪತ್ರಕರ್ತ ವಿಕ್ರಂ ಕಾಂತಿಕೆರೆಯವರ ಕೃತಿ ‘ಕಾವೇರಿ ತೀರದ ಪಯಣ’ ಕೃತಿ ಯನ್ನು ಶಾಸಕರಾದ ವೇದವ್ಯಾಸ ಕಾಮತ್ ಬಿಡುಗಡೆ ಮಾಡಿದರು. ಛಾಯಾಚಿತ್ರ ಪ್ರದರ್ಶನವನ್ನು ಶಾಸಕ ಡಾ.ವೈ.ಭರತ್ ಶೆಟ್ಟಿ ಉದ್ಘಾಟಿಸಿದರು.

ಬಿಜೈ- ಕಾಪಿಕಾಡ್ ಅಂಗನವಾಡಿ ಮಕ್ಕಳಿಗೆ ಕ್ರೀಡಾ ಪರಿಕರಗಳನ್ನು ಉದ್ಯಮಿ ಸಾಂಬಶಿವರಾವ್ ವಿತರಣೆ ಮಾಡಿದರು. ಪತ್ರಕರ್ತರ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪಟ್ಲ ಫೌಂಡೇಷನ್‌ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಚಾಲನೆ ನೀಡಿದರು.

ಪರಿಸರ ಸ್ನೇಹಿ ಯೋಜನೆಗೆ ಗುರ್ಮೆ ಫೌಂಡೇಶನ್‌ನ ಅಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು.

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಶುಭ ಹಾರೈಸಿದರು‌. ಮಂಗಳೂರು ಮೇಯರ್ ಜಯಾನಂದ‌ ಅಂಚನ್, ಮಂಗಳೂರು ವಿವಿ ಉಪಕುಲಪತಿಗಳಾದ ಪ್ರೊ.ಪಿ.ಎಸ್. ಯಡಪಡಿತ್ತಾಯ, ಬ್ಯಾಂಕ್ ಆಫ್ ಬರೋಡಾದ‌ ಪ್ರಾದೇಶಿಕ ಮುಖ್ಯಸ್ಥರಾದ ಗಾಯತ್ರಿ, ಕೆಐಒಸಿಎಲ್‌ನ ನಿರ್ದೇಶಕರಾದ ಮುರುಗೇಶ್, ಮುಂಬೈ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್, ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್, ರವೀಂದ್ರ ಶೆಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ‌ ಅಡ್ಕಸ್ಥಳ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್,ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು,ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಆರಿಫ್ ಪಡುಬಿದ್ರೆ,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ‌ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ರಾಷ್ಟ್ರೀಯ ಪತ್ರಿಕಾ ಮಂಡಳಿ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಕಳೆದುಹೋದ 18 ಗ್ರಾಂ ಚಿನ್ನದ ಬಳೆ ಮಹಿಳೆಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಸಿಬ್ಬಂದಿ

Next Post

ಮಂಗಳೂರಿನಲ್ಲಿ ಖೋಟಾ ನೋಟು ಜಾಲ ಪತ್ತೆ , ಸ್ಕೂಟರಿನಲ್ಲಿ 4.50 ಲಕ್ಷ ಮೌಲ್ಯದ ಖೋಟಾ ನೋಟು ಪತ್ತೆ: ಇಬ್ಬರ ಬಂಧನ

Related Posts

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್
ಕರಾವಳಿ

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
35
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ
ಕರಾವಳಿ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
3
Next Post
ಮಂಗಳೂರಿನಲ್ಲಿ ಖೋಟಾ ನೋಟು ಜಾಲ ಪತ್ತೆ , ಸ್ಕೂಟರಿನಲ್ಲಿ 4.50 ಲಕ್ಷ ಮೌಲ್ಯದ ಖೋಟಾ ನೋಟು ಪತ್ತೆ: ಇಬ್ಬರ ಬಂಧನ

ಮಂಗಳೂರಿನಲ್ಲಿ ಖೋಟಾ ನೋಟು ಜಾಲ ಪತ್ತೆ , ಸ್ಕೂಟರಿನಲ್ಲಿ 4.50 ಲಕ್ಷ ಮೌಲ್ಯದ ಖೋಟಾ ನೋಟು ಪತ್ತೆ: ಇಬ್ಬರ ಬಂಧನ

Discussion about this post

Recent News

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

May 8, 2026
31
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

May 8, 2026
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d