ಉಡುಪಿ: 2021ರ ಮಾರ್ಚ್ ನಲ್ಲಿ ಉಡುಪಿ ಮಹಿಳಾ ಠಾಣೆಯಲ್ಲಿ ದಾಖಲಾದ ಪೋಕ್ಸೋ ಪ್ರಕರಣ (Pocso case)ಕ್ಕೆ ಸಂಬಂಧಿಸಿದಂತೆ ಆರೋಪಿ ಆದಿಲ್ ಎಂಬಾತನನ್ನು ಆರೋಪ ಮುಕ್ತಗೊಳಿಸಿ ಉಡುಪಿ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಉಡುಪಿಯ ವಿಶೇಷ ಪೋಕ್ಸೊ ಮತ್ತು ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಶ್ರೀ ಶ್ರೀನಿವಾಸ್ ಸುವರ್ಣ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಉಡುಪಿಯ ಬ್ರಹ್ಮಾವರ ಎಂಬಲ್ಲಿ ವಾಸವಾಗಿದ್ದ ಆರೋಪಿತ ತನ್ನ ಪರಿಚಯದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ (Sexual harassament) ಎಸಗಿದ್ದ ಎಂದು ಆರೋಪಿಸಲಾಗಿತ್ತು. ಆರೋಪಿ ಅಪ್ರಾಪ್ತ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬುದು ತನಿಖೆ ಮತ್ತು ಸಾಕ್ಷ್ಯಾಧಾರಗಳಿಂದ ದೃಢಪಟ್ಟಿದೆ ಎಂದು ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿಸಲ್ಲಿಸಿದ್ದರು.
ಆದರೆ ಪ್ರಾಸಿಕ್ಯೂಷನ್ ಪರ ದಾಖಲೆಗಳನ್ನು ಹಾಜರುಪಡಿಸಿದ್ದರೂ ಮೌಖಿಕ ಹೇಳಿಕೆಗಳನ್ನು ಪರಿಗಣಿಸಿದ ನ್ಯಾಯಾಲಯ, ಅಭಿಯೋಜನೆಯು ಅಪರಾಧವನ್ನು ಸಾಬೀತುಮಾಡಲು ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟು ಆರೋಪಿಯನ್ನು ಖುಲಾಸೆಗೊಳಿಸಿತು.
ಆರೋಪಿಯ ಪರವಾಗಿ ಮಂಗಳೂರಿನ ಲೆಕ್ಸ್ ಜ್ಯೂರೀಸ್ ಲಾ ಚೇಂಬರ್ ಇದರ ವಕೀಲರಾದಂತಹ ಒಮರ್ ಫಾರೂಕ್ ಮುಲ್ಕಿ, ಮಹಮ್ಮದ್ ಅಸ್ಗರ್ ಮುಡಿಪು ಹಾಗೂ ಉಡುಪಿಯ ಲೆಕ್ಸ್ ಜ್ಯೂರೀಸ್ ಲಾ ಚೇಂಬರ್ ಇದರ ವಕೀಲರಾದಂತಹ ಅಬೂಬಕ್ಕರ್ ಸಿದ್ಧಿಕ್ M, ಮತ್ತು ಮಹಮ್ಮದ್ ಸಾದಿಕ್ ರವರು ವಾದಿಸಿದ್ದರು.
Discussion about this post