ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಬಳಿ ಸ್ಕೂಟರ್‌ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪೊಲೀಸರು ಸೋಮವಾರ ಇಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ. ಕಾಟಿಪಳ್ಳ ನಿವಾಸಿ ಉಮರ್ ಫಾರೂಕ್ (26), ಫೈಸಲ್ ನಗರ ನಿವಾಸಿ ಜುಟ್ಟು ಅಶ್ಫಕ್ (27) ಬಂಧಿತರು. ಇವರಿಂದ 19 ಗ್ರಾಂ ಎಂಡಿಎಂಎ ಡ್ರಗ್ಸ್ ಮತ್ತು ಕಪ್ಪು ಬಣ್ಣದ ಹೊಂಡಾ ಏಕ್ಟಿವಾ ಸ್ಕೂಟರ್ ಅನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಜುಟ್ಟು ಅಶ್ಫಾಕ್ ಮೇಲೆ ಮಂಗಳೂರು ನಗರದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ಕಂಕನಾಡಿ ನಗರ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ ,ದರೋಡೆ ಸುಲಿಗೆ ದೋಂಬಿಯಂತಹ ಒಟ್ಟು 12 ಪ್ರಕರಣಗಳು ದಾಖಲಾಗಿರುತ್ತವೆ. ಆರೋಪಿ ಇರ್ಫಾನ್‌ನ ಮೇಲೆ ಮಂಗಳೂರು ದಕ್ಷಿಣ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆ, ಮೂಡಬಿದ್ರೆ ಪೊಲೀಸ್ ಠಾಣೆ, ಬರ್ಕೆ ಪೊಲೀಸ್ ಠಾಣೆ, ಕೊಣಜೆ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್ ಠಾಣೆ, ಕಾರ್ಕಳ ನಗರ ಪೊಲೀಸ್ ಠಾಣೆ, ಶಿವ ಪೊಲೀಸ್ ಠಾಣೆ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ, ಮಂಗಳೂರು ಉತ್ತರ ಪೊಲೀಸ್ ಠಾಣೆ,ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಆರೋಪಿ ವಿರುದ್ಧ ಕೊಲೆಯತ್ನ, ದರೋಡೆ, ಸುಲಿಗೆ, ಸರಗಳ್ಳತನ, ದೊಂಬಿ, ವಾಹನ ಕಳ್ಳತನದಂತಹ ಒಟ್ಟು 25 ಪ್ರಕರಣಗಳು ದಾಖಲಾಗಿರುತ್ತವೆ ಎಂದು ನಗರ ಆಯುಕ್ತರ ಕಚೇರಿ ಪ್ರಕಟನೆ ತಿಳಿಸಿದೆ.
Discussion about this post