ಉಳ್ಳಾಲ, ಮಾ.03: ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದ ಕಿಡಿಗೇಡಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಭಟ್ಕಳ ದೇವಿನಗರ ನಿವಾಸಿ ಶಂಕರ್ ಮಸ್ತಪ್ಪ ಮೊಗೆರ್ (35) ಎಂದು ಪೊಲೀಸರು ತಿಳಿಸಿದ್ದಾರೆ.
ಈತ ʼshankar11916ʼ ಎಂಬ Instagram ಖಾತೆಯಲ್ಲಿ “Support maadi bro ullal masjid hatra bomb blast madthini” ಎಂದು ಪೋಸ್ಟ್ ಮಾಡಿದ್ದು, ಇದು ವೈರಲ್ ಆಗಿತ್ತು. ಇದನ್ನು ಸಾಮಾಜಿಕ ಜಾಲತಾಣದ ಮೋನಿಟರಿಂಗ್ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ದೊಡ್ಡಮನಿ ಅವರು ಗಮನಿಸಿದ್ದು, ಅವರು ಈ ಬಗ್ಗೆ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈ ಸಂದೇಶವು ವೈರಲ್ ಆಗುತ್ತಿದ್ದಂತೆಯೇ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಉಳ್ಳಾಲ ಪೊಲೀಸರು ಕಿಡಿಗೇಡಿ ವಿರುದ್ಧ ಸೋಮವಾರ ಸುಮೊಟೊ ಪ್ರಕರಣ ದಾಖಲಿಸಿದ್ದರು. ಧರ್ಮಗಳ ನಡುವೆ ದ್ವೇಷ ಬಿತ್ತಿದ ಕಿಡಿಗೇಡಿಯನ್ನು ಶೀಘ್ರವೇ ಬಂಧಿಸುವಂತೆ ಸ್ಪೀಕರ್ ಯು.ಟಿ.ಖಾದರ್ ಕೂಡ ನಗರ ಪೊಲೀಸ್ ಆಯುಕ್ತರನ್ನ ಆಗ್ರಹಿಸಿದ್ದರು.
Discover more from Coastal Times Kannada
Subscribe to get the latest posts sent to your email.








Discussion about this post