ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ಮಾಡುವುದಾಗಿ ಬೆದರಿಕೆ ಹಾಕಿದ ಕಾಮೆಂಟ್ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಲಾಗಿದ್ದ ಫೋಟೋಗೆ ಬಂದ ಕಾಮೆಂಟ್ ಬಾಕ್ಸ್‌ನಲ್ಲಿ ಶಂಕರ್ ಎಂಬ ಹೆಸರಿನಲ್ಲಿ ಬೆಂಬಲ ನೀಡಿ ಮಸೀದಿ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ ಎಂಬ ಬರಹ ಪೋಸ್ಟ್ ಮಾಡಲಾಗಿದೆ. ಈ ಕಾಮೆಂಟ್ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ವಿಷಯ ಪೊಲೀಸರ ಗಮನಕ್ಕೆ ಬಂದ ಬಳಿಕ ತಕ್ಷಣ ಕ್ರಮ ಕೈಗೊಳ್ಳಲಾಗಿದೆ.
ಈ ಕುರಿತು ಉಳ್ಳಾಲ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ‘ಸಾಮಾಜಿಕ ಜಾಲತಾಣದಲ್ಲಿ ಮಾಡಲಾದ ಈ ರೀತಿಯ ಕಾಮೆಂಟ್ ಸ್ಪಷ್ಟವಾಗಿ ಅಪರಾಧವಾಗಿದೆ. ಪ್ರಕರಣ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗುತ್ತಿದೆ. ಆರೋಪಿಯನ್ನು ಬಂಧಿಸಲಾಗುತ್ತದೆ. ಅಪರಾಧ ಮಾಡಿದವರ ವಿರುದ್ಧವೇ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಕರಣದ ತನಿಖೆ ಮುಂದುವರೆದಿದ್ದು, ಆರೋಪಿಯನ್ನು ಶೀಘ್ರ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.








Discussion about this post