ಮಂಗಳೂರು: ಕ್ರೈಸ್ತರು ಯೇಸುವಿನ ಸ್ಮರಣೆ ಮೂಲಕ ಶುಭ ಶುಕ್ರವಾರ (ಗುಡ್ ಫ್ರೈಡೇ) ಆಚರಿಸುತ್ತಿದ್ದಾರೆ. ಇಂದು ಮಂಗಳೂರು ನಗರದ ವಿವಿಧ ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ, ಶಿಲುಬೆಯ ಆರಾಧನೆಯೊಂದಿಗೆ ಆಚರಿಸಲಾಗುತ್ತಿದೆ. ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ, ಶಿಲುಬೆಯ ಹಾದಿ, ಶಿಲುಬೆಯ ಆರಾಧನೆ ಮತ್ತಿತರ ಕಾರ್ಯಕ್ರಮಗಳು ಬೆಳಗ್ಗೆಯಿಂದ ಆರಂಭಗೊಂಡಿವೆ.
ಯೇಸು ಕ್ರಿಸ್ತರಿಗೆ ಶಿಲುಬೆಯ ಮರಣ ಶಿಕ್ಷೆ ವಿಧಿಸಿದಲ್ಲಿಂದ ಆರಂಭಗೊಂಡು ಅವರು ಶಿಲುಬೆಯಲ್ಲಿ ಮರಣವನ್ನಪ್ಪಿ ಅವರ ಶರೀರವನ್ನು ಸಮಾಧಿ ಮಾಡುವಲ್ಲಿ ವರೆಗಿನ 14 ಪ್ರಮುಖ ಘಟನಾವಳಿಗೆ ಸಂಬಂಧಿಸಿದ ‘ಶಿಲುಬೆಯ ಹಾದಿ’ (ವೇ ಆಫ್ ದಿ ಕ್ರಾಸ್) ಪ್ರಮುಖ ಕಾರ್ಯಕ್ರಮವಾಗಿದೆ.


ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಇಂದು ಬೆಳಗ್ಗೆ ನಡೆದ ಶಿಲುಬೆಯ ಹಾದಿ ಕಾರ್ಯಕ್ರಮದಲ್ಲಿ ನೂರಾರು ಕ್ರೈಸ್ತರು ಭಾಗವಹಿಸಿದ್ದರು. ಚರ್ಚಿನ ಧರ್ಮಗುರು ಫಾ.ಬೊನಾವೆಂಚರ್ ನಝರೆತ್, ಸಹಾಯಕ ಧರ್ಮಗುರು ಅವಿತ್ ಪಾಯ್ಸ್ ನೇತೃತ್ವ ವಹಿಸಿದ್ದರು.
Discover more from Coastal Times Kannada
Subscribe to get the latest posts sent to your email.







Discussion about this post