ಮಂಗಳೂರು: ಜಿಲ್ಲೆಯಾದ್ಯಂತ ಮುಸ್ಲಿಮರು ‘ಈದ್-ಉಲ್-ಫಿತ್ರ್’ ಹಬ್ಬವನ್ನು ಮಂಗಳವಾರ ಸಡಗರದಿಂದ ಆಚರಿಸಿದರು. ಹೊಸ ಬಟ್ಟೆ ಧರಿಸಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಮನೆಯ ಆಚರಣೆಗಷ್ಟೇ ಸೀಮಿತವಾಗಿದ್ದ ಹಬ್ಬವನ್ನು ಈ ಬಾರಿ ಸಾಮೂಹಿಕವಾಗಿ ಆಚರಿಸುವ ಮೂಲಕ ಸಂಭ್ರಮಿಸಿದರು. ಜಿಲ್ಲೆಯ ಎಲ್ಲ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನಗಳು ನಡೆದವು. ನಗರದ ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ಬಂದರ್ ಝೀನತ್ ಬಕ್ಷ್ ಕೇಂದ್ರ ಜುಮ್ಮಾ ಮಸೀದಿಯ ಖತೀಬ್ ಅಲ್‌ಹಾಜ್ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ನೇತೃತ್ವದಲ್ಲಿ ಈದ್ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು. ಉಳ್ಳಾಲ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಖತೀಬ್ ಅನ್ವರ್ ಅಲಿ ದಾರಿಮಿ ನೇತೃತ್ವದಲ್ಲಿ ಈದ್ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು. ಪ್ರವಚನದ ಬಳಿಕ ಪರಸ್ಪರ ಹಸ್ತಲಾಘವ, ಆಲಿಂಗನದ ಮೂಲಕ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳಲಾಯಿತು.
Discover more from Coastal Times Kannada
Subscribe to get the latest posts sent to your email.
Discussion about this post