• About us
  • Contact us
  • Disclaimer
Friday, February 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು : ಸಹಪಾಠಿ ಹಿಂದೂ ವಿದ್ಯಾರ್ಥಿನಿ ಜೊತೆಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

Coastal Times by Coastal Times
May 3, 2023
in ಕರಾವಳಿ
ಪುತ್ತೂರು : ಸಹಪಾಠಿ ಹಿಂದೂ ವಿದ್ಯಾರ್ಥಿನಿ ಜೊತೆಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ
125
VIEWS
WhatsappTelegramShare on FacebookShare on Twitter

ಪುತ್ತೂರು : ಸಹಪಾಠಿ ಗೆಳತಿಯಾದ ಹಿಂದೂ ವಿದ್ಯಾರ್ಥಿನಿಯೊಂದಿಗೆ ಇದ್ದ ಮುಸ್ಲಿಂ ಯುವಕನೊಬ್ಬನ ಮೇಲೆ ಇಲ್ಲಿನ ಗುಂಪೊಂದು ಮಂಗಳವಾರ ಹಲ್ಲೆ ನಡೆಸಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಮರೀಲ್ ಕಾಡುಮನೆ ನಿವಾಸಿ ಕೆ. ಇಬ್ರಾಹಿಂ ಅವರ ಪುತ್ರ ಮಹಮ್ಮದ್ ಫಾರಿಶ್ (18) ಹಲ್ಲೆಗೊಳಗಾದ ವಿದ್ಯಾರ್ಥಿ. ಹಲ್ಲೆಯಿಂದಾಗಿ ಯುವಕನ ಮೈಮೇಲೆ ಬಾಸುಂಡೆಗಳು ಎದ್ದಿವೆ.

‘ಹಲ್ಲೆಗೊಳಗಾದ ಯುವಕ ಹಾಗೂ ಆತನ ಜೊತೆಗಿದ್ದ ಯುವತಿ ಇಬ್ಬರೂ ವಿದ್ಯಾರ್ಥಿಗಳು. ಇಬ್ಬರೂ ನಗರದ ಮಾಲ್‌ವೊಂದರ ಚಿತ್ರಮಂದಿರದಲ್ಲಿ ಒಟ್ಟಿಗೆ ಸಿನಿಮಾ ವೀಕ್ಷಿಸಿದ್ದರು. ಬಳಿಕ  ಜ್ಯೂಸ್ ಕುಡಿಯಲು ಜೊತೆಯಲ್ಲೇ ಹೋಗಿದ್ದರು. ಆಗ, ಅಲ್ಲಿಗೆ ಬಂದ ಯುವಕರ ಗುಂಪೊಂದು ಮಹಮ್ಮದ್‌ ಫಾರಿಶ್‌ ಮೇಲೆ ಏಕಾಏಕಿ ಹಲ್ಲೆ ನಡೆಸಿದೆ’ ಎಂದು ಮೂಲಗಳು ತಿಳಿಸಿವೆ.

‘ಹಲ್ಲೆಗೊಳದಾಗ ಯುವಕನಿಗೆ ಒಂದು ಕಿವಿ ಕೇಳಿಸದಂತಾಗಿದೆ ಎಂದು ತಿಳಿದು ಬಂದಿದೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಯುವಕನಿಗೆ ಒಂದು ಕಿವಿ ಕೇಳಿಸದಂತಾಗಿದೆ ಎಂದು ತಿಳಿದು ಬಂದಿದೆ. ಹಲ್ಲೆ ನಡೆಸಿದ ಮೂವರ ಸುಳಿವು ಸಿಕ್ಕಿದೆ. ಅವರಲ್ಲಿ ಪ್ರದೀಪ್‌ ಎಂಬಾತನನ್ನು ಹಾಗೂ ಇನ್ನೊಬ್ಬನನ್ನು ಬಂಧಿಸಿದ್ದು, ಆತ ಬಾಲಕನೇ ಅಥವಾ ವಯಸ್ಕನೇ ಎಂಬ ಬಗ್ಗೆ ವಯಸ್ಸನ್ನು ಇನ್ನಷ್ಟೇ ಖಾತರಿಪಡಿಸಿಕೊಳ್ಳಬೇಕಿದೆ. ಮೂರನೇ ಆರೋಪಿಯ ಸುಳಿವು ಸಿಕ್ಕಿದ್ದು, ಶೀಘ್ರವೇ ಬಂಧಿಸಲಿದ್ದೇವೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ತಿಳಿಸಿದರು.

‘ಹಲ್ಲೆ ಬಗ್ಗೆ ಮಹಮ್ಮದ್‌ ಫಾರಿಶ್‌ ದೂರು ನೀಡಿದ್ದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕ– ಯುವತಿ ಜೊತೆಯಲ್ಲಿ ಸಿನಿಮಾ ವೀಕ್ಷಿಸಲು ತೆರಳಿದ ಬಗ್ಗೆ ದೂರಿನಲ್ಲಿ ಉಲ್ಲೇಖವಿಲ್ಲ. ಐದಾರು ಮಂದಿಯ ಗುಂಪೊಂದು ಬಸ್‌ ನಿಲ್ದಾಣದ ಬಳಿ ಹಲ್ಲೆ ನಡೆಸಿದೆ ಎಂದು ಮಾತ್ರ ಉಲ್ಲೇಖಿಸಿದ್ದಾರೆ. ಆರೋಪಿಗಳ ಪತ್ತೆಗೆ ಕ್ರಮ ವಹಿಸಿದ್ದೇವೆ’ ಎಂದೂ ಪೊಲೀಸ್‌ ಮೂಲಗಳು ತಿಳಿಸಿವೆ.

ಪೊಲೀಸ್ ಇನ್‌ಸ್ಪೆಕ್ಟರ್‌ ಸುನಿಲ್ ಕುಮಾರ್ ಹಾಗೂ ಪಿಎಸ್‌ಐ ಶ್ರೀಕಾಂತ್ ರಾಥೋಡ್ ನೇತೃತ್ವದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಡಿ.ಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ರಣಹದ್ದು ಡಿಕ್ಕಿ, ಗಾಜು ಪುಡಿಪುಡಿ ! ತುರ್ತು ಭೂಸ್ಪರ್ಶ!

Next Post

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಸರ್ವನಾಶ, ‘ಕಾಂಗ್ರೆಸ್ ಶಾಂತಿಯ ಶತ್ರು, ಅಭಿವೃದ್ಧಿಯ ಶತ್ರು’- ಮಂಗಳೂರಿನಲ್ಲಿ ಮೋದಿ ವಾಗ್ದಾಳಿ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಸರ್ವನಾಶ, ‘ಕಾಂಗ್ರೆಸ್ ಶಾಂತಿಯ ಶತ್ರು, ಅಭಿವೃದ್ಧಿಯ ಶತ್ರು’- ಮಂಗಳೂರಿನಲ್ಲಿ ಮೋದಿ ವಾಗ್ದಾಳಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಸರ್ವನಾಶ, 'ಕಾಂಗ್ರೆಸ್ ಶಾಂತಿಯ ಶತ್ರು, ಅಭಿವೃದ್ಧಿಯ ಶತ್ರು'- ಮಂಗಳೂರಿನಲ್ಲಿ ಮೋದಿ ವಾಗ್ದಾಳಿ

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
58
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d