ಮುಂಡಗೋಡು, ಮೇ 03; ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ. ಯಾವ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂದರು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈ ಕುರಿತು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಜರ್ಮನಿಯಿಂದ ದುಬೈಗೆ ಎಸ್ಕೇಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್ ಎಲ್ಲಿಯಾದರೂ ಎಸ್ಕೇಪ್ ಆಗಲಿ. ಅಲ್ಲಿಂದಲೇ ಹಿಡಿದುಕೊಂಡು ಬರುತ್ತೇವೆ. ಯಾವ ದೇಶದಲ್ಲಿ ಇದ್ದರೂ ಬಿಡುವುದಿಲ್ಲ. ಅಲ್ಲಿಂದಲೇ ಕರೆದುಕೊಂಡು ಬರುತ್ತೇವೆ ಎಂದು ಹೇಳಿದರು.
ಸಂತ್ರಸ್ತರ ರಕ್ಷಣೆ ಮಾಡಲು ಸೂಚಿಸಿದ್ದೇನೆ : ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಸಂತ್ರಸ್ತೆ ಕಿಡ್ನ್ಯಾಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಆ ಹೆಣ್ಣುಮಕ್ಕಳ ಎಲ್ಲಿ ಹೋಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅವರನ್ನು ರಕ್ಷಣೆ ಮಾಡುವಂತೆ ಪೊಲೀಸರಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.
ಈ ಕಾರಣಕ್ಕಾಗಿಯೇ ನಾನು ಪ್ರಜ್ವಲ್ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್ ಅನ್ನು ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೆ. ಪಾಸ್‌ಪೋರ್ಟ್ ಕ್ಯಾನ್ಸಲ್ ಆದ ಮೇಲೆ ಪ್ರಜ್ವಲ್ ವಿದೇಶದಲ್ಲಿ ಇರಲು ಆಗುವುದಿಲ್ಲವಲ್ಲ. ಈ ಕಾರಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಜ್ವಲ್ ಪಾಸ್‌ಪೋರ್ಟ್ ಅನ್ನು ಕ್ಯಾನ್ಸಲ್ ಮಾಡಲಿ ಮಾಡಲಿ. ಪ್ರಜ್ವಲ್ ವಿದೇಶಕ್ಕೆ ಹೋಗಬೇಕಾದರೆ ಕೇಂದ್ರ ಸರ್ಕಾರಕ್ಕೆ ಗೊತ್ತಿರುವುದಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಯಾಕೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಹೋದಾಗ ನಾನು ಬೇರೆಯಲ್ಲ, ಪ್ರಜ್ವಲ್ ರೇವಣ್ಣ ಬೇರೆಯಲ್ಲ ಎಂದಿದ್ದಾರೆ. ರಾಜಕೀಯ ಹಾಗು ಕೃತ್ಯಗಳನ್ನು ಒಟ್ಟಿಗೆ ಮಾಡುತ್ತಾರೆ ಎಂದರು.
ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಲವ್ ಜಿಹಾದ್ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ ಅಮಿತ್ ಶಾ ಅವರು ರಾಜಕೀಯ ಹೇಳಿಕೆ ನೀಡಿದ್ದಾರೆ. ಆರೋಪಿಯನ್ನು ತಕ್ಷಣ ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ ಎಂದರು. ಸುಳ್ಳು ಸುಳ್ಳೇ ಲವ್ ಜಿಹಾದ್ ಎನ್ನುವ ಅಮಿತ್ ಶಾ ಮಣಿಪುರದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ ಎಂದರು. ಇನ್ನೂ ಬಿಜೆಪಿಗೆ ಸಂವಿಧಾನ, ಪ್ರಜಾಪ್ರಭುತ್ವ, ಮೀಸಲಾತಿ, ಐಕ್ಯತೆ, ಸಮಾನತೆಯಲ್ಲಿ ನಂಬಿಕೆ ಇಲ್ಲ . ಅಮಾಯಕರ ಕಣ್ಣೀರು, ಅವರಿಗೆ ಕಿರುಕುಳ ಕೊಟ್ಟು ಸಮಾಜ ಒಡೆಯುವುದು ಬಿಜೆಪಿಗೆ ರೂಢಿಯಾಗಿದೆ ಎಂದರು.
Discover more from Coastal Times Kannada
Subscribe to get the latest posts sent to your email.
Discussion about this post